ಪೈಪ್‌ಲೈನ್ ಮೂಲಕ ವೈದ್ಯಕೀಯ ಕಾಲೇಜುಗಳಿಗೆ ಆಮ್ಲಜನಕ ಸರಬರಾಜು

ಬೆಂಗಳೂರು, ಜುಲೈ 22: ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಪೈಪ್‌ಲೈನ್‌ಗಳ ಮೂಲಕ ಆಮ್ಲಜನಕ ಪೂರೈಕೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.

Recommended Video

      ಅಪ್ಪನ ಹಾದಿಯನ್ನೇ ಹಿಡಿದ ಮಗ | Oneindia Kannada

      ರಾಜ್ಯದ 17 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕೊವಿಡ್ 19 ರೋಗಿಗಳ ಚಿಕಿತ್ಸೆಗಾಗಿ 4736 ಹಾಸಿಗೆಗಳನ್ನು ಮೀಸಲಿಡಲಾಗಿದೆ.ಕೆಲವೆಡೆ ಆಮ್ಲಜನಕ ಕೊರತೆಯ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕೂಡಲೇ ಆಕ್ಸಿಜನ್ ಪೈಪ್‌ಲೈನ್ ವ್ಯವಸ್ಥೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ.

      ಹಾಗೆಯೇ ಕೊರೊನಾ ಚಿಕಿತ್ಸೆಗೆ ಬಳಸುವ ರೆಮ್‌ಡೆಸಿವಿರ್ ಔಷಧವನ್ನು ಖಾಸಗಿ ಆಸ್ಪತ್ರೆಗೆ ಸರ್ಕಾರದಿಂದಲೇ ನೀಡಲು ನಿರ್ಧರಿಸಿದೆ. ಈ ಮೂಲಕ ತುರ್ತು ಔಷಧವನ್ನು ಬ್ಲ್ಯಾಕ್ ಮಾರ್ಕೆಟ್‌ನಲ್ಲಿ ಮಾರಾಟ ಮಾಡುವುದನ್ನು ನಿಯಂತ್ರಿಸಲು ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

      Karnataka Plans To Link Oxygen Pipelines To Govt Medical Colleges

      ಕೊರೊನಾ ಪತ್ತೆ ಪರೀಕ್ಷೆಯ ಗೊಂದಲ ನಿವಾರಿಸಿ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರವು ಕ್ರಮ ಕೈಗೊಂಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾವೈರಸ್ ಪರೀಕ್ಷಾ ದರವನ್ನು ಇಳಿಸಿದೆ.

      ಒಂದು ಕೊರೊನಾ ಪರೀಕ್ಷೆಗೆ 4 ಸಾವಿರಕ್ಕಿಂತಲೂ ಹೆಚ್ಚು ಹಣ ಪಡೆಯುತ್ತಿದ್ದ ಖಾಸಗಿ ಆಸ್ಪತ್ರೆಗಳು ಈಗ ಗರಿಷ್ಠ 3 ಸಾವಿರ ರೂ ಪಡೆಯುವಂತೆ ಸರ್ಕಾರ ದರ ನಿಗದಿಪಡಿಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಈ ವಿಚಾರವನ್ನು ತಿಳಿಸಿದ್ದಾರೆ.

      ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಕೊವಿಡ್-19 ಪರೀಕ್ಷೆ ನಡೆಸುವವರು 3 ಸಾವಿರ ರೂ ನೀಡಬೇಕು. ಆದರೆ, ಸರ್ಕಾರದಿಂದ ಪರೀಕ್ಷೆಗೆ ಶಿಫಾರಸು ಪಡೆದು ಹೋದವರಿಗೆ ಖಾಸಗಿ ಆಸ್ಪತ್ರೆಗಳು 2 ಸಾವಿರ ರೂ ಮಾತ್ರ ಚಾರ್ಜ್ ಮಾಡುವಂತೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

      ಹೊಸದಾಗಿ 16-ಆರ್‌ಟಿ - ಪಿಸಿಆರ್‌ ಮತ್ತು 15- ಆಟೋಮೇಟೆಡ್‌ ಆರ್‌ಎನ್‌ಎ ಎಕ್ಸ್​ಟ್ರಾಕ್ಷನ್‌ ಲ್ಯಾಬ್ ಸ್ಥಾಪನೆ ಮಾಡಲಾಗುವುದು. ಇದರಿಂದ ಈಗ ಲಭ್ಯವಿರುವ ಲ್ಯಾಬ್‌ಗಳ ಜತೆಗೆ ಹೆಚ್ಚುವರಿಯಾಗಿ ಸೇರ್ಪಡೆ ಆಗಲಿವೆ. ಟೆಸ್ಟ್‌ಗಳ ಸಂಖ್ಯೆ ಸಹಜವಾಗಿ ಹೆಚ್ಚಾಗಲಿದ್ದು, ದಿನಕ್ಕೆ ಐವತ್ತು ಸಾವಿರ ಟೆಸ್ಟ್‌ಗಳ ಗುರಿ ತಲುಪಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+