Get Updates
Get notified of breaking news, exclusive insights, and must-see stories!

ಕರ್ನಾಟಕ: ವಿಪಕ್ಷ ನಾಯಕನ ಸ್ಥಾನ ಲಿಂಗಾಯತರಿಗೆ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಒಕ್ಕಲಿಗರಿಗೆ?ಯಾರಿಗೆ ಚಾನ್ಸ್!

ಬೆಂಗಳೂರು,ಜುಲೈ 03: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತು ಮುಖಭಂಗಕ್ಕೀಡಾಗಿರುವ ಬಿಜೆಪಿ ಇದೀಗ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಸಿದ್ದತೆಯನ್ನ ನಡೆಸುತ್ತಿದೆ.

ಲೋಕಸಭಾ ಚುನಾವಣೆ ಸೇರಿದಂತೆ ಸಾಲು ಸಾಲು ಚುನಾವಣೆ ಹಾಗೂ ಕಾಂಗ್ರೆಸ್‌ ಸರ್ಕಾರವನ್ನ ಎದುರಿಸುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್‌ ಅಳೆದು ತೂಗಿ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆಗೆ ಮುಂದಾಗಿದ್ದು, ಜಾತಿ ಲೆಕ್ಕಾಚಾರವನ್ನ ಹಾಕಿಕೊಂಡಿದೆ.

Karnataka Opposition leader Post to Lingayat and BJP President to Vokkaliga

ಹೌದು, ಸದ್ಯಕ್ಕೆ ರಾಜ್ಯಾಧ್ಯಕ್ಷರಾಗಿರುವ ನಳಿನ್‌ ಕುಮಾರ್ ಕಟೀಲು ಅವರ ಅವಧಿ ಮುಗಿದಿದ್ದು ಮತ್ತೆ ಅವರನ್ನೇ ಮುಂದುವರಿಸುವ ಉದ್ದೇಶ ಬಿಜೆಪಿ ಹೈಕಮಾಂಡ್‌ಗೆ ಮುಂದೆ ಇಲ್ಲ. ಅಲ್ಲದೇ ರಾಜ್ಯ ವಿಧಾನಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತಿರುವ ಕಟೀಲ್‌ ಅವರು ಸಹ ಜವಾಬ್ದಾರಿಯಿಂದ ಕಳಚಿಕೊಳ್ಳಲು ರೆಡಿಯಾಗಿದ್ದಾರೆ. ಇತ್ತ ರಾಜ್ಯಾಧ್ಯಕ್ಷ ಕಟೀಲ್‌ ವಿರುದ್ದ ಹಲವು ಬಿಜೆಪಿಯ ನಾಯಕರೇ ಅಸಮಾಧಾನವನ್ನ ವ್ಯಕ್ತಪಡಿಸಿದೆ.

ಇತ್ತ ಮೂರು ವರ್ಷಗಳ ಕಾಲ ಆಡಳಿತ ನಡೆಸಿ ಅರುವತ್ತೈದು ಸ್ಥಾನಕ್ಕೆ ಕುಸಿದಿರುವ ಬಿಜೆಪಿ ಚುನಾವಣೆ ಮುಗಿದು ಎರಡು ತಿಂಗಳಾಗುತ್ತಾ ಬಂದಿದ್ರೂ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ಮಾಡಿಲ್ಲ. ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸರಿ ಹಲವು ಹೆಸರುಗಳು ರೇಸ್‌ ನಲ್ಲಿವೆ. ಜಾತಿ ಲೆಕ್ಕಾಚಾರದ ಮೇಲೆ ವಿಪಕ್ಷ ಸ್ಥಾನಕ್ಕೆ ಲಿಂಗಾಯತರನ್ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗರಿಗೆ ನೀಡುವ ಚಿಂತನೆ ಹೈಕಮಾಂಡ್‌ ನಾಯಕರ ಮಟ್ಟದಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ಈ ಪೈಕಿ ಒಬ್ಬರು ವಿಪಕ್ಷ ನಾಯಕ ಹಾಗೂ ಇನ್ನೊಬ್ಬರು ರಾಜ್ಯಾಧ್ಯಕ್ಷ ಆಗಲಿದ್ದಾರೆ. ಈಗಾಗಲೇ ಏಳು ಮಂದಿ ನಾಯಕರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದ್ದು, ಆರ್.ಅಶೋಕ್, ಸಿ.ಟಿ. ರವಿ, ಶೋಭಾ ಕರಂದ್ಲಾಜೆ, ಬಿ.ವೈ ವಿಜಯೇಂದ್ರ, ಸೋಮಣ್ಣ, ಬಸವರಾಜ ಬೊಮ್ಮಾಯಿ, ಶ್ರೀರಾಮುಲು ಹಾಗೂ ಕಾರ್ಕಳದ ಶಾಸಕ ಸುನಿಲ್ ಕುಮಾರ್ ಹೆಸರು ಈ ಲಿಸ್ಟ್‌ನಲ್ಲಿದೆ ಎನ್ನಲಾಗುತ್ತಿದೆ.

ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಸೈಡ್‌ಲೈನ್ ಮಾಡಿದ ಕಾರಣಕ್ಕಾಗಿ ರಾಜ್ಯದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ ಎಂಬ ಕಾರಣಕ್ಕಾಗಿ ಈಗ ಅವರ ಪುತ್ರ ವಿಜಯೇಂದ್ರ ಹೆಸರನ್ನು ರಾಜ್ಯಾಧ್ಯಕ್ಷ ಹುದ್ದೆಗೆ ಪರಿಗಣಿಸಬೇಕು ಎಂದು ಪ್ರಬಲ ಒತ್ತಾಯ ಕೇಳಿ ಬರುತ್ತಿದೆ. ಅದರ ಪಕ್ಷದಲ್ಲಿ ಬಹಳ ಹಿರಿಯರಾಗಿರುವ ಹಾಗೂ ಒಕ್ಕಲಿಗ ನಾಯಕರಾದ ಸಿ.ಟಿ. ರವಿ, ಆರ್ ಅಶೋಕ್, ಶೋಭಾ ಕರಂದ್ಲಾಜೆ ಅವರಿಗೆ ಜವಾಬ್ದಾರಿ ನೀಡಿದರೆ ಪಕ್ಷಕ್ಕೆ ಒಳ್ಳೆಯದಾಗಲಿದೆ ಎಂದು ಹೇಳಲಾಗುತ್ತಿದೆ.

ಪ್ರತಿ ಬಾರಿಯೂ ಬಿಜೆಪಿಯಲ್ಲಿ ಜಾತಿ ರಾಜಕಾರಣವೂ ಮುಖ್ಯವಾಗುತ್ತದೆ. ಈ ಬಾರೀಯೂ ಸಹ ಪ್ರಬಲ ಸಮುದಾಯ ಲಿಂಗಾಯತರಿಗೆ ಒಂದು ಹುದ್ದೆಯನ್ನು ನೀಡಲೇ ಬೇಕು. ಇನ್ನೊಂದು ಹುದ್ದೆಯನ್ನು ಒಕ್ಕಲಿಗರಿಗೆ ಒಕ್ಕಲಿಗರಿಗೆ ನೀಡುವ ಚಿಂತನೆ ನಡೆದಿದ್ದು, ಹಲವು ರಾಜ್ಯಗಳಲ್ಲಿನ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಹಿನ್ನೆಲೆ ಮೋದಿ ಕ್ಯಾಬಿನೆಟ್‌ ಪುನರ್‌ ರಚನೆಯಾಗಲಿದ್ದು, ಕರ್ನಾಟಕ ರಾಜ್ಯದ ಕೇಂದ್ರ ಸಚಿವರಿಗೆ ಕೊಕ್‌ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ನಾಲ್ಕು ಜನ ಕೇಂದ್ರ ಸಚಿರಿದ್ದು, ಆ ಪೈಕಿ ಒಕ್ಕಲಿಗ ಸಮುದಾಯದ ಮಹಿಳಾ ನಾಯಕಿ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನ ನೀಡುವ ಪ್ಲಾನ್‌ ಗೆ ಬಿಜೆಪಿ ಮುಂದಾಗಿದೆ ಎಂದು ಹೇಳಲಾಗಿದೆ.

ಇನ್ನೂ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಮತ್ತು ಚಾಮರಾಜನಗರದಲ್ಲಿ ಸ್ಪರ್ಧೆ ಮಾಡುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಸವಾಲಿಗೆ ತೆಗೆದುಕೊಂಡಿದದ್ದ ವಿ ಸೋಮಣ್ಣ, ಚುನಾವಣಾ ಸೋಲಿನ ಬಳಿಕ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣೀಟ್ಟಿದ್ದು, ಹೈಕಮಾಂಡ್‌ ಮುಂದೆ ತಮ್ಮ ಆಸೆಯನ್ನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಸೋಮಣ್ಣ ಹೆಸರು ಕೂಡ ಪ್ರಬಲವಾಗಿ ಕೇಳಿ ಬರ್ತಿದೆ ಒಂದು ಅವಕಾಶವನ್ನ ಕೊಟ್ಟು ನೋಡಿ ಪಕ್ಷವನ್ನ ಕಟ್ಟುತ್ತೇನೆ ಎಂದು ವಿ ಸೋಮಣ್ಣ ಹೈಕಮಾಂಡ್ ನಾಯಕರ ಮುಂದೆ ತಮ್ಮ ಆಸೆಯನ್ನ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕನ ಸ್ಥಾನ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಕೊಟ್ಟರೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಲಿಂಗಾಯತರನ್ನು ಬಿಟ್ಟು ಒಕ್ಕಲಿಗರಿಗೆ ನೀಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+