Get Updates
Get notified of breaking news, exclusive insights, and must-see stories!

Karnataka Polic: ದೇಶದಲ್ಲೇ ಮೊದಲು ಕರ್ನಾಟಕದಲ್ಲಿ ನಾವು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಿದ್ದೇವೆ: ಡಾ.ಜಿ ಪರಮೇಶ್ವರ್

Karnataka Polic: ಕರ್ನಾಟಕ ಪೊಲೀಸ್ ಇಲಾಖೆ ದೇಶದಲ್ಲೇ ಅತ್ಯಂತ ಉತ್ತಮವಾದ ಪೊಲೀಸ್ ವ್ಯವಸ್ಥೆ ಎಂಬ ಬಿರುದಿಗೆ ಪಾತ್ರವಾಗಿದೆ ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಕೋರಮಂಗಲದ ಕೆಎಸ್‌ಆರ್‌ಪಿ ಪರೇಡ್ ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಪದಕ ಪುರಸ್ಕೃತರನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.

1965ರ ಏಪ್ರಿಲ್ 2ರಂದು ಪೊಲೀಸ್ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ರಾಜ್ಯ ಪೊಲೀಸರನ್ನು ಒಟ್ಟುಗೂಡಿಸಿ, ಶಿಸ್ತಿನಿಂದ ನಡೆಸುವ ಸಂದರ್ಭವನ್ನು ಪೊಲೀಸ್ ಧ್ವಜ ದಿನವನ್ನಾಗಿ ಆಚರಿಸಲಾಗುತ್ತಿದೆ. ರಾಜ್ಯದಲ್ಲಿ ಶಾಂತಿ, ನೆಮ್ಮದಿ, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಶ್ರಮ ಪಡುತ್ತಿದ್ದಾರೆ. ಅದರಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯಾ ಜಸ್ಟೀಸ್ ವರದಿ ಪ್ರಕಾರ ದೇಶದಲ್ಲಿ ನೊಂದವರಿಗೆ ನ್ಯಾಯ ನೀಡುವುದರಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಉಲ್ಲೇಖ ಮಾಡಲಾಗಿದೆ. ವಿಶೇಷವಾಗಿ ನ್ಯಾಯ ಒದಗಿಸುವುದರಲ್ಲಿ ಪೊಲೀಸ್ ಇಲಾಖೆ ಉತ್ತಮವಾಗಿ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Karnataka Polic

ಕೇಂದ್ರ ಗೃಹ ಇಲಾಖೆಯು ರಾಯಚೂರು ಜಿಲ್ಲೆಯ ಕವಿತಾಳ ಪೊಲೀಸ್ ಠಾಣೆ ದೇಶದ 3ನೇ ಅತ್ಯುತ್ತಮ ಪೊಲೀಸ್ ಠಾಣೆ ಎಂದು ಗುರುತಿಸಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು, ಕವಿತಾಳ ಪೊಲೀಸ್ ಠಾಣೆಯಂತೆಯೇ ಅತ್ಯುತ್ತಮ ಪೊಲೀಸ್ ಠಾಣೆಗಳಾಗಬೇಕು ಎಂದು ಸರ್ಕಾರ ಬಯಸುತ್ತದೆ ಎಂದಿದ್ದಾರೆ.

ಮುಂದುವರಿದು ಪೊಲೀಸ್ ಇಲಾಖೆಯು ಪ್ರತಿನಿತ್ಯ ಸವಾಲುಗಳನ್ನು ಎದುರಿಸುತ್ತದೆ. ಸವಾಲುಗಳ ಮಧ್ಯೆ ಕಳೆದ ಮೂರು ವರ್ಷಗಳಿಂದ ನಮ್ಮ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಶಾಂತಿ ಕಾಪಾಡುವುದರಲ್ಲಿ ಯಶಸ್ವಿಯಾಗಿದೆ. ರಾಜ್ಯಕ್ಕೆ ಬಂಡಾವಾಳ ಹೂಡಿಕೆಗೆ ಬರುವ ಜನ ಶಾಂತಿ, ನೆಮ್ಮದಿಯನ್ನು ಬಯಸುತ್ತಾರೆ. ರಾಜ್ಯದಲ್ಲಿ ಸೌಹಾರ್ದಯುತ ವಾತಾವರಣ ಸೃಷ್ಟಿ ಮಾಡುವುದರಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ ಎಂದು ಹೇಳಿದರು.

ಕರ್ತವ್ಯದ ವೇಳೆ ಇಲಾಖೆಗೆ ಚ್ಯುತಿ ಬಾರದಂತೆ ಅತ್ಯಂತ ಕ್ಷಿಪ್ರವಾಗಿ ಅಪರಾಧಗಳನ್ನು ಪತ್ತೆ ಹಚ್ಚಿರುವುದನ್ನು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತೋರಿಸಿಕೊಟ್ಟಿದೆ. ಕಾರ್ಯದಕ್ಷತೆಗೆ, ಸಾಮಾರ್ಥ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ. ರಾಜ್ಯದಲ್ಲಿ ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ಮಟ್ಟ ಹಾಕಲು ನಮ್ಮ ಸರ್ಕಾರವು‌ ಮುಂದಾಗಿದ್ದು, ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಸಾವಿರಾರು ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ಪತ್ತೆಹಚ್ಚುವ ಮೂಲಕ ದಂಧೆಯಲ್ಲಿ ತೊಡಗಿದ ಅನೇಕ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Karnataka Police ದೇಶದಲ್ಲೇ ಸೈಬರ್ ಕ್ರೈಂ ಪ್ರಕರಣ ಹೆಚ್ಚಳ

ಇನ್ನು ದೇಶದಲ್ಲಿ ಸೈಬರ್ ಕ್ರೈಂ ಹಾವಳಿ ಹೆಚ್ಚಾಗುತ್ತಿದೆ. ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕವೂ ಸೈಬರ್ ಕಮಾಂಡ್ ಯೂನಿಟ್ ಸ್ಥಾಪಿಸಿ, ಡಿಜಿ ಶ್ರೇಣಿಯ ಅಧಿಕಾರಿಯನ್ನು ನೇಮಿಸಿದೆ. ಸೈಬರ್ ಕಮಾಂಡ್ ಯೂನಿಟ್‌ಗೆ ಹೆಚ್ಚು ಪ್ರೋತ್ಸಾಹಿಸಿ ಮೂಲಕ ಸೈಬರ್ ಅಪರಾಧಗಳನ್ನು ಕಡಿಮೆ ಮಾಡುವುದರಲ್ಲಿ ಯಶಸ್ವಿಯಾಗಿದ್ದೇವೆ. ಕೇಂದ್ರ ಗೃಹ ಸಚಿವರು ದೇಶವನ್ನು ನಕ್ಸಲ್ ಮುಕ್ತ ಮಾಡಿದ್ದೇವೆ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಬಹಳ ವರ್ಷಗಳ ಹಿಂದೆಯೇ ಆ್ಯಂಟಿ ನಕ್ಸಲ್ ಫೋರ್ಸ್ ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಿದ್ದೇವೆ. ಆಧುನಿಕತೆ ಪ್ರತಿನಿತ್ಯ ಸವಾಲುಗಳನ್ನು ಒಟ್ಟುತ್ತಿದೆ. ಎಲ್ಲ ಹಂತದಲ್ಲಿಯೂ ತರಬೇತಿಯನ್ನು ಪಡೆಯುವ ಮೂಲಕ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಂಡು ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ, ನೇಮಕಾತಿಯಲ್ಲಿ ಆಧುನಿಕತೆಯನ್ನು ಬಳಸಿಕೊಳ್ಳಲಾಗುವುದು. 8 ಸಾವಿರ ಕಾನ್‌ಸ್ಟೇಬಲ್, 600 ಪಿಎಸ್ಐ ಹುದ್ದೆ ನೇಮಕಾತಿಗೆ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಅನುವು ಮಾಡಿಕೊಟ್ಟಿದ್ದಾರೆ. ಶಾಶ್ವತವಾದ ಪೊಲೀಸ್ ಸಹಾಯ ಸೇವೆಗಳ ನೇಮಕಾತಿ ಮಂಡಳಿಯನ್ನು ಘೋಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಮತ್ತಷ್ಟು ಸುಧಾರಣೆಗಳನ್ನು ತರಲಾಗುವುದು ಎಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+