ಕರ್ನಾಟಕದ ಶುಕ್ರವಾರದ ತುಣುಕು ಸುದ್ದಿಗಳು
ಬೆಂಗಳೂರು, ಅ. 10 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.
ಸಮಯ 12 ಗಂಟೆ : ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನೇಣು ಬಿಗಿದುಕೊಂಡು ವೈದ್ಯೆ ಆತ್ಮಹತ್ಯೆ. [ವೈದ್ಯೆ ಆತ್ಮಹತ್ಯೆ ಇಲ್ಲಿದೆ ವಿವರ]
ಸಮಯ 11 ಗಂಟೆ : ಹುಬ್ಬಳ್ಳಿಯ ಮೂರು ಸಾವಿರ ಮಠಕ್ಕೆ ಪೊಲೀಸ್ ಭದ್ರತೆ, ಉತ್ತರಾಧಿಕಾರಿ ಆಯ್ಕೆ ಬಗ್ಗೆ ವಿವಾದ ಉಂಟಾಗಿರುವುದರಿಂದ ನೂರಾರು ಭಕ್ತರು ಮಠಕ್ಕೆ ಆಗಮಿಸಿದ್ದಾರೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತೆ ನೀಡಲಾಗಿದೆ.
ಸಮಯ 10 ಗಂಟೆ : ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಗಾಯಕಿ ಪ್ರೇಮಲತಾ ದಿವಾಕರ್ ಅವರ ಬೆಂಗಳೂರಿನ ನಿವಾಸಕ್ಕೆ ಪೊಲೀಸ್ ಭದ್ರತೆ ನೀಡಲಾಗಿದೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಪೊಲೀಸ್ ಭದ್ರತೆ ನೀಡುವಂತೆ ಸೂಚಿಸಿದ್ದರು.
ಸಮಯ 9.30 ಗಂಟೆ : ಹಾಸನ ತಾಲೂಕಿನ ಆಲೂರು ಗ್ರಾಮದಲ್ಲಿ ಮತಾಂತರ ಮಾಡುತ್ತಿದ್ದ ಆರೋಪ, 13 ಜನರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು.
ಸಮಯ 9 ಗಂಟೆ : ಹುಬ್ಬಳ್ಳಿಯ ಮೂರು ಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಅವರು ಮಠಕ್ಕೆ ವಾಪಸ್ ಆಗಿದ್ದಾರೆ ಎಂಬ ಸುದ್ದಿ ತಿಳಿದು ನೂರಾರು ಭಕ್ತರು ಮಠಕ್ಕೆ ಆಗಮಿಸಿದ್ದಾರೆ. ಮಠದ ಉತ್ತರಾಧಿಕಾರಿ ವಿವಾದದ ಬಗ್ಗೆ ಶ್ರೀಗಳು ಹೇಳಿಕೆ ನೀಡಬಹುದು ಎಂದು ಭಕ್ತರು ಕಾದು ನಿಂತಿದ್ದಾರೆ.

ಸಮಯ 8.20 : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ಚರ್ಚಿಸಲು ಶುಕ್ರವಾರ ಬೆಂಗಳೂರಿನಲ್ಲಿ ಕನ್ನಡ ಹೋರಾಟಗಾರರು, ಸಾಹಿತಿಗಳು ಮತ್ತು ಚಿಂತಕರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದಾರೆ. ಗಡಿ ವಿವಾದ ಮುಗಿದ ಅಧ್ಯಾಯ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಇದನ್ನು ಸಾಕಷ್ಟು ಸಲ ಸ್ಪಷ್ಪಪಡಿಸಲಾಗಿದೆ. ಗಡಿ ಭಾಗದ ಪ್ರದೇಶಗಳ ರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಹೇಳಿದ್ದಾರೆ.
ಸಮಯ 8 ಗಂಟೆ : ಮೂರು ಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಅವರು ಮಠಕ್ಕೆ ವಾಪಸ್ ಆಗಿದ್ದಾರೆ. ಮಠದ ಉತ್ತರಾಧಿಕಾರಿ ವಿವಾದದ ನಂತರ ತಿಪಟೂರಿಗೆ ತೆರಳಿದ್ದ ಶ್ರೀಗಳು ಇಂದು ಬೆಳಗ್ಗೆ ಮಠಕ್ಕೆ ಆಗಮಿಸಿದ್ದಾರೆ. ಉತ್ತರಾಧಿಕಾರಿ ವಿವಾದದ ಬಗ್ಗೆ ಇಂದು ಸ್ವಾಮೀಜಿ ಅಂತಿಮ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ. [ಮೂರು ಸಾವಿರ ಮಠದ ವಿವಾದಕ್ಕೆ ತೆರೆ?]












Click it and Unblock the Notifications