Karnataka Politics: ಡಿ.ಕೆ ಶಿವಕುಮಾರ್‌ಗೆ ಪಟ್ಟಾಭಿಷೇಕದ ಜೊತೆ ಸಿದ್ದರಾಮಯ್ಯ ನಾಲ್ವರು ಆಪ್ತರಿಗೆ ಡಿಸಿಎಂ ಹುದ್ದೆ ಸಾಧ್ಯತೆ
Karnataka Politics: ಕರ್ನಾಟಕ ರಾಜಕೀಯದಲ್ಲಿ ಹಲವು ಮಹತ್ವದ ಬದಲಾವಣೆಗಳು ಆಗುವ ಮುನ್ಸೂಚನೆ ಸಿಕ್ಕಿದೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನುವ ಸುದ್ದಿಯ ಹಿಂದೆಯೇ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಹಾಗೂ ಕರ್ನಾಟಕದಲ್ಲಿ ಹಲವು ಉಪ ಮುಖ್ಯಮಂತ್ರಿಗಳ ಆಯ್ಕೆಯಾಗುವ ವಿಚಾರವೂ ಚರ್ಚೆಯ ಮುನ್ನೆಲೆಗೆ ಬಂದಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಕೇವಲ 2 ವರ್ಷಗಳು ಮಾತ್ರ ಬಾಕಿ ಉಳಿದಿದೆ. ಈ ಹಂತದಲ್ಲಿ ರಾಜಕೀಯವಾಗಿ ಆಗುವ ಯಾವುದೇ ಸಣ್ಣ ಬದಲಾವಣೆಯೂ ಸಹ ಕರ್ನಾಟಕ ರಾಜಕೀಯ ಹಾಗೂ ಮುಂದಿನ ವಿಧಾನಸಭೆ ಚುನಾವಣೆಯ ಮೇಲೆ ಗಂಭೀರವಾದ ಪರಿಣಾಮವನ್ನು ಬೀರುವ ಸಾಧ್ಯತೆ ಇದೆ. ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕ ಅಸಮಾಧಾನ ತಪ್ಪಿಸುವುದು ಹಾಗೂ ಸಿದ್ದರಾಮಯ್ಯ ಅವರ ಆಪ್ತರಿಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂದು ಹೇಳಲಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ನಾಲ್ವರು ಉಪ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಹೊಸ ಮುಖ್ಯಮಂತ್ರಿ ಮತ್ತು ನಾಲ್ವರು ಉಪ ಮುಖ್ಯಮಂತ್ರಿಗಳು ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 28 ರಂದು ರಾಜೀನಾಮೆ ನೀಡುವ ನಿರೀಕ್ಷೆಯಿದೆ ಎಂದು ಸಿಎಂಒ ಮೂಲಗಳು ತಿಳಿಸಿವೆ ಎಂದು ಹಿರಿಯ ಪತ್ರಕರ್ತೆ ನಬಿಲಾ ಜಮಾಲ್ ಅವರು ಸೋಶಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ಸಚಿವ ಸಂಪುಟ ಪುನರ್ ರಚನೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ, ಹಲವು ಕಾಂಗ್ರೆಸ್ ನಾಯಕರು ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾಗಿದ್ದ, ಹಲವು ಹಿರಿಯ ಕಾಂಗ್ರೆಸ್ ನಾಯಕರ ಹೆಸರನ್ನು ಪ್ರಸ್ತಾಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Karnataka Politics: ಕರ್ನಾಟಕದಲ್ಲಿ ನಾಲ್ವರು ಡಿಸಿಎಂ
ಪ್ರಸ್ತುತ ಪ್ರಸ್ತಾವನೆಯಲ್ಲಿ ದಲಿತ, ಅಲ್ಪಸಂಖ್ಯಾತ, ಲಿಂಗಾಯತ ಮತ್ತು ಒಬಿಸಿ ಸಮುದಾಯಗಳಿಂದ ತಲಾ ಒಬ್ಬ ಉಪಮುಖ್ಯಮಂತ್ರಿ ಸೇರಿದ್ದಾರೆ ಎಂದು ವರದಿಯಾಗಿದೆ. ಮಾತುಕತೆಗಳು ಇನ್ನೂ ಆರಂಭಿಕ ಹಂತದಲ್ಲಿವೆ, ಇನ್ನೂ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಉಪ ಮುಖ್ಯಮಂತ್ರಿಗಳ ಆಯ್ಕೆ ಬಹುತೇಕ ಖಚಿತ ಎಂದೇ ಹೇಳಲಾಗುತ್ತಿದೆ. ಉಪ ಮುಖ್ಯಮಂತ್ರಿಗಳ ಆಕಾಂಕ್ಷಿಗಳ ಹೆಸರಿನಲ್ಲಿ ಸಚಿವ ಎಂ.ಬಿ ಪಾಟೀಲ್, ಸತೀಶ್ ಜಾರಕಿಹೊಳಿ ಹಾಗೂ ಜಿ. ಪರಮೇಶ್ವರ್ ಸೇರಿದಂತೆ ಹಲವರ ಹೆಸರು ಕೇಳಿ ಬರುತ್ತಿದೆ ಎನ್ನಲಾಗಿದೆ.
ಯತೀಂದ್ರ ಸಿದ್ದರಾಮಯ್ಯಗೂ ಡಿಸಿಎಂ ಪಟ್ಟ ?
ಇನ್ನು ನಾಲ್ವರು ಉಪ ಮುಖ್ಯಮಂತ್ರಿಗಳಲ್ಲಿ ರಾಜ್ಯ ವಿಧಾನಪರಿಷತ್ತಿನ ಸದಸ್ಯ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿರಿಯ ಪುತ್ರನಿಗೂ ಉಪ ಮುಖ್ಯಮಂತ್ರಿ ಪಟ್ಟ ಸಿಗುವ ಸಾಧ್ಯತೆ ಇದೆ. ಒಂದೊಮ್ಮೆ ಸಿದ್ದಾರಾಮಯ್ಯ ಅವರು ರಾಜ್ಯಸಭೆಗೆ ಹೋಗುವುದಕ್ಕೆ ನಿರಾಕರಿಸಿದರೆ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಎಲ್ಲ ಪ್ರಶ್ನೆಗಳಿಗೂ ನಾಳೆ ಉತ್ತರ ಸಿಗಲಿದೆ.












Click it and Unblock the Notifications