ಪಂಚಾಯಿತಿ ಚುನಾವಣೆಗಳಿಗೆ ಸರ್ಕಾರ ಸಜ್ಜು: ವರ್ಷಾಂತ್ಯದೊಳಗೆ ತಾಪಂ, ಜಿಪಂ, ಗ್ರಾಪಂ ಎಲೆಕ್ಷನ್

ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳ ಜೊತೆಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೂ ಈ ವರ್ಷದ ಅಂತ್ಯದೊಳಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ನಿಯಮ 72ರ ಅಡಿಯಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರು ಪ್ರಸ್ತಾಪಿಸಿದ ಗಮನಸೆಳೆಯುವ ಸೂಚನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಪರವಾಗಿ ಉತ್ತರಿಸಿದ ಯತೀಂದ್ರ ಸಿದ್ದರಾಮಯ್ಯ, ಪಂಚಾಯಿತಿ ಚುನಾವಣೆಗಳ ಕುರಿತು ಸರ್ಕಾರದ ಸಿದ್ಧತೆಗಳನ್ನು ವಿವರಿಸಿದರು.

Karnataka Panchayat Polls Taluk Zilla and Expired Gram Panchayats to Go to Elections by Year-End

ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಪ್ರಸ್ತುತ ಪ್ರಗತಿಯಲ್ಲಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಹಸ್ತಾಂತರಿಸಲಾಗುವುದು. ನಂತರ ಚುನಾವಣಾ ಆಯೋಗದ ಪ್ರಕ್ರಿಯೆಯಂತೆ ಬಹುತೇಕ ಈ ವರ್ಷದ ಅಂತ್ಯದ ವೇಳೆಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಸರ್ಕಾರ ಉದ್ದೇಶಿಸಿದೆ ಎಂದು ಅವರು ತಿಳಿಸಿದರು.

ಅವಧಿ ಮುಗಿದ ಗ್ರಾಪಂಗಳಿಗೂ ಚುನಾವಣೆ

ಇದೇ ವೇಳೆ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳ ಚುನಾವಣೆಯ ಬಗ್ಗೆಯೂ ಯತೀಂದ್ರ ಸಿದ್ದರಾಮಯ್ಯ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಚುನಾವಣೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಜಿಲ್ಲಾಡಳಿತಗಳು ತಮ್ಮ ಹಂತದ ಸಿದ್ಧತೆಗಳನ್ನು ಪೂರ್ಣಗೊಳಿಸಿದ ಬಳಿಕ ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ತಾಲೂಕು, ಜಿಲ್ಲಾ ಹಾಗೂ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳ ಚುನಾವಣಾ ಪ್ರಕ್ರಿಯೆಗಳನ್ನು ಸಾಧ್ಯವಾದಷ್ಟು ಶೀಘ್ರ ಪೂರ್ಣಗೊಳಿಸಿ, ಈ ವರ್ಷದ ಅಂತ್ಯದೊಳಗೆ ಚುನಾವಣೆಗಳನ್ನು ನಡೆಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

50:50 ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಆದೇಶ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಮಾನ್ಯ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ, ಉನ್ನತ ಮಟ್ಟದ ತಾಂತ್ರಿಕ ಸಮಿತಿಯು ನೀಡಿರುವ ವರದಿಯನ್ವಯ ತಕ್ಷಣದಿಂದ ಜಾರಿಗೆ 2023ರ ಮಾರ್ಚ್ 14ರ ನಿರ್ದೇಶನವನ್ನು ಉಲ್ಲಂಘಿಸಿ ಮಾಡಲಾದ ಎಲ್ಲಾ 50:50 ಬದಲಿ ನಿವೇಶನಗಳ ಹಂಚಿಕೆಯನ್ನು ರದ್ದುಪಡಿಸಿ ಆದೇಶಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಸರ್ಕಾರದ ಪತ್ರ ಸಂಖ್ಯೆ 'ನಅಇ 71 ಮೈಅಪ್ರಾ 2023(ಇ), ದಿನಾಂಕ: 14-03-2023' ರ ನಿರ್ದೇಶನಗಳನ್ನು ಉಲ್ಲಂಘಿಸಿ ಹಂಚಿಕೆ ಮಾಡಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು/ಜಿಲ್ಲಾಧಿಕಾರಿಗಳು, ಆಯುಕ್ತರು ಹಾಗೂ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರವು ಪ್ರಮುಖ ನಿರ್ದೇಶನಗಳನ್ನು ನೀಡಿದೆ. ದಿನಾಂಕ 14-03-2023ರ ಸರ್ಕಾರದ ನಿರ್ದೇಶನವನ್ನು ಉಲ್ಲಂಘಿಸಿ ಮಾಡಲಾಗಿರುವ ಎಲ್ಲಾ 50:50 ಬದಲಿ ನಿವೇಶನ ಹಂಚಿಕೆ ಆದೇಶಗಳನ್ನು ತಕ್ಷಣವೇ ರದ್ದುಪಡಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+