ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಗುರುವಾರದ ತುಣುಕು ಸುದ್ದಿಗಳು

|
Google Oneindia Kannada News

ಬೆಂಗಳೂರು, ಅ. 30 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

ಸಮಯ 3 ಗಂಟೆ : ನಿಗಮ-ಮಂಡಳಿ ನೇಮಕಾತಿ ವಿಳಂಬಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನಡುವಿನ ಭಿನ್ನಮತವೇ ಕಾರಣ ಎಂದು ಕಾಂಗ್ರೆಸ್ ನಾಯಕರಗುಂಪೊಂದು ಹೈ ಕಮಾಂಡ್‌ ನಾಯಕರಿಗೆ ದೂರು ನೀಡಿದೆ.

ಸಮಯ 2 ಗಂಟೆ : ಕೋಲಾರದಲ್ಲಿ ಎರಡು ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಜಿಲ್ಲಾಧಿಕಾರಿ ಡಿ.ಕೆ.ರವಿ ವರ್ಗಾವಣೆ ಖಂಡಿಸಿ ಇಂದು ಕೋಲಾರ ಬಂದ್‌ಗೆ ಕರೆ ನೀಡಲಾಗಿದೆ. ಈ ಸಮಯದಲ್ಲಿ ಸಂಚರಿಸುತ್ತಿದ್ದ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಸಮಯ 1 ಗಂಟೆ : ಯುವತಿಯ ಮೇಲೆ ಅತ್ಯಾಚಾರ ನಡೆದ ಘಟನೆ ಮೈಸೂರಿನ ಬಿಳಿಕೆರೆ ಬಳಿ ನಡೆದಿದೆ. ಯುವತಿಗೆ ಡ್ರಾಪ್‌ ಕೊಡೊದಾಗಿ ಕರೆದೊಯ್ದು ಅತ್ಯಾಚಾರ ವೆಸಗಲಾಗಿದೆ ಎಂದು ಆರೋಪಿಸಲಾಗಿದ್ದು, ಸಂತೋಷ್ ಎನ್ನುವ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸಮಯ 12 ಗಂಟೆ : ಮಹದೇವಪುರ ಸಮೀಪದ ಸಿಎಂಆರ್‌ಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ ಕೊಠಡಿಯಲ್ಲಿ ಮೃತಪಟ್ಟಿದ್ದಾನೆ. ಜಾರ್ಖಂಡ್ ಮೂಲದ ವಿವೇಕ್ ಕುಮಾರ್ ಸಿಂಗ್ (19) ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಸಮಯ 11 ಗಂಟೆ : ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಅಂತಿಮಗೊಳಿಸುವ ಕಾರ್ಯ ನಡೆಯುತ್ತಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು ಇಂದು ಮಧ್ಯಾಹ್ನ ಪಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಿ ಪಡೆಯುವ ಸಾಧ್ಯತೆ ಇದೆ. 59 ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಕೊಡಲು ಸರ್ಕಾರ ನಿರ್ಧರಿಸಿದೆ.

ಸಮಯ 10 ಗಂಟೆ : ಬೆಂಗಳೂರಿನ ಜಯನಗರ, ಕೆಂಪೇಗೌಡ ನಗರಗಳ ವ್ಯಾಪ್ತಿಯಲ್ಲಿನ ರೌಡಿಗಳ ಮನೆ ಮೇಲೆ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ನೇತೃತ್ವದಲ್ಲಿ ಪೊಲೀಸರ ದಾಳಿ.

Karnataka

ಸಮಯ 9 ಗಂಟೆ : ಬೆಂಗಳೂರಿನ ಶಂಕರಮಠ ಬಳಿ ಮೂರು ಅಂತಸ್ತಿನ ಕಟ್ಟಡ ಕುಸಿದುಬಿದ್ದಿದೆ. ಬಾಲಜಿ ಎಂಬುವವರಿಗೆ ಸೇರಿದ ಹಳೆಯ ಕಟ್ಟಡ ಸುಂದರ್ ಎಂಬುವವರ ಮನೆ ಮೇಲೆ ಬಿದ್ದಿದ್ದು, ಮನೆಯಲ್ಲಿ ಮಲಗಿದ್ದ ಬಾಲಕನಿಗೆ ಗಾಯಗಳಾಗಿವೆ. ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಧಾವಿಸಿದ್ದಾರೆ.

ಸಮಯ 8 ಗಂಟೆ : ರಶ್ಮಿ ಮಹೇಶ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಪ್ರಾದೇಶಿಕ ಆಯುಕ್ತ ಹುದ್ದೆಯನ್ನು ಹೆಚ್ಚುವರಿಯಾಗಿ ಹೊಂದಿದ್ದ ರಶ್ಮಿ ಮಹೇಶ್ ಅವರನ್ನು ಆ ಹುದ್ದೆಯಿಂದ ಮುಕ್ತಗೊಳಿಸಿ, ಚಾಮರಾಜನಗರ ಜಿಲ್ಲಾಧಿಕಾರಿಯಾಗಿರುವ ಎಂ.ಎಂ.ಕುಂಜಪ್ಪ ಅವರಿಗೆ ಈ ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. [ಐಎಎಸ್ ಅಧಿಕಾರಿ ರಶ್ಮಿ ಮಹೇಶ್ ಪತ್ರಿಕಾಗೋಷ್ಠಿ]

ಸಮಯ 7.30 : ಸವದತ್ತಿ ತಾಲೂಕಿನಲ್ಲಿ ಭೀಕರ ಅಪಘಾತ ಸೇತುವೆಗೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು

English summary
Karnataka top news in brief for the day : The CID has begun investigating the attack on Director General (DG) of the Administrative Training Institute (ATI) Rashmi V. Mahesh. On Thursday CID police arrest two accused on the case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X