ಬೇಳೆ ಕಾಳು ದಾಸ್ತಾನು ಇಟ್ಟುಕೊಂಡವರ ಮೇಲೆ ಜಪ್ತಿ ಕ್ರಮ
ಬೆಂಗಳೂರು, ಅಕ್ಟೋಬರ್. 26: ಬೇಳೆ ಕಾಳುಗಳ ಮೇಲಿನ ಅಕ್ರಮ ಸಂಗ್ರಹಣೆ ಮೇಲಿನ ದಾಳಿ ನಿರಂತರವಾಗಿ ಮುಂದುವರಿದಿದೆ. ಕಲಬುರಗಿ ಜಿಲ್ಲೆಯಲ್ಲಿ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು 1,441 ಕ್ವಿಂಟಲ್ ಬೇಳೆ ವಶಪಡಿಸಿಕೊಂಡಿದ್ದಾರೆ.
ಚಿಲ್ಲರೆ ವಹಿವಾಟುದಾರರು, ಸಗಟು ವ್ಯಾಪಾರಸ್ಥರು ಹಾಗೂ ದಾಲ್ಮಿಲ್ಗಳ ಮೇಲೆ ಅಧಿಕಾರಿಗಳು ಭಾನುವಾರ ಸಹ ದಾಳಿ ನಡೆಸಿ ಅಕ್ರಮ ಮತ್ತು ಹೆಚ್ಚುವರಿ ದಾಸ್ತಾನು ವಶಪಡಿಸಿಕೊಂಡಿದ್ದಾರೆ. ಅಧಿಕಾರಿಗಳ 11 ತಂಡಗಳು ಸತತ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಹೇಳಿದರು.[ತೊಗರಿ ಬೇಳೆಗೆ ಬಂಗಾರದ ಬೆಲೆ ಬರಲು ಕಾರಣವೇನು?]

ಚಿಲ್ಲರೆ ಮಾರುಕಟ್ಟೆಯಲ್ಲಿ ತೊಗರಿ ಮತ್ತು ಉದ್ದು ದ್ವಿಶತಕ ಬಾರಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕಾರ್ಯನಿರತವಾಗಿದ್ದು ಬೇಳೆ ಕಾಳು ದರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತಿದೆ. ಕಳೆದ ಒಂದು ವಾರದಿಂದ ದೇಶಾದ್ಯಂತ ದಾಳಿ ನಡೆಸಲಾಗುತ್ತಿದೆ.
13 ರಾಜ್ಯಗಳಲ್ಲಿ 6,077 ದಾಳಿ ನಡೆಸುವ ಮೂಲಕ ಸುಮಾರು 75,000 ಟನ್ ಬೇಳೆಕಾಳುಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ 74,846 ಟನ್ನಷ್ಟು ಬೇಳೆಕಾಳುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಪೈಕಿ ಮಹಾರಾಷ್ಟ್ರ ವೊಂದರಿಂದಲೇ 46,397 ಟನ್ ವಶಪಡಿಸಿಕೊಳ್ಳಲಾಗಿದೆ. ಇನ್ನು ಕರ್ನಾಟಕದಲ್ಲಿ 8,755 ಟನ್, ಬಿಹಾರದಲ್ಲಿ 4,933 ಟನ್, ಛತ್ತೀಸ್ಗಢದಲ್ಲಿ 4,530 ಟನ್, ತೆಲಂಗಾಣದಲ್ಲಿ 2,546 ಟನ್, ಮಧ್ಯ ಪ್ರದೇಶದಲ್ಲಿ 2,295 ಟನ್ ಮತ್ತು ರಾಜಸ್ಥಾನದಲ್ಲಿ 2,222 ಟನ್ಗಳಷ್ಟು ಬೇಳೆಕಾಳುಗಳನ್ನು ವಶಪಡಿಸಿಕೊಳ್ಳಲಾಗಿದೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ












Click it and Unblock the Notifications