ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ
ರಾಜ್ಯದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2026ನೇ ಸಾಲಿನ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆಯ (Karnataka PGCET 2026) ಅಧಿಸೂಚನೆಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಎಂಬಿಎ, ಎಂಸಿಎ, ಎಂಇ, ಎಂಟೆಕ್ ಮತ್ತು ಎಂ.ಆರ್ಕಿಟೆಕ್ಚರ್ ಮುಂತಾದ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 23 ರಿಂದ ಏಪ್ರಿಲ್ 8 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್.ಪ್ರಸನ್ನ (ಐಎಎಸ್) ತಿಳಿಸಿದ್ದಾರೆ.
ಕೆಇಎ ಬಿಡುಗಡೆ ಮಾಡಿರುವ ವೇಳಾಪಟ್ಟಿಯ ಪ್ರಕಾರ, ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಮಾರ್ಚ್ 23 ರಂದು ಪ್ರಾರಂಭವಾಗಲಿದ್ದು, ಏಪ್ರಿಲ್ 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅಥವಾ ಚಲನ್ ಡೌನ್‌ಲೋಡ್ ಮಾಡಿಕೊಂಡು ನಿಗದಿತ ಬ್ಯಾಂಕ್‌ಗಳ ಮೂಲಕ ಅರ್ಜಿ ಶುಲ್ಕ ಪಾವತಿಸಲು ಏಪ್ರಿಲ್ 10 ರವರೆಗೆ ಕಾಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿದ ಬಳಿಕ, ವಿವಿಧ ಕೋರ್ಸ್‌ಗಳಿಗೆ ಮೇ 23 ಮತ್ತು 24 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ತಮಗೆ ಹತ್ತಿರವಿರುವ ಪರೀಕ್ಷಾ ಕೇಂದ್ರಗಳನ್ನು ಅರ್ಜಿ ಸಲ್ಲಿಸುವಾಗಲೇ ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆಗಳೇನು?
ಪಿಜಿಸಿಇಟಿ ಪರೀಕ್ಷೆಗೆ ಹಾಜರಾಗಲು ಬಯಸುವ ಅಭ್ಯರ್ಥಿಗಳು ಯುಜಿಸಿ (UGC) ಯಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಮೂರು ಅಥವಾ ನಾಲ್ಕು ವರ್ಷಗಳ ಪದವಿ (Bachelor's Degree) ಪಡೆದಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ತಮ್ಮ ಪದವಿಯಲ್ಲಿ ಕನಿಷ್ಠ ಶೇ. 50 ರಷ್ಟು ಅಂಕಗಳನ್ನು ಹೊಂದಿರಬೇಕು. ಇನ್ನು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಸೇರಿದಂತೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅಂಕಗಳಲ್ಲಿ ರಿಯಾಯಿತಿ ನೀಡಲಾಗಿದ್ದು, ಕನಿಷ್ಠ ಶೇ. 45 ರಷ್ಟು ಅಂಕಗಳನ್ನು ನಿಗದಿಪಡಿಸಲಾಗಿದೆ.
ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಂತಿಮ ವರ್ಷದ ಪದವಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಸಹ ಈ ಪಿಜಿಸಿಇಟಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆದರೆ, ಸೀಟು ಹಂಚಿಕೆಯ ಕೌನ್ಸಿಲಿಂಗ್ ನಡೆಯುವ ಸಮಯದಲ್ಲಿ ಅವರು ತಮ್ಮ ಉತ್ತೀರ್ಣರಾದ ಅಂಕಪಟ್ಟಿಗಳನ್ನು ಕಡ್ಡಾಯವಾಗಿ ಪ್ರಾಧಿಕಾರಕ್ಕೆ ಹಾಜರುಪಡಿಸಬೇಕಾಗುತ್ತದೆ. ಕರ್ನಾಟಕ ಸರ್ಕಾರದ ಮೀಸಲಾತಿ ನಿಯಮಗಳ ಅನ್ವಯ, ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಸಂವಿಧಾನದ ಪರಿಚ್ಛೇದ 371(ಜೆ) ಅಡಿಯಲ್ಲಿ ವಿಶೇಷ ಮೀಸಲಾತಿ ಸೌಲಭ್ಯ ಒದಗಿಸಲಾಗಿದೆ.
ಕರ್ನಾಟಕ PGCET-2026: ಅರ್ಜಿ ಸಲ್ಲಿಸುವ ಹಂತಗಳು
1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ kea.kar.nic.in ಗೆ ಮಾತ್ರ ಭೇಟಿ ನೀಡಿ.
2. ನೋಂದಣಿ (Registration): ಮುಖಪುಟದಲ್ಲಿ ಕಾಣಿಸುವ 'PGCET-2026 Online Application' ಲಿಂಕ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ಹೆಸರು, ಮೊಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸದಂತಹ ಮೂಲಭೂತ ಮಾಹಿತಿಗಳನ್ನು ನೀಡಿ ಮೊದಲು ನೋಂದಾಯಿಸಿಕೊಳ್ಳಿ.
3. ಲಾಗಿನ್ ಪ್ರಕ್ರಿಯೆ: ನೋಂದಣಿ ಯಶಸ್ವಿಯಾದ ನಂತರ ನಿಮ್ಮ ಮೊಬೈಲ್‌ಗೆ ಬರುವ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
4. ಅರ್ಜಿ ಭರ್ತಿ: ಅರ್ಜಿ ನಮೂನೆಯಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು (ಶೈಕ್ಷಣಿಕ ಮತ್ತು ವೈಯಕ್ತಿಕ) ಸಂಪೂರ್ಣವಾಗಿ ಭರ್ತಿ ಮಾಡಿ.
5. ದಾಖಲೆಗಳ ಅಪ್‌ಲೋಡ್: ನಿಗದಿತ ಅಳತೆಯಲ್ಲಿರುವ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಅಭ್ಯರ್ಥಿಯ ಸಹಿ,ಎಡಗೈ ಹೆಬ್ಬೆರಳಿನ ಗುರುತಿನ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡುವುದು ಕಡ್ಡಾಯ
6. ಶುಲ್ಕ ಪಾವತಿ: ನಿಮ್ಮ ಪ್ರವರ್ಗಕ್ಕೆ (Category) ಅನುಗುಣವಾಗಿ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಅಥವಾ UPI ಮೂಲಕ ಸುರಕ್ಷಿತವಾಗಿ ಪಾವತಿಸಿ.
7. ಸ್ವೀಕೃತಿ ಪತ್ರ (Acknowledgment): ಅರ್ಜಿ ಸಲ್ಲಿಕೆ ಪೂರ್ಣಗೊಂಡ ನಂತರ, ಭವಿಷ್ಯದ ಉಲ್ಲೇಖಕ್ಕಾಗಿ ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ಅಥವಾ ಸ್ವೀಕೃತಿ ಪತ್ರವನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಿ.
#PGCET-2026: #MBA, #MCA, #ME, https://t.co/H9m3mFnuIL, #M.ARCHITECTURE ಕೋರ್ಸ್ (ಪಿಜಿಸಿಇಟಿ-2026) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದ್ದು, ಮಾ.23ರಿಂದ ಏಪ್ರಿಲ್ 8ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) March 20, 2026
ಶುಲ್ಕ ಪಾವತಿಗೆ ಏ.10 ಕೊನೆ ದಿನ. ವಿವಿಧ ಕೋರ್ಸ್ ಗಳ ಲಿಖಿತ ಪರೀಕ್ಷೆ ಮೇ 23 ಮತ್ತು 24… pic.twitter.com/Csop82ZXkh
ಪರೀಕ್ಷಾ ಮಾದರಿ ಹೇಗಿರುತ್ತದೆ?
ಪರೀಕ್ಷೆಗೆ ಇನ್ನು ಕೇವಲ ಎರಡು ತಿಂಗಳು ಮಾತ್ರ ಬಾಕಿ ಇರುವುದರಿಂದ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಸಿದ್ಧತೆಯನ್ನು ಇಂದಿನಿಂದಲೇ ಚುರುಕುಗೊಳಿಸಬೇಕಿದೆ. ಪರೀಕ್ಷೆಯು ಆಫ್‌ಲೈನ್ ಮಾದರಿಯಲ್ಲಿ (OMR Sheet ಆಧಾರಿತ) ನಡೆಯಲಿದ್ದು, ಪ್ರತಿ ಸರಿಯಾದ ಉತ್ತರಕ್ಕೆ ಒಂದು ಅಂಕ ನಿಗದಿಪಡಿಸಲಾಗಿರುತ್ತದೆ ಮತ್ತು ಯಾವುದೇ ನಕಾರಾತ್ಮಕ ಅಂಕಗಳು (Negative Marking) ಇರುವುದಿಲ್ಲ. ಪರೀಕ್ಷಾ ಪಠ್ಯಕ್ರಮ ಮತ್ತು ಹಿಂದಿನ ವರ್ಷಗಳ ಹಳೆಯ ಪ್ರಶ್ನೆಪತ್ರಿಕೆಗಳು ಕೆಇಎ ವೆಬ್‌ಸೈಟ್‌ನಲ್ಲಿ ಉಚಿತವಾಗಿ ಲಭ್ಯವಿದ್ದು, ಅಭ್ಯರ್ಥಿಗಳು ಅವುಗಳ ಸದುಪಯೋಗ ಪಡಿಸಿಕೊಂಡು ಉತ್ತಮ ಅಂಕ ಗಳಿಸಲು ಯೋಜಿಸಬಹುದು.
ಕೊನೆಯ ಗಳಿಗೆಯಲ್ಲಿ ಉಂಟಾಗುವ ತಾಂತ್ರಿಕ ದೋಷಗಳು ಅಥವಾ ಸರ್ವರ್ ಸಮಸ್ಯೆಗಳನ್ನು ತಪ್ಪಿಸಲು, ವಿದ್ಯಾರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಆದಷ್ಟು ಬೇಗ ಅರ್ಜಿ ಸಲ್ಲಿಸುವಂತೆ ಪ್ರಾಧಿಕಾರವು ಕಿವಿಮಾತು ಹೇಳಿದೆ. ಪ್ರವೇಶ ಪತ್ರ (Hall Ticket) ಬಿಡುಗಡೆಯ ನಿಖರ ದಿನಾಂಕ ಮತ್ತು ಪರೀಕ್ಷೆಗೆ ಸಂಬಂಧಿಸಿದ ಇತರ ಹೆಚ್ಚಿನ ಮಾಹಿತಿಗಳಿಗಾಗಿ ಅಭ್ಯರ್ಥಿಗಳು ನಿಯಮಿತವಾಗಿ ಕೆಇಎ ಅಧಿಕೃತ ಜಾಲತಾಣವನ್ನು ಪರಿಶೀಲಿಸುತ್ತಿರಬೇಕು ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
-
ದ್ವಿತೀಯ PUC ಪರೀಕ್ಷೆ-2: ನೋಂದಣಿ ಆರಂಭ, ಯಾರಿಗೆ ಶುಲ್ಕ ವಿನಾಯಿತಿ? ಇಲ್ಲಿದೆ ಮಾಹಿತಿ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ -
CBSE ಫಲಿತಾಂಶಕ್ಕಾಗಿ ಕಾಯಬೇಡಿ: ಈಗಲೇ ನಿಮ್ಮ ಡಿಜಿಲಾಕರ್ ಖಾತೆ ತೆರೆಯಿರಿ, ಕ್ಷಣಾರ್ಧದಲ್ಲಿ ರಿಸಲ್ಟ್ ಪಡೆಯಿರಿ -
CBSE 10ನೇ ತರಗತಿ ಫಲಿತಾಂಶ 2026: ನಾಳೆ ಪ್ರಕಟಗೊಳ್ಳಲಿದೆಯೇ ರಿಸಲ್ಟ್? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications