• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಗತ್ಯವಿರುವ ರಾಜ್ಯಗಳಿಗೆ ಹೆಚ್ಚುವರಿ ವಿದ್ಯುತ್ ಮಾರಾಟಕ್ಕೆ ರಾಜ್ಯ ಸರ್ಕಾರ ನಿರ್ಧಾರ

|
Google Oneindia Kannada News

ಬೆಂಗಳೂರು, ಜೂನ್ 03: ಅಗತ್ಯವಿರುವ ರಾಜ್ಯಗಳಿಗೆ ಹೆಚ್ಚುವರಿ ವಿದ್ಯುತ್ ಮಾರಾಟ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯ 30,562.56 ಮೆಗಾ ವ್ಯಾಟ್‌ನಷ್ಟಿದೆ. ಶೇ 50ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸಲಾಗುತ್ತಿದೆ. ರಾಜ್ಯದಲ್ಲಿ ಸದ್ಯ ವಿದ್ಯುತ್ ಕೊರತೆ ಇರುವುದಿಲ್ಲ. ಜಲಾಶಯಗಳಲ್ಲಿ ಸಾಕಷ್ಟು ನೀರು ಇರುವುದರಿಂದ ಹಾಗೂ ಈ ಬಾರಿ ಮುಂಗಾರು ಸಾಮಾನ್ಯವಾಗಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ವಿದ್ಯುತ್ ಕೊರತೆ ಆಗದು ಎಂದು ಹೇಳಿದ್ದಾರೆ.

ಭಾರತದ ಮೇಲೆ ಚೀನಾ 'ವಿದ್ಯುತ್ ಯುದ್ಧ'!: ಆಘಾತಕಾರಿ ಸಂಗತಿ ಬಹಿರಂಗಭಾರತದ ಮೇಲೆ ಚೀನಾ 'ವಿದ್ಯುತ್ ಯುದ್ಧ'!: ಆಘಾತಕಾರಿ ಸಂಗತಿ ಬಹಿರಂಗ

ನೀರಾವರಿ ಪಂಪ್ ಸೆಟ್ ಗಳಿಗೆ 7 ಗಂಟೆ ವಿದ್ಯುತ್ ಪೂರೈಕೆಗೆ ಅನುವಾಗುವಂತೆ ಸ್ಟೇಷನ್‌ಗಳು ಹಾಗೂ ಫೀಡರ್‌ಗಳನ್ನು ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಕೆಲಸ 2022ರ ಮಧ್ಯಭಾಗದಲ್ಲಿ ಪೂರ್ಣಗೊಳ್ಳಲಿದೆ. ಪ್ರಸ್ತುತ 26 ಸ್ಟೇಷನ್‌ಗಳು ಹಾಗೂ 182 ಫೀಡರ್‌ಗಳ ಕಾಮಗಾರಿ ಪೂರ್ಣಗೊಂಡಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ವಿದ್ಯುತ್ ಪ್ರಸರಣ ಜಾಲದಲ್ಲಿ ವಿದ್ಯುತ್ ಸೋರಿಕೆ ಪ್ರಮಾಣ ಅತಿ ಕಡಿಮೆ ಸುಮಾರು ಶೇ 3ರಷ್ಟು ಮಾತ್ರ ಇದೆ. ಆ ಮೂಲಕ, ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದಾಗ, ವಿದ್ಯುತ್ ಪ್ರಸರಣ ಜಾಲದಲ್ಲಿ ವಿದ್ಯುತ್ ಸೋರಿಕೆ ಅತಿ ಕಡಿಮೆ, ಅಂದರೆ, ಸುಮಾರು ಶೇ.3 ರಷ್ಟು ಇದ್ದು, ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ.

ವಿತರಣಾ ಜಾಲದಲ್ಲಿಯೂ ವಿದ್ಯುತ್ ಸೋರಿಕೆ ಶೇ.5ಕ್ಕಿಂತ ಕಡಿಮೆಗೊಳಿಸಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು. ರಾಜ್ಯದ ಒಟ್ಟಾರೆ ವಿದ್ಯುತ್ ಬಳಕೆಯ ಶೇ 18ರಷ್ಟು ಕೈಗಾರಿಕೆಗಳಿಗೆ ಬಳಕೆಯಾಗುತ್ತಿದೆ. ಕೈಗಾರಿಕೆಗಳಿಗೆ ನಿರಂತರವಾಗಿ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವಲ್ಲಿ ತಲೆದೋರುವ ತೊಡಕು ನಿವಾರಿಸಲು ಕೈಗಾರಿಕಾ ಇಲಾಖೆ ಹಾಗೂ ಇಂಧನ ಇಲಾಖೆ ಅಧಿಕಾರಿಗಳು ಕಾಲ-ಕಾಲಕ್ಕೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು' ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.

ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಬೇಡಿಕೆಗಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ರಾಜ್ಯಗಳು ಹಾಗೂ ಸಂಸ್ಥೆಗಳಿಗೆ ಮಾರಾಟ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Recommended Video

   KSRTC ಪದ ಬಳಸುವ ಹಕ್ಕು ಈಗ ಕೇರಳಕ್ಕೆ ಮಾತ್ರ | Oneindia Kannada

   ರಾಜ್ಯದ ವಿದ್ಯುತ್ ಪೂರೈಕೆ ಸ್ಥಿತಿಗತಿ ಹಾಗೂ ಕೈಗಾರಿಕೆಗಳಿಗೆ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಬೇಡಿಕೆಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ ದೀರ್ಘಾವಧಿ ಒಪ್ಪಂದದ ಮೂಲಕ ಮಾರಾಟಕ್ಕೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

   English summary
   Karnataka is likely to sell the surplus power it generates to other, needy states or companies by signing medium or long-term agreements.Chief Minister BS Yediyurappa on Wednesday directed Energy Department officials to take measures to sell surplus power.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X