• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದ ಗುರುವಾರದ ತುಣುಕು ಸುದ್ದಿಗಳು

|

ಬೆಂಗಳೂರು, ನ. 6: ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

ಸಮಯ 10 ಗಂಟೆ : ಮೈಸೂರಿನ ಹನುಮಂತನಗರದಲ್ಲಿ ನಾಲ್ಕು ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪದಲ್ಲಿ ಯುವಕರಿಬ್ಬರಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಥಳಿತಕ್ಕೊಳಗಾದವರನ್ನು ಆಸೀಫ್ ಮತ್ತು ಫೈರೋಜ್‌ ಎಂದು ಗುರುತಿಸಲಾಗಿದೆ.

ಸಮಯ 4 ಗಂಟೆ : ಬಿ.ಎಸ್.ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಬೇಕು ಎಂದು ತೀರ್ಥಹಳ್ಳಿ ಶಾಸಕ ಕಿಮ್ಮನೆ ರತ್ನಾಕರ್ ಆಹ್ವಾನ ನೀಡಿದ್ದಾರೆ.

ಸಮಯ 3 ಗಂಟೆ : ಕೈಗಾರಿಕೆಗಳಿಗೆ ಭೂಮಿ ಸೇರಿದಂತೆ ಇನ್ನಿತರ ಮೂಲ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸದ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಮುಂದೆ ಇಂತಹ ನಿರ್ಲಕ್ಷ್ಯ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. [ಸಿಎಂ ಸಭೆಯ ವಿವರ ಇಲ್ಲಿದೆ]

ಸಮಯ 2 ಗಂಟೆ : ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್‍ಸಿಂಗ್ ರಾಜ್ಯಕ್ಕೆ ಭೇಟಿ ನೀಡಿರುವ ಬೆನ್ನಲ್ಲೇ ಸಚಿವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ದೂರುಗಳ ಸುರಿಮಳೆ ಸುರಿದಿದೆ. ನಿಗಮ ಮಂಡಳಿ ನೇಮಕಾತಿಯಲ್ಲಿ ನಿಷ್ಠಾವಂತರನ್ನು ಕಡೆಗಣಿಸಲಾಗುತ್ತಿದೆ ಎಂದು, ಮಾಜಿ ಶಾಸಕರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದವರಿಗೆ ಅವಕಾಶ ನೀಡಬಾರದೆಂದು ದೂರುಗಳು ಸಲ್ಲಿಕೆ ಯಾಗಿವೆ.

ಸಮಯ 1 ಗಂಟೆ : ಡೀಸೆಲ್ ದರ ಇಳಿಕೆಯಾದರೂ ಬಸ್ ಪ್ರಯಾಣ ದರ ಇಳಕೆ ಮಾಡದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ದಾಸರಹಳ್ಳಿ ಶಾಸಕ ಮುನಿರಾಜು ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಶಾಂತಿನಗರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. [ಬಸ್ ದರ ಇಳಿಕೆ ಇಲ್ಲ]

ಸಮಯ 12 ಗಂಟೆ : 'ನಾನೇನು ತಪ್ಪು ಮಾಡಿಲ್ಲ, ಪ್ರಕರಣದ ತನಿಖೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇನೆ' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿಯ ಮಾರಿಕಾಂಬ ದೇವಾಲಯದಲ್ಲಿ ಪ್ರಮಾಣ ಮಾಡಿದ್ದಾರೆ.

ಸಮಯ 11 ಗಂಟೆ : ನಂದಿತಾ ಅಪಹರಣ ಮತ್ತು ಕೊಲೆ ಖಂಡಿಸಿ ಇಂದು ವಿವಿಧ ಸಂಘಟನೆಗಳು ಸೊರಬ ಮತ್ತು ಶಿವಮೊಗ್ಗ ಬಂದ್‌ಗೆ ಕರೆ ನೀಡಿವೆ. ಸೊರಬ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಮಯ 10 ಗಂಟೆ : ನಂದಿತಾ ಅಪಹರಣ ಮತ್ತು ಕೊಲೆ ಪ್ರಕರಣದ ನಂತರ ಮುಚ್ಚಲಾಗಿದ್ದ ತೀರ್ಥಹಳ್ಳಿ ಪಟ್ಟಣದ ಶಾಲಾ-ಕಾಲೇಜುಗಳು ಇಂದು ಪುನರಾರಂಭಗೊಂಡಿವೆ. ನ.10ರ ತನಕ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. [ನಂದಿತಾ ಸಾವಿಗೆ ಕಂಬನಿ ಮಿಡಿದ ತೀರ್ಥಹಳ್ಳಿ]

ಸಮಯ 9 ಗಂಟೆ : ಟಿಸಿಎಸ್ ಕಂಪನಿಯ ಸಾಫ್ಟವೇರ್‌ ಇಂಜಿನಿಯರ್ ಅನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೂಡಿ ಸರ್ಕಲ್ ಬಳಿ ಪ್ರಜೀತ್ (26) ಅವರ ಕತ್ತುಕೊಯ್ದು ಕೊಲೆ ಮಾಡಲಾಗಿದೆ. ಬುಧವಾರ ರಾತ್ರಿ ದುಷ್ಕರ್ಮಿಗಳು ಈ ಕೊಲೆ ಮಾಡಿದ್ದಾರೆ. ಪ್ರಜೀತ್ ಅಯ್ಯಪ್ಪ ನಗರದ ನಿವಾಸಿ ಎಂದು ತಿಳಿದುಬಂದಿದೆ.

ಸಮಯ 8.40 : ಬಟ್ಟೆ ತೊಳೆಯಲು ಹೋಗಿದ್ದ ವೇಳೆ ತೆರೆದ ಬಾವಿ ಗೋಡೆ ಕುಸಿದು ಬಾವಿಗೆ ಬಿದ್ದು ಮೃತಪಟ್ಟಿದ್ದ ಮಹಿಳೆಯ ಶವವನ್ನು ಅಗ್ನಿ ಶಾಮಕದಳದ ಅಧಿಕಾರಿಗಳು ಹೊರತೆಗೆದಿದ್ದಾರೆ. ವಿಜಯಾಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ಗ್ರಾಮದಲ್ಲಿ ಬುಧವಾರ ಸಂಜೆ ಮಹಿಳೆ ಬಾವಿಗೆ ಬಿದ್ದಿದ್ದಳು. ಮಹಿಳೆ ಜೊತೆ ಬಾವಿಗೆ ಬಿದ್ದಿದ್ದ ಇಬ್ಬರು ಬಾಲಕಿಯರನ್ನು ರಕ್ಷಣೆ ಮಾಡಲಾಗಿತ್ತು.

ಸಮಯ 8 ಗಂಟೆ : ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ನ.16ರಂದು ದೆಹಲಿಗೆ ತೆರಳಲಿದ್ದು, ನಿಗಮ ಮಂಡಳಿಗಳ ನೇಮಕದ ಬಗ್ಗೆ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಜೊತೆ ಉಭಯ ನಾಯಕರು ಸಭೆ ನಡೆಸಲಿದ್ದಾರೆ.

ಸಮಯ 7.30 : ಒಂದನೇ ತರಗತಿ ಬಾಲಕಿ ಮೇಲೆ ದೌರ್ಜನ್ಯ ನಡೆದಿದ್ದ ಇಂದಿರಾ ನಗರದ ಕೇಂಬ್ರಿಡ್ಜ್ ಶಾಲೆ ಗುರುವಾರದಿಂದ ಪುನರಾರಂಭಗೊಂಡಿದೆ. ಪೋಷಕರು ಮಕ್ಕಳನ್ನು ಶಾಲೆಗೆ ಬಿಟ್ಟು ಹೋಗುತ್ತಿದ್ದು, ಆಡಳಿತ ಮಂಡಳಿಯವರು ಮಕ್ಕಳನ್ನು ಸ್ವಾಗತಿಸುತ್ತಿದ್ದಾರೆ. ಶಾಲೆಯ ಬಳಿ ಮಫ್ತಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka top news in brief for the day : Appointment to boards, corporations in Karnataka. CM Siddaramaiah and KPCC president Dr.G.Parameshwar will visit New Delhi on November 16.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more