ಕರ್ನಾಟಕದ ಶುಕ್ರವಾರದ ತುಣುಕು ಸುದ್ದಿಗಳು
ಬೆಂಗಳೂರು, ಅ. 17 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.
ಸಮಯ 2.15 : ಜಯಲಲಿತಾ ಅವರಿಗೆ ಜಾಮೀನು ಸಿಕ್ಕಿದ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತ 1 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸರು ಆದೇಶ ಹೊರಡಿಸಿದ್ದಾರೆ.
ಸಮಯ 1.45 : ಇಂದು ಜಯಲಲಿತಾ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿರುವ ಹಿನ್ನಲೆಯಲ್ಲಿ ಜೈಲಿನ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸರು ಆದೇಶ ಹೊರಡಿಸಿದ್ದಾರೆ. [ಅಮ್ಮನಿಗೆ ಬೇಲ್ ಸಿಕ್ತು]
ಸಮಯ 1.40 : ಇಂಧನ ಸಚಿವ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಹಗರಣದ ತನಿಖೆಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನ.5ಕ್ಕೆ ಮುಂದೂಡಿದೆ. ಪ್ರಕರಣವನ್ನು ವಿಶೇಷ ಪೀಠಕ್ಕೆ ವರ್ಗಾವಣೆ ಮಾಡಲು ಕೋರ್ಟ್ ಆದೇಶ ನೀಡಿದೆ.
ಸಮಯ 12.36 ಗಂಟೆ : ಜಯಲಲಿತಾ ಅವರಿಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನ ಮುಂದೆ ಜಯಾ ಅಭಿಮಾನಿಗಳು ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಸಮಯ 12 ಗಂಟೆ : ಸುಪ್ರೀಂನಲ್ಲಿ ಇಂದು ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದ ಕಾರಾಗೃಹದ ಮುಂದೆ ನೂರಾರು ಅಮ್ಮ ಅಭಿಮಾನಿಗಳು ಜಮಾಯಿಸಿದ್ದಾರೆ. ಇಂದು ಜಾಮೀನು ಸಿಗುತ್ತದೆ ಎಂದು ಎಲ್ಲರೂ ಕಾಯುತ್ತಿದ್ದಾರೆ.
ಸಮಯ 11 ಗಂಟೆ : ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಮಂಗಳವಾರ ಮತ್ತು ಗುರುವಾರ ಸುಮಾರು 6 ತಾಸು ಅಧಿಕಾರಿಗಳು ಶ್ರೀಗಳ ವಿಚಾರಣೆ ನಡೆಸಿದ್ದು, ಇಂದು ಸಹ ವಿಚಾರಣೆಯನ್ನು ಮುಂದುವರೆಸಲಿದ್ದಾರೆ.
ಸಮಯ 10 ಗಂಟೆ : ಮಹಿಳೆಯೊಬ್ಬಳಿಗೆ ಪತಿಯ ಮನೆಯವರು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಸಜೀವವಾಗಿ ದಹಿಸಿದ ಘಟನೆ ಚಿತ್ರದುರ್ಗ ತಾಲೂಕಿನ ಕಸವನಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಸುನಿತಾ (20) ಎಂದು ಗುರುತಿಸಲಾಗಿದೆ. ಮಹಿಳೆ ಪತಿ ಪ್ರದೀಪ ಹಾಗೂ ಕುಟುಂಬದವರು ಸೇರಿ ಈ ಕೃತ್ಯ ನಡೆಸಿದ್ದಾರೆ.

ಸಮಯ 9 ಗಂಟೆ : ಇಂಧನ ಸಚಿವ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಹಗರಣದ ತನಿಖೆಗೆ ಇರುವ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಕೋರಿ ಟಿ.ಜೆ.ಅಬ್ರಾಹಂ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಇಂದು ನಡೆಯಲಿದೆ.
ಸಮಯ 8.24 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜೆ.ಜಯಲಿತಾ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ. [ಜಯಾ ಜಾಮೀನು ಅರ್ಜಿ ಮುಂದೂಡಿಕೆ]
ಸಮಯ 8 ಗಂಟೆ : ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿಚಾರಣೆಯನ್ನು ಸಿಐಡಿ ಪೊಲೀಸರು ಗುರುವಾರ ನಡೆಸಿದ್ದು, ಶುಕ್ರವಾರವೂ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಸಮಯ 7.30 : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಕೆಎಸ್ಆರ್‌ಟಿಸಿ ಡಿಸಿ ವಿ.ವಿ.ಶ್ರೀನಿವಾಸ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಶ್ರೀನಿವಾಸ್ ಅವರ ಮೈಸೂರಿನ ಶ್ರೀರಾಂಪುರ ಮನೆ, ಎಚ್.ಡಿ.ಕೋಟೆ ರಸ್ತೆಯ ತೋಟದ ಮನೆ ಮತ್ತು ಚಿಕ್ಕೋಡಿಯ ಸಾಯಿನಗರದಲ್ಲಿರುವ ಮನೆ ಮೇಲೆ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಮುಂದುವರೆದಿದೆ.












Click it and Unblock the Notifications