KSRTC: ಮಹಿಳಾ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, ಜನವರಿ 1ರಿಂದ ಮುಟ್ಟಿನ ರಜೆ ಸೌಲಭ್ಯ ಜಾರಿ
ಬೆಂಗಳೂರು: ರಾಜ್ಯ ಸರ್ಕಾರ ತಿಂಗಳ ಹಿಂದಷ್ಟೇ ರಾಜ್ಯ ಮಹಿಳಾ ನೌಕರರಿಗೆ ತಿಂಗಳಲ್ಲಿ ಒಂದು ದಿನ ಋತುಚಕ್ರದ (ಮುಟ್ಟಿನ) ರಜೆ ನೀಡಿ ಆದೇಶಿಸಿತ್ತ. ಆ ಸೌಲಭ್ಯವನ್ನೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮಹಿಳಾ ನೌಕರರಿಗೂ ವಿಸ್ತರಣೆ ಮಾಡಿದೆ. 2026 ಜನವರಿ 1ರಿಂದಲೇ ತಿಂಗಳಲ್ಲಿ ಒಂದು ದಿನ ಋತುಚಕ್ರದ ರಜೆ ಪಡೆಯಲು ಅವಕಾಶ ಕಲ್ಪಿಸಿ ಮಂಗಳವಾರ (ಡಿಸೆಂಬರ್ 23) ಆದೇಶ ಹೊರಡಿಸಿದೆ. ಈ ಮೂಲಕ ಮಹಿಳಾ ನೌಕರರಿಗೆ ಹೊಸ ವರ್ಷದ ಗುಡ್ ನ್ಯೂಸ್ ನೀಡಲಾಗಿದೆ.
ಕರ್ನಾಟಕ ಸರ್ಕಾರವು ಸಾರ್ವಜನಿಕ 04 ಸಾರಿಗೆ ನಿಗಮಗಳಲ್ಲಿ ಕಾರ್ಯ ನಿರ್ವಹಿಸುವ ಮಹಿಳಾ ಸರ್ಕಾರಿ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆಯ ಸೌಲಭ್ಯ ನೀಡಿದೆ. ಯಾವುದೇ ಪ್ರಮಾಣ ಪತ್ರ ಇಲ್ಲದೇ ಕೇವಲ ಷರತ್ತು ಮತ್ತು ನಿಬಂಧನೆಗೊಳಪಟ್ಟು ಮಹಿಳಾ ಸರ್ಕಾರಿ ನೌಕರರಿಗೂ ರಜೆ ಮಂಜೂರು ಮಾಡುವಂತೆ ತನ್ನ ಆದೇಶದಲ್ಲಿ ತಿಳಿಸಿದೆ.

ಸದರಿ ಆದೇಶವನ್ನು ನಿಗಮದಲ್ಲಿ ಅಳವಡಿಸಿಕೊಳ್ಳಲಾಗಿದೆ. ಅದರಂತೆ 2026 ಜನವರಿ 1ರಿಂದ ಸಾರಿಗೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು ಈ ಕೆಳಗಿನ ಷರತ್ತು ನಿಬಂಧನೆಗೆ ಒಳಪಟ್ಟು ಪಡೆಯಲು ಅವಕಾಶ ಇದೆ. ಷರತ್ತುಗಳು ಯಾವುವು?
ಮುಟ್ಟಿನ ರಜೆ ಮಂಜೂರಿನ ಷರತ್ತುಗಳು
1. ಋತುಚಕ್ರ ಹೊಂದಿರುವ 18 ರಿಂದ 52 ವಯಸ್ಸಿನ ನಿಗಮದ ಮಹಿಳಾ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ.
2. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆ ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.
3. ಈ ರಜೆಯನ್ನು ರಜೆ/ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸತಕ್ಕದ್ದು.
4. ಋತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸತಕ್ಕದ್ದಲ್ಲ. ಸದರಿ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು ಹಾಗೂ ಮುಂದಿನ ತಿಂಗಳಿಗೆ ವಿಸ್ತರಿಸಲು (carry over) ಅವಕಾಶ ಇರುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.
ಮುಟ್ಟಿನ ರಜೆ: ಜನವರಿ 5ಕ್ಕೆ ಕೋರ್ಟ್ ವಿಚಾರಣೆ
ರಾಜ್ಯ ಸರ್ಕಾರ ಕೆಲವು ವಾರಗಳ ಹಿಂದೆ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಮಹಿಳಾ ನೌಕರಿಗೆ ಮುಟ್ಟಿನ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ನೀಡಿ ಆದೇಶಿಸಿತ್ತು. ವಿವಿಧ ಖಾಸಗಿ, ಕಾರ್ಪೊರೇಟ್ ಸೇರಿದಂತೆ ಹಲವಾರು ಸಂಸ್ಥೆಗಳ ಅರ್ಹ ಮಹಿಳಾ ನೌಕರರಿಗೆ ಇದು ಗುಡ್ ನ್ಯೂಸ್ ಆಗಿತ್ತು. ಆದರೆ ಈ ನಿಯಮವನ್ನು ಹೋಟೆಲ್ ಹಾಗೂ ಇತರ ಸಂಸ್ಥೆಗಳಲ್ಲಿ ಜಾರಿ ಮಾಡಿಲ್ಲವೆಂದು ಆಕ್ಷೇಪಿಸಿ ಬೆಳಗಾವಿ ಜಿಲ್ಲೆಯ ಹೋಟೆಲ್ ಉದ್ಯೋಗಿಯೊಬ್ಬರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾದ ಉದ್ದಿಮೆಗಳಲ್ಲಿ ವೇತನ ಸಹಿತ ಈ ಮುಟ್ಟಿನ ರಜೆ ನೀಡುವ ಸಂಬಂಧ ರೂಪಿಸಿರುವ ನಿಯಮ ಪರಿಣಾಮಕಾರಿ ಜಾರಿಗೆ ನಿರ್ದೇಶಿಸುವಂತೆ ಕೋರಿ ಅರ್ಜಿ ಸಲ್ಲಿಕೆ ಆಗಿತ್ತು. ಧಾರವಾಡ ಪೀಠದಲ್ಲಿ ನಡೆದ ಅರ್ಜಿ ವಿಚಾರಣೆ ಬಳಿಕ ಹೈಕೋರ್ಟ್ ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.
ಮುಟ್ಟಿನ ರಜೆ ಕುರಿತು ಉದ್ದಿಮೆಗಳಿಗೆ ಹೊರಡಿಸಿರುವ ನಿಯಮ ಸಂವಹನೆಯನ್ನು ದಾಖಲೆ ರೂಪದಲ್ಲಿ ಸಲ್ಲಿಸುವಂತೆ ಸೂಚಿಸಿದ ಹೈಕೋರ್ಟ್ ರಾಜ್ಯ ಕಾರ್ಮಿಕ ಇಲಾಖೆ ಆಯುಕ್ತರು, ಪ್ರಧಾನ ಕಾರ್ಯದರ್ಶಿಗಳು, ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ರಾಜ್ಯ ಮಹಿಳಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿತು. ಬಳಿಕ ಕೋರ್ಟ್ 2026 ಜನವರಿ 05ರಂದು ಅರ್ಜಿ ವಿಚಾರಣೆ ಮುಂದೂಡಿತು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications