ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ರಾಜೀನಾಮೆ ಕೊಡಲಿ: ಅತೃಪ್ತ ಶಾಸಕರ ಒತ್ತಾಯ

|
Google Oneindia Kannada News

ಬೆಂಗಳೂರು, ಜುಲೈ 12: ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಕಳೆದುಕೊಂಡಿದೆ. ಆದರೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಶ್ವಾಸಮತ ಸಾಬೀತುಪಡಿಸುವುದಾಗಿ ಹೇಳಿಕೊಂಡಿದ್ದಾರೆ. ಅವರು ರಾಜೀನಾಮೆ ಕೊಡುವುದು ಒಳಿತು ಎಂದು ಮುಂಬೈನಲ್ಲಿರುವ ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಾವು ಸದನದಲ್ಲಿ ವಿಶ್ವಾಸಮತ ಯಾಚನೆಮಾಡಲು ಸಿದ್ಧರಾಗಿರುವುದಾಗಿ ಹೇಳಿದ್ದಾರೆ. ಅದರ ಹಿಂದಿನ ಉದ್ದೇಶ ಏನು ಎಂಬುದು ಗೊತ್ತಾಗುತ್ತಿಲ್ಲ. ಅವರಿಗೆ ಬಹುಮತ ಇಲ್ಲ ಎಂದು ಗೊತ್ತಿದ್ದರೂ ಸಹ ವಿಶ್ವಾಸಮತ ಯಾಚನೆಗೆ ಮುಂದಾಗಿದ್ದಾರೆ. ಪುನಃ ವಿಪ್ ಜಾರಿ ಮಾಡುವ ಸಲುವಾಗಿ ಹೀಗೆ ಮಾಡುತ್ತಿದ್ದಾರೆಯೋ ಏನೋ ಗೊತ್ತಿಲ್ಲ ಎಂದು ಪ್ರತಾಪ್ ಗೌಡ ಪಾಟೀಲ್ ಹೇಳಿದ್ದಾರೆ.

ಸಚಿವ ಶ್ರೀನಿವಾಸ್‌ಗೆ ಬಿಜೆಪಿ 60 ಕೋಟಿ ಆಫರ್ ನೀಡಿದ್ದು ನಿಜವೇ? ಸಚಿವ ಶ್ರೀನಿವಾಸ್‌ಗೆ ಬಿಜೆಪಿ 60 ಕೋಟಿ ಆಫರ್ ನೀಡಿದ್ದು ನಿಜವೇ?

ಇದು ಬಹುಮತ ಕಳೆದುಕೊಂಡಿರುವ ಸರ್ಕಾರ. ಆದರೂ ಸಿಎಂ ಬಹುಮತ ಸಾಬೀತುಪಡಿಸುತ್ತೇನೆ ಎಂದು ಹೇಳುತ್ತಿದ್ದಾರೆ. ಅವರು ಯಾವ ರೀತಿ ಪ್ರಯತ್ನ ಮಾಡುತ್ತಿದ್ದಾರೋ ಗೊತ್ತಿಲ್ಲ. ಬಹುಶಃ ಅಂದು ಅವರು ವಿಧಾನಸಭೆಯಲ್ಲಿ ನಡೆದ ಘಟನೆಗಳ ಬಗ್ಗೆ ಹೇಳಿಕೊಂಡು ರಾಜೀನಾಮೆ ಕೊಟ್ಟು ಹೋಗುತ್ತಾರೆ ಎನಿಸುತ್ತಿದೆ. ನಾವು ಎಲ್ಲರೂ ನಮ್ಮ ರಾಜೀನಾಮೆ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಈ ಸರ್ಕಾರಕ್ಕೆ ಬಹುಮತ ಇಲ್ಲದಿರುವ ಕಾರಣ ಸಿಎಂ ರಾಜೀನಾಮೆ ನೀಡಲಿ ಎಂದಿದ್ದಾರೆ.

karnataka political crisis rebel mla prathap gowda patil urges cm resignation

ನಮ್ಮ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಂಗಳವಾರಕ್ಕೆ ಮುಂದೂಡಿದೆ. ಅಂದು ಕೋರ್ಟ್ ನೀಡುವ ಆದೇಶಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

ಗೆದ್ದೇ ಗೆಲ್ಲುತ್ತೇನೆ ಎನ್ನುವ ಅಚಲ ವಿಶ್ವಾಸದಲ್ಲಿ ಎಚ್ಡಿಕೆ: ಏನಿರಬಹುದು ಕಾರ್ಯತಂತ್ರ? ಗೆದ್ದೇ ಗೆಲ್ಲುತ್ತೇನೆ ಎನ್ನುವ ಅಚಲ ವಿಶ್ವಾಸದಲ್ಲಿ ಎಚ್ಡಿಕೆ: ಏನಿರಬಹುದು ಕಾರ್ಯತಂತ್ರ?

ಶಾಸಕ ಸ್ಥಾನದಿಂದ ಅನರ್ಹಗೊಂಡರೂ ತೊಂದರೆಯಿಲ್ಲ. ಸಮ್ಮಿಶ್ರ ಸರ್ಕಾರ ಮಾತ್ರ ಯಾವ ಕಾರಣಕ್ಕೂ ಉಳಿಯಬಾರದು ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

English summary
karnataka political crisis: Congress rebel MLA Prathap Gowda Patil said that, the government has no majority. CM Kumaraswamy should resign.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X