Congress Government: ಸಿಎಂ, ಡಿಸಿಎಂ ಜೊತೆಗೆ 10 ಜನ ಪ್ರಮಾಣ ವಚನ!? ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಚರ್ಚೆಯಾಗಿದ್ದೇನು?
ಬೆಂಗಳೂರು, ಮೇ 18: ರಾಜ್ಯದಲ್ಲಿ ಭರ್ಜರಿಗೆ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್ ಹೈಕಮಾಂಡ್ ದೊಡ್ಡ ಸಮಸ್ಯೆಯಾಗಿದ್ದು, ಕೊನೆಗೂ ತೆರೆ ಬಿದ್ದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿ ಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಮೇ 20 ರಂದು ಮಧ್ಯಾನ್ಹ 12;30 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇನ್ನೂ ಹಲವು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಆಯ್ಕೆಯಂತೆಯೇ ಸಚಿವ ಸ್ಥಾನಕ್ಕಾಗಿ ಹಲವು ಜನ ಶಾಸಕರು ಲಾಬಿ ನಡೆಸಿದ್ದು, ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡ ನಾಯಕರು ಮಂತ್ರಿಗಿರಿಗಾಗಿ ಒತ್ತಡ ಹಾಕುತ್ತಿದ್ದಾರೆ. ಇನ್ನೂ ಹೈಕಮಾಂಡ್ ನಾಯಕರ ಮಟ್ಟದಲ್ಲಿ ಉತ್ತಮ ಸಂಬಂಧ ಹೊಂದಿರುವ ನಾಯಕರು ಸಹ ಮಂತ್ರಿ ಸ್ಥಾನ ಹಾಗೂ ಉತ್ತಮ ಖಾತೆಗಾಗಿ ಲಾಬಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಇತ್ತ ಹೈಕಮಾಂಡ್ ನಾಯಕರ ಸೂಚನೆಯಂತೆ ಶುಕ್ರವಾರ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳುತ್ತಿದ್ದು, ಲೋಕಸಭಾ ಚುನಾವಣಾ ಹಿನ್ನಲೆ ಸಮರ್ಥ ಸಂಪುಟ ರಚನೆಗೆ ಹೈಕಮಾಂಡ್ ಸೂಚನೆ ನೀಡಲಿದೆ. ಈಗಾಗಲೇ ಮುಖ್ಯಮಂತ್ರಿ ಆಯ್ಕೆಯ ಮಾತ್ರವಲ್ಲದೆ ನೂತನ ಸಚಿವರ ಆಯ್ಕೆ ಕೂಡ ಹೈಕಮಾಂಡ್ ನಡೆಸಲಿದೆ.
2024 ರ ಲೋಕಸಭಾ ಚುನಾವಣೆಯ ಮೇಲೆ ಕಣ್ಣೀಟ್ಟಿರುವ ಕಾಂಗ್ರೆಸ್ ಹೈಕಮಾಂಡ್ ಜಿಲ್ಲಾವಾರು ಹಾಗೂ ಜಾತಿ, ಸಮುದಾಯವಾರು ಲೆಕ್ಕಾಚಾರದ ಮೇಲೆ ಮಂತ್ರಿ ಮಂಡಲವನ್ನ ರಚಸಿಲು ತಂತ್ರಗಾರಿಕೆಯನ್ನ ಕಾಂಗ್ರೆಸ್ ಹಾಕಿಕೊಂಡಿದ್ದು, ಸಿದ್ದರಾಮಯ್ಯ ಸಿಎಂ, ಡಿ ಕೆ ಶಿವಕುಮಾರ್ ಡಿಸಿಎಂ ಆಗಿ ಶನಿವಾರ ಪ್ರಮಾಣ ವಚನ ಸ್ವೀಕರ ಕಅರ್ಯಕ್ರಮದಲ್ಲಿ 10 ಜನ ನಾಯಕರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ದಲಿತ ನಾಯಕ ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕರಾಗಿರುವ ಡಾ. ಜಿ ಪರಮೇಶ್ವರ್, ರಾಷ್ಟ್ರರಾಜಕಾರಣದಿಂದ ರಾಜ್ಯ ರಾಜಕಾರಣಕ್ಕೆ ಎಂಟ್ರಿಕೊಟ್ಟಿರುವ ದೇವನಹಳ್ಳಿ ಶಾಸಕ ಕೆ ಎಸ್ ಮುನಿಯಪ್ಪ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಕೆ.ಜೆ ಜಾರ್ಜ್ ಅವರು ಮೇ 20 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇನ್ನು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಎಂ ಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಈಶ್ವರ್ ಖಂಡ್ರೆ, ಹಳಿಯಾಳ ಶಾಸಕರಾದ ಆರ್ ವಿ ದೇಶಪಾಂಡೆ, ಮುಸ್ಲಿಂ ಸಮುದಾಯದ ನಾಯಕರಾದ ಜಮೀರ್ ಅಹ್ಮದ್ , ರಾಮಲಿಂಗರೆಡ್ಡಿ, ಯು ಟಿ ಖಾದರ್ , ಕೃಷ್ಣಭೈರೇಗೌಡ, ಅಜಯ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತ ಮುಖ್ಯಮಂತ್ರಿ ಆಯ್ಕೆ ಹಾಗೂ ಡಿಸಿಎಂ ಆಯ್ಕೆಯ ಬಳಿಕ ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.












Click it and Unblock the Notifications