ಸಿದ್ದರಾಮಯ್ಯ ಅವರಿಂದ ಇಫ್ತಾರ್ ಕೂಟ: ಇತರೆ ಪ್ರಮುಖ ರಾಜಕೀಯ ಬೆಳವಣಿಗೆಗಳು ಹೀಗಿವೆ..

ಬೆಂಗಳೂರು, ಏ.14: ಇಂದು ಕೆ.ಎಸ್. ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಧರಣಿ ಮುಂದುವರಿಸಿದೆ. ಈಶ್ವರಪ್ಗುಡ್‌ಫ್ರಾಯ್‌ ಡೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ ಪ್ರವಾಸ ಮತ್ತು ವಿಧಾನಸಭೆ ವಿರೋಧ ಪಕ್ಷದನಾಯಕ ಸಿದ್ದರಾಮಯ್ಯ ಅವರಿಂದ ಇಫ್ತಾರ್ ಕೂಟ ಸಹಿತ ಈ ದಿನದ ಕರ್ನಾಟಕದ ಪ್ರಮುಖ ರಾಜಕೀಯ ನಾಯಕರ ಕಾರ್ಯಕ್ರಮಗಳು ಮತ್ತು ರಾಜಕೀಯ ಪಕ್ಷಗಳ ಬೆಳವಣಿಗೆಗಳು ಏನೇನಿವೆ ಎಂಬುದನ್ನು ಇಲ್ಲಿ ಪರಿಶೀಲಿಸಿ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರವೇ ಗದಗ ಜಿಲ್ಲಾ ಪ್ರವಾಸದಲ್ಲಿದ್ದಾರೆ. ಬೆಂಗಳೂರಿನಿಂದ ಹೊರಟು ಹುಬ್ಬಳ್ಳಿ ಮೂಲಕ ಗದಗ ತಲುಪಲಿದ್ದಾರೆ. ಗುಳಿದಿದ್ದಾರೆ. ಗದಗ, ಇಳಕಲ್, ನಗರಗುಂದದಲ್ಲಿ ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಕಾಂಗ್ರೆಸ್:

ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆಗೆ ಕಾರಣರಾಗಿರುವ ಸಚಿವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದ ಪೂರ್ವ ಪ್ರವೇಶ ದ್ವಾರದಲ್ಲಿ ನಿನ್ನೆಯಿಂದ ನಡೆಯುತ್ತಿರುವ 24 ತಾಸುಗಳ ಅಹೋರಾತ್ರಿ ಧರಣಿ ಭಾಗವಾಗಿ ಇಂದೂ ಪ್ರತಿಭಟನೆ ಮುಂದುವರಿಸಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಮುಖಂಡರಾದ ಪ್ರಕಾಶ್ ರಾಥೋಡ್, ನಾಸೀರ್ ಅಹ್ಮದ್, ವಿ.ಎಸ್. ಉಗ್ರಪ್ಪ, ಲಕ್ಷ್ಮೀನಾರಾಯಣ, ರಾಮಚಂದ್ರಪ್ಪ, ಪದ್ಮಾವತಿ, ರಾಜಕುಮಾರ್ ಮತ್ತಿತರರು ಪಾಲ್ಗೊಂಡಿದ್ದಾರೆ.

Karnataka Political News & Developments Today (15-04-2022): Political Parties News and Updates

ಸಿದ್ದರಾಮಯ್ಯ:

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಸಂಜೆ ಸೌಹಾರ್ದ ಇಫ್ತಿಯಾರ್ ಕೂಟ ಆಯೋಜಿಸಿದ್ದಾರೆ.

Karnataka Political News & Developments Today (15-04-2022): Political Parties News and Updates

ರಂಜಾನ್ ಪ್ರಯುಕ್ತ ಸಂಜೆ 6.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ನಲಪಾಡ್ ಪೆವಿಲಿಯನ್‌ನಲ್ಲಿ ಇಫ್ತಿಯಾರ್ ಕೂಟ ಆಯೋಜಿಸಲಾಗಿದೆ ಎಂದು ಸಿದ್ದರಾಮಯ್ಯ ಅವರ ದೈನಂದಿನ ಕಾರ್ಯಕ್ರಮಗಳ ಪಟ್ಟಿಯಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+