Govt Employees: ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಸೂಪರ್‌ ಮಾರ್ಕೆಟ್

ಬೆಂಗಳೂರು, ಅಕ್ಟೋಬರ್ 15: ಪೊಲೀಸ್ ಮತ್ತು ಸೇನಾ‌ ಕ್ಯಾಂಟೀನ್ ಮಾದರಿಯಲ್ಲೇ ಕರ್ನಾಟಕ ರಾಜ್ಯ ಸರಕಾರಿ ನೌಕರರಿಗೆ ದಿನನಿತ್ಯದ ಬದುಕಿಗೆ ಅಗತ್ಯವಿರುವ ಪ್ರತಿಯೊಂದು ವಸ್ತುವೂ ರಿಯಾಯಿತಿ ದರದಲ್ಲಿ ಸಿಗಬೇಕು. ಈ ಉದ್ದೇಶದೊಂದಿಗೆ ಸರ್ಕಾರಿ ಸ್ವಾಮ್ಯದ ಎಂಎಸ್‌ಐಎಲ್‌ ವತಿಯಿಂದ ಸೂಪರ್‌ ಮಾರ್ಕೆಟ್‌ ಆರಂಭಿಸುವ ಚಿಂತನೆ ಇದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದರು.

ಈ ಸಂಬಂಧ ಅವರು ಖನಿಜ ಭವನದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ ಕುಮಾರ ಸೇರಿದಂತೆ ಇತರ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಪ್ರಾಥಮಿಕ ಸುತ್ತಿನ ಸಭೆ ನಡೆಸಿದರು.

Karnataka Plans Supermarket for Govt Employees on Police Canteen Model MB Patil

ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದ ಪೊಲೀಸ್, ಅರೆ ಸೇನಾ ಪಡೆಗಳ ನೌಕರರಿಗೆ ಈ ರೀತಿಯ ಕ್ಯಾಂಟೀನ್‌ ಸೌಲಭ್ಯವಿದೆ. ರಾಜ್ಯದಲ್ಲಿ 6 ಲಕ್ಷ ಸರಕಾರಿ ನೌಕರರಿದ್ದಾರೆ. ಅವರ ಕುಟುಂಬಗಳ ಹಿತದೃಷ್ಟಿಯಿಂದ ಇಂಥದ್ದೊಂದು ಉಪಕ್ರಮ ಆರಂಭಿಸುವುದು ನಮ್ಮ ಚಿಂತನೆಯಾಗಿದೆ. ಇದಕ್ಕೆ ಸಬ್ಸಿಡಿ ಅಥವಾ ತೆರಿಗೆ ವಿನಾಯಿತಿ ಪಡೆದುಕೊಳ್ಳುವುದು ಹೇಗೆಂದು ಆರ್ಥಿಕ ಇಲಾಖೆಯ ಜತೆ ಚರ್ಚಿಸಲಾಗುವುದು. ಒಟ್ಟಿನಲ್ಲಿ ಇಂತಹ ಸೂಪರ್‌ ಮಾರ್ಕೆಟ್‌ ಮಳಿಗೆ ಆರಂಭಿಸುವ ಸಾಧ್ಯಾ ಸಾಧ್ಯತೆ ಕುರಿತು ತಮಗೆ ಒಂದು ತಿಂಗಳಲ್ಲಿ ವಿಸ್ತೃತ ವರದಿ ಸಲ್ಲಿಸುವಂತೆ ಎಂಎಸ್‌ಐಎಲ್‌ಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಉದ್ದೇಶಿತ ಎಂಎಸ್‌ಐಎಲ್‌ ಸೂಪರ್‌ ಮಾರ್ಕೆಟ್‌ನಲ್ಲಿ ನಮ್ಮ ಸರ್ಕಾರಿ ನೌಕರರ ದಿನನಿತ್ಯದ ಬದುಕಿಗೆ ಬೇಕಾದ ದವಸ-ಧಾನ್ಯದಿಂದ ಹಿಡಿದು ಎಫ್‌ಎಂಸಿಜಿ ವಲಯದಲ್ಲಿ ಬರುವ ಪ್ರತಿಯೊಂದು ಪದಾರ್ಥವೂ ರಿಯಾಯಿತಿ ದರದಲ್ಲಿ ಸಿಗುವಂತಾಗಬೇಕು. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ 4-5 ಮಳಿಗೆಗಳನ್ನು ತೆರೆಯುವ ಆಲೋಚನೆ ಇದೆ. ನಂತರದ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲೂ ಇಂತಹ ಸೌಲಭ್ಯ ವಿಸ್ತರಣೆಗೆ ಮುಂದಾಗಬಹುದು. ಒಟ್ಟಿನಲ್ಲಿ ಅಧ್ಯಯನ ವರದಿ ಬಂದ ನಂತರ ತೀರ್ಮಾನಿಸಲಾಗುವುದು ಎಂದರು.

ಇದರಿಂದ ಸರಕಾರಿ ಸ್ವಾಮ್ಯದ ಎಂಎಸ್‌ಐಎಲ್ ಚಟುವಟಿಕೆಯೂ ವಿಸ್ತಾರಗೊಂಡು, ಆದಾಯದ ಮೂಲವೊಂದು ಸಿಗಲಿದೆ. ಅಲ್ಲದೆ, ಲಕ್ಷಾಂತರ ಸರಕಾರಿ ನೌಕರರ ಕುಟುಂಬಗಳಿಗೂ ಇದರಿಂದ ಪ್ರಯೋಜನವಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರಿ ನೌಕರರ ಸಂಘಟನೆಗಳ ಜತೆ ಮಾತುಕತೆ ನಡೆಸುವಂತೆಯೂ ಅವರು ಸೂಚಿಸಿದ್ದಾರೆ.

ಎಂಎಸ್‌ಐಎಲ್‌ನ ಚಟುವಟಿಕೆಗಳು ಈಗ ಸೀಮಿತ ಪ್ರಮಾಣದಲ್ಲಿವೆ. ಇದಕ್ಕೆ ಮತ್ತಷ್ಟು ಕಸುವು ತುಂಬಿ, ಆರ್ಥಿಕವಾಗಿ ಮತ್ತಷ್ಟು ಸದೃಢಗೊಳಿಸಬೇಕೆಂಬ ಆಲೋಚನೆ ತಮ್ಮದಾಗಿದೆ. ಇದರಿಂದ ಅಪಾರ ಸಂಖ್ಯೆಯಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+