• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೇಸಿಎಂ ಅಭಿಯಾನದಿಂದ ರಾಜ್ಯದ ಘನತೆ ಮಣ್ಣುಪಾಲು: ಸಚಿವ ಸುಧಾಕರ್

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 24: ಪೇಸಿಎಂ ಅಭಿಯಾನದ ಮೂಲಕ ಕಾಂಗ್ರೆಸ್‌ ನಾಯಕರು ರಾಜ್ಯ ರಾಜಕೀಯದ ಘನತೆಯನ್ನು ಮಣ್ಣುಪಾಲು ಮಾಡಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಕರ್ನಾಟಕದಲ್ಲಿ ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್‌ ನಾಯಕರು ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ದೂಷಿಸಿದ್ದಾರೆ.

ಇಡೀ ದೇಶದಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್‌ ನಾಯಕರು ಇಂತಹ ಕೀಳುಮಟ್ಟದ ರಾಜಕೀಯ ಮಾಡುವುದರಲ್ಲಿ ನಿಸ್ಸೀಮರೆಂದು ಸಾಬೀತು ಮಾಡುವ ಮೂಲಕ ಮತ್ತೊಮ್ಮೆ ಬೆತ್ತಲಾಗಿದ್ದಾರೆ. ಆದರೆ ಏನೇ ಮಾಡಿದರೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.

ಮುಂಗಾರು ಅಧಿವೇಶನದಲ್ಲಿ ಸಿದ್ದು ಸಿಡಿಗುಂಡು ಸಿಡಿಸಿದ್ದೇನು? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್‌ಮುಂಗಾರು ಅಧಿವೇಶನದಲ್ಲಿ ಸಿದ್ದು ಸಿಡಿಗುಂಡು ಸಿಡಿಸಿದ್ದೇನು? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್‌

ನಟ ಅಖಿಲ್ ಅಯ್ಯರ್‌ ಎಂಬುವರ ಹೆಸರನ್ನೂ ದುರ್ಬಳಕೆ ಮಾಡಿಕೊಂಡಿದ್ದು, ಅವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ. ಕಾಂಗ್ರೆಸ್‌ನವರು ಸತ್ಯ ಹರಿಶ್ಚಂದ್ರರಂತೆ ವರ್ತನೆ ಮಾಡುತ್ತಿದ್ದಾರೆ. ಆದರೆ ಅವರ ಹಿರಿಯ ನಾಯಕರೇ ಜಾಮೀನು ಮೇಲೆ ಹೊರಗಿದ್ದಾರೆ. ಭ್ರಷ್ಟಾಚಾರದಿಂದಲೇ ಕಾಂಗ್ರೆಸ್‌ ಅಧಿಕಾರ ಕಳೆದುಕೊಂಡಿದೆ. ಇವರಿಗೆ ಯಾವ ನೈತಿಕತೆ ಇದೆ ಎಂದು ಸಚಿವ ಸುಧಾಕರ್ ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ಉತ್ತಮ ಆಡಳಿತವನ್ನು ಕಾಂಗ್ರೆಸ್ ಸಹಿಸುತ್ತಿಲ್ಲ:

ಪದೇ ಪದೇ 40 ಕಮಿಶನ್‌ ಬಗ್ಗೆ ಹೇಳಿದರೆ ಜನರು ನಂಬುತ್ತಾರೆ ಎಂದು ಕಾಂಗ್ರೆಸ್‌ ತಿಳಿದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುದ್ಧ ಆಡಳಿತ ಜನರಿಗೆ ತಿಳಿದಿದೆ. ಅವರು ಜನಸಾಮಾನ್ಯರ ಸಿಎಂ ಎಂಬುದು ಜನರಿಗೆ ಗೊತ್ತಿದೆ. ಮುಖ್ಯಮಂತ್ರಿ ಒಳ್ಳೆಯ ಆಡಳಿತವನ್ನು ನೀಡುವುದನ್ನು ಕಾಂಗ್ರೆಸ್‌ಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಾಜಿ ಮುಖ್ಯಮಂತ್ರಿಯೊಬ್ಬರು ಹೋಗಿ ಪೋಸ್ಟರ್‌ ಅಂಟಿಸುವುದನ್ನು 75 ವರ್ಷಗಳ ಇತಿಹಾಸದಲ್ಲೇ ನೋಡಿಲ್ಲ ಎಂದು ಹೇಳಿದರು.

ಸಮುದಾಯದ ವಿರುದ್ಧ ನಡೆ:

ಕಾಂಗ್ರೆಸ್‌ ಹಿಂದಿನಿಂದಲೂ ಪ್ರಬಲ ಸಮುದಾಯದವರ ವಿರುದ್ಧ ಕೆಲಸ ಮಾಡುತ್ತಿದೆ. ಹಿಂದೆ ವೀರೇಂದ್ರ ಪಾಟೀಲ್, ಕೆಂಗಲ್‌ ಹನುಮಂತಯ್ಯ ವಿರುದ್ಧ ಕಾಂಗ್ರೆಸ್‌ ಹೀಗೆ ಕೆಲಸ ಮಾಡಿತ್ತು. ಅದರಲ್ಲೂ ಲಿಂಗಾಯತ ಸಮುದಾಯದವರ ವಿರುದ್ಧ ಕಾಂಗ್ರೆಸ್‌ನವರು ಕೆಲಸ ಮಾಡುತ್ತಾರೆ. ಇದರಿಂದಾಗಿ ಅಧಿಕಾರಕ್ಕೆ ಬರುವ ಅಲ್ಪ ಅವಕಾಶವನ್ನೂ ಕಳೆದು ಕೊಂಡಿದ್ದಾರೆ. ಜನಸಾಮಾನ್ಯರೇ ಕಾಂಗ್ರೆಸ್‌ ಪಕ್ಷಕ್ಕೆ ಸರಿಯಾದ ಉತ್ತರ ನೀಡಲಿದ್ದಾರೆ. ಚುನಾವಣೆಯ ಸಮಯದಲ್ಲಿ ಜನರೇ ಕಾಂಗ್ರೆಸ್‌ ನಾಯಕರನ್ನು ಮನೆಗೆ ಕಳುಹಿಸುತ್ತಾರೆ ಎಂದರು.

ಹಿರಿಯ ನಾಯಕ ಕೆ.ಎಚ್‌.ಮುನಿಯಪ್ಪ ಜೊತೆ ನನಗೆ ಉತ್ತಮ ವೈಯಕ್ತಿಕ ಸಂಬಂಧವಿದೆ. ಹೀಗಾಗಿ ಅವರನ್ನು ಭೇಟಿ ಮಾಡಲಾಗಿದೆಯೇ ಹೊರತು ಅದರಲ್ಲಿ ರಾಜಕೀಯ ಇಲ್ಲ. ಅವರು ಎಲ್ಲಿದ್ದರೂ ರಾಜಕೀಯ ಶಕ್ತಿಯಾಗಿಯೇ ಇದ್ದಾರೆ. ಯಾವುದೇ ಒಳ್ಳೆಯ ನಾಯಕರು ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ. ಅನೇಕ ಮುಖಂಡರ ಜೊತೆ ನಾನು ಸಂಪರ್ಕದಲ್ಲಿ ಇದ್ದೇನೆ ಎಂದರು.

English summary
Karnataka political dignity is spoiled from Congress PayCM Campaign, Says Health Minister K Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X