ಕರ್ನಾಟಕದಲ್ಲಿ ತೃತೀಯ ಲಿಂಗಿಗಳು KSRP & IRB ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು, ಡಿ. 21: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ವಿಶೇಷ ಮೀಸಲು ಪಡೆಯ 70 ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಂಗಳಮುಖಿಯರ ನೇಮಕಕ್ಕೆ ಅವಕಾಶ ನೀಡಿದ್ದು, ಪೊಲೀಸ್ ಇಲಾಖೆಯ ಈ ಮಹತ್ವದ ಹೆಜ್ಜೆ ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಗಿದೆ. ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಸಮಾನ ಅವಕಾಶ ಕಲ್ಪಿಸಿದ ಹೆಗ್ಗಳಿಕೆಗೆ ಪೊಲೀಸ್ ಇಲಾಖೆ ಪಾತ್ರವಾಗಿದೆ.

ಡಿಸೆಂಬರ್ 20 ರಿಂದ ಪೊಲೀಸ್ ಇಲಾಖೆಯ ವಿಶೇಷ ಮೀಸಲು ಪಡೆ (KSRP & IRB) ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಕ್ಕೆ ಅರ್ಜಿ ಸಲ್ಲಿಸಬಹುದು. 2022 ಜನವರಿ 18 ಅರ್ಜಿ ಸಲ್ಲಿಸಲು ಕೊನೆ ದಿನಾಂಕ. ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಲು 2022 ಜ. 20 ಕೊನೆ ದಿನಾಂಕ ನಿಗದಿ ಪಡಿಸಲಾಗಿದೆ.

ಪ್ರಥಮ ಬಾರಿಗೆ ಮಂಗಳ ಮುಖಿಯರಿಗೆ ಅವಕಾಶ: ಇದೇ ಮೊದಲ ಭಾರಿಗೆ ಪೊಲೀಸ್ ಸೇವೆಗೆ ಸೇರಲು ಮಂಗಳ ಮುಖಿಯರಿಗೂ ಅವಕಾಶ ಕಲ್ಪಿಸಲಾಗಿದೆ. ಡಿ. 20 ರಂದು ಹೊರಡಿಸಿರುವ ನೇಮಕಾತಿ ಅಧಿಸೂಚನೆಯಲ್ಲಿ ಮಂಗಳಮುಖಿಯರಿಗೆ ಶೇ. 1 ರಷ್ಟು ಹುದ್ದೆ ಮೀಸಲಿಡಲಾಗಿದೆ. ಈ ಮೂಲಕ ಮುಂದಿನ ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಅವಕಾಶ ಕಲ್ಪಿಸುವ ಸುಳಿವು ಪೊಲೀಸ್ ಇಲಾಖೆ ನೀಡಿದೆ.

ನಿಶಾ ಗೂಳೂರು ಅವರು ಸಲ್ಲಿಸಿದ್ದ ಅರ್ಜಿ

ನಿಶಾ ಗೂಳೂರು ಅವರು ಸಲ್ಲಿಸಿದ್ದ ಅರ್ಜಿ

ತೃತೀಯ ಲಿಂಗಗಳಿಗೆ ಸರ್ಕಾರಿ ಸೇವೆಯಲ್ಲಿ ಅವಕಾಶ ನೀಡುವ ಸಂಬಂಧ ಸಂಗಮ ಸ್ವಯಂ ಸೇವಾ ಸಂಸ್ಥೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಸಾಮಾಜಿಕ ಹೋರಾಟಗಾರ್ತಿ ನಿಶಾ ಗೂಳೂರು ಅವರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ್ದ ಹೈಕೋರ್ಟ್ ಕಳೆದ ಜುಲೈನಲ್ಲಿ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿತ್ತು. ಸರ್ಕಾರಿ ಹುದ್ದೆಗಳಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ ನೀಡುವಂತೆ ಕಳೆದ ಜುಲೈನಲ್ಲಿ ಹೈಕೋರ್ಟ್ ಸೂಚಿಸಿತ್ತು.

ಇದೀಗ ಪೊಲೀಸ್ ಇಲಾಖೆ ಹೊರಡಿಸಿರುವ KSRP- IRB ಸಬ್ ಇನ್‌ಸ್ಪೆಕ್ಟರ್ 70 ಹುದ್ದೆಗಳ ನೇಮಕ ಅಧಿಸೂಚನೆಯಲ್ಲಿ ತೃತೀಯ ಲಿಂಗಿಗಳಿಗೆ ಐದು ಹುದ್ದೆಗಳನ್ನು ಮೀಸಲಿಡಲಾಗಿದೆ. ಈ ಮೂಲಕ ಕರ್ನಾಟಕ ಪೊಲೀಸ್ ಇಲಾಖೆ ದೇಶದಲ್ಲಿ ಪ್ರಥಮ ಬಾರಿಗೆ ತೃತೀಯ ಲಿಂಗಿಗಳಿಗೆ ನೇಮಕಾತಿಯಲ್ಲಿ ಸಮಾನ ಅವಕಾಶ ಕಲ್ಪಿಸಿಕೊಟ್ಟ ಹೆಗ್ಗಳಿಕೆಗೆ ಪಾತ್ರವಾಗಿದೆ.

ದೇಹದಾರ್ಢ್ಯ ಪರೀಕ್ಷೆ

ದೇಹದಾರ್ಢ್ಯ ಪರೀಕ್ಷೆ

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ದೇಹದಾರ್ಢ್ಯ ಪರೀಕ್ಷೆ ನಡೆಯಲಿದ್ದು, ಅದರಲ್ಲಿ ಅಯ್ಕೆಯಾದವರಿಗೆ ಲಿಖಿತ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುತ್ತದೆ. ತೃತೀಯ ಲಿಂಗಿಗಳಿಗೆ ಸಹ ದೇಹದಾರ್ಢ್ಯಪರೀಕ್ಷೆ ಆಯೋಜಿಸಲಾಗಿದೆ. ಪುರುಷ ತೃತೀಯ ಲಿಂಗಿಗಳಿಗೆ ಪುರುಷ ಅಭ್ಯರ್ಥಿಗಳಿಗೆ ಇರುವ ಮಾನದಂಡ ಅನುಸರಿಸಲಾಗುತ್ತದೆ. ಮಹಿಳಾ ತೃತೀಯ ಲಿಂಗಿಗಳಿಗೆ ಮಹಿಳಾ ಅಭ್ಯರ್ಥಿಗಳಿಗೆ ಪರೀಕ್ಷೆಗೆ ನಿಗದಿ ಮಾಡಿರುವ ಮಾನದಂಡಗಳನ್ನು ಅನುಸರಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ

ವಯೋಮಿತಿ

ವಿಶೇಷ ಮೀಸಲು ಪಡೆ ಪೊಲೀಸ್ ಸಬ್‌ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಈ ಕೆಳಕಂಡಂತೆ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 26 ವರ್ಷ, ಹಿಂದುಳಿದ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ಗರಿಷ್ಠ 28 ವರ್ಷ ನಿಗದಿ ಮಾಡಲಾಗಿದೆ. ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಹಿಂದುಳಿದ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ

ವಿದ್ಯಾರ್ಹತೆ

ಇನ್ನು ಕೆಎಸ್ಆರ್‌ಪಿ ಸಬ್‌ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವರು ಯಾವುದೇ ಅಂಗೀಕೃತ ವಿವಿಯಿಂದ ತತ್ಸಮಾನ ಪದವಿ ಪಡೆದಿರಬೇಕು. ಡಿಪ್ಲೋಮಾಗಳನ್ನು ಪದವಿ ಎಂದು ಅಂಗೀಕರಿಸಲಾಗದು. ಪ್ರಸಕ್ತ ಸಾಲಿನಲ್ಲಿ ಪದವಿ ಪರೀಕ್ಷೆ ಬರೆದು ಅಂಕ ಪಟ್ಟಿ ಇಲ್ಲದವರು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ತೃತೀಯ ಲಿಂಗಿಗೆ ಈ ಪ್ರಮಾಣ ಪತ್ರ ಅಗತ್ಯ

ತೃತೀಯ ಲಿಂಗಿಗೆ ಈ ಪ್ರಮಾಣ ಪತ್ರ ಅಗತ್ಯ

ತೃತೀಯ ಲಿಂಗಿಗಳ ಹಕ್ಕುಗಳ ರಕ್ಷಣಾ ಅಧಿನಿಯಮ 2020 ರ ಅನ್ವಯ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ತೃತೀಯ ಲಿಂಗಿಗಳು ಜಿಲ್ಲಾ ಮಾಜಿಸ್ಟ್ರೇಟ್ ಅವರಿಂದ ಪ್ರಮಾಣ ಪತ್ರವನ್ನು ಪಡೆದಿರಬೇಕು. ಇಲ್ಲದಿದ್ದರೆ ಅವರನ್ನು ಮೀಸಲಾತಿಯನ್ನು ನೇಮಕಾತಿಗೆ ಪರಿಗಣಿಸುವುದಿಲ್ಲ ಎಂದು ಪೊಲೀಸ್ ಇಲಾಖೆ ಸೂಚಿಸಿದೆ. ಇನ್ನು ಖಾಲಿ ಇರುವ 70 ಹುದ್ದೆಗಳ ಪೈಕಿ ಐದು ಹುದ್ದೆಗಳನ್ನು ತೃತೀಯ ಲಿಂಗಿಗಳಿಗೆ ಮೀಸಲಿಡಲಾಗಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ.http://siksrp21.ksponline.co.in

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+