ಚುನಾವಣಾ ಫಲಿತಾಂಶ ಹಿನ್ನೆಲೆ ದೇವರ ಮೊರೆ ಹೋದ ಘಟಾನುಘಟಿ ನಾಯಕರು! ಬೆಳ್ಳಂಬೆಳಗ್ಗೆ ವಿಶೇಷ ಪೂಜೆ

ಬೆಂಗಳೂರು, ಮೇ 10: ವಿಧಾನಸಭಾ ಚುನಾವಣೆಯ ಅಬ್ಬರ ಪ್ರಚಾರವನ್ನ ನಡೆಸಿದ್ದ ರಾಜಕೀಯ ಘಟಾನುಘಟಿ ನಾಯಕರು ನಡೆಸಿದ್ದರು. ವಿಧಾನಸಭಾ ಚುನಾವಣಾ ಫಲಿತಾಂಶ ಹಿನ್ನೆಲೆ ಬೆಳ್ಳಂಬೆಳಗ್ಗೆ ರಾಜಕೀಯ ನಾಯಕರು ದೇವರ ಮೊರೆ ಹೋಗಿದ್ದು, ವಿಶೇಷ ಪೂಜೆಯನ್ನ ಸಲ್ಲಿಸಿದ್ದಾರೆ.

ಈಗಾಗಲೇ ಬಹುಮತದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್‌ ನಾಯಕರು ಸಭೆಗಳನ್ನ ನಡೆಸಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​​ ಅವರು ತಮಿಳುನಾಡಿನ ತಿರುವಣ್ಣಾಮಲೈನ ಅರುಣಾಚಲೇಶ್ವರನಿಗೆ ದಂಪತಿ ಸಮೇತ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Karnataka Political Leaders Pay Visit To Temples Ahead of Assembly Election Results

ಇನ್ನೂ ಜೆಡಿಎಸ್​ ವರಿಷ್ಠರು ಹಾಗೂ ಮಾಜಿ ಪ್ರಧಾನಿಯಾಗಿರುವ ಹೆಚ್‌ ಡಿ ದೇವೇಗೌಡರಿಂದ ಬೆಂಗಳೂರಿನ ಜೆ.ಪಿ.ನಗರದ ತಿರುಮಲಗಿರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇತ್ತ ಮಾಜಿ ಮುಖ್ಯಮಂತ್ರಿಯಾಗಿರುವ ಹೆಚ್‌ ಡಿ ಕುಮಾರಸ್ವಾಮಿ ಅವರು ಹೆಚ್‌ ಎಸ್‌ ಆರ್‌ ಬಡಾವಣೆಯ ಶ್ರೀ ಬಸವೇಶ್ವರ ಗಾಯತ್ರಿ ದೇಗುಲಕ್ಕೆ ಭೇಟಿ ಪೂಜೆ ಸಲ್ಲಿಸಿದರು.

Karnataka Political Leaders Pay Visit To Temples Ahead of Assembly Election Results

ಇತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಅಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+