Karnataka Politics: ಬಿಜೆಪಿ-ಜೆಡಿಎಸ್‌ ಹಲವು ನಾಯಕರು ಕಾಂಗ್ರೆಸ್ ಸಂಪರ್ಕದಲ್ಲಿ; ಡಿಕೆಶಿ ಸ್ಫೋಟಕ ಹೇಳಿಕೆ, ಎಚ್‌ಡಿಕೆಗೆ ಟಾಂಗ್‌

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ ಹಾಗೂ ಜೆಡಿಎಸ್‌ನ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಬಗ್ಗೆ ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಬಿಜೆಪಿಯ ಮಾಜಿ ಶಾಸಕ ಎನ್.ಎಲ್. ನರೇಂದ್ರ ಬಾಬು ಪಕ್ಷವನ್ನು ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದ ನಂತರ ಹಲವು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕಾಂಗ್ರೆಸ್ ಜೊತೆ ಪಕ್ಷ ಸೇರುವ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಹೇಳಿದ್ದಾರೆ. ಇದು ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನರೇಂದ್ರ ಬಾಬು ಮತ್ತು ಅವರ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನಂತರ ಡಿ.ಕೆ ಶಿವಕುಮಾರ್ ಅವರು ಸ್ಫೋಟಕ ಮಾಹಿತಿ ಹಂಚಿಕೊಂಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್‌ನ ಹಲವು ನಾಯಕರು ನನ್ನೊಂದಿಗೆ ಮತ್ತು ನಮ್ಮ ಪಕ್ಷದ ನಾಯಕತ್ವದೊಂದಿಗೆ ಸಂಪರ್ಕದಲ್ಲಿದ್ದಾರೆ. ನಾವು ಅವರಿಗೆ ಅವಕಾಶ ನೀಡುತ್ತೇವೆ ಮತ್ತು ಒಟ್ಟಿಗೆ ಕೆಲಸ ಮಾಡಲಿದ್ದೇವೆ ಎಂದೂ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

Karnataka Politics Several BJP-JDS Leaders in Touch With Congress Says DK Shivakumar Vs HDK

ಕಾಂಗ್ರೆಸ್ ನ ಸಿದ್ಧಾಂತ ಮತ್ತು ನಾಯಕತ್ವದಲ್ಲಿ ನಂಬಿಕೆ ಇರಿಸಿರುವ ನಾಯಕರನ್ನು ಗುರುತಿಸಲು ಜಿಲ್ಲಾ ಸಚಿವರು ಮತ್ತು ಪಕ್ಷದ ಪದಾಧಿಕಾರಿಗಳಿಗೆ ತಿಳಿಸಲಾಗಿದೆ. ರಾಜಾಜಿನಗರ ಮತ್ತು ಮಹಾಲಕ್ಷ್ಮಿ ಲೇಔಟ್‌ನ ಮಾಜಿ ಶಾಸಕ ನರೇಂದ್ರ ಬಾಬು ಸುಮಾರು ಒಂದು ದಶಕವನ್ನು ಬಿಜೆಪಿಯಲ್ಲಿ ಕಳೆದಿದ್ದಾರೆ. ಸಂಘಟನೆಗಾಗಿ ಕೆಲಸ ಮಾಡಿದರೂ ಹಿರಿಯ ನಾಯಕರು ತಮಗೆ ಸೂಕ್ತ ಗೌರವ ನೀಡಿಲ್ಲ ಎಂದು ಆರೋಪಿಸಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಯುವಜನರು ಭರವಸೆಯನ್ನು ಹುಡುಕುತ್ತಿದ್ದಾರೆ ಮತ್ತು ದೇಶವನ್ನು ಉಳಿಸಲು ಕಾಂಗ್ರೆಸ್ ಪಕ್ಷಕ್ಕಿಂತ ಪರ್ಯಾಯವಿಲ್ಲ ಎಂದು ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕಳೆದ 13 ವರ್ಷಗಳಿಂದ ಬಿಜೆಪಿಗೆ ಅವಕಾಶ ನೀಡಲಾಗುತ್ತಿದೆ. ಸಾಕು ಸಾಕು ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಎಚ್.ಡಿ ಕುಮಾರಸ್ವಾಮಿ ಬಗ್ಗೆ ಡಿ.ಕೆ ಶಿವಕುಮಾರ್ ವ್ಯಂಗ್ಯ

ಇನ್ನು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರ ಬಗ್ಗೆ ಡಿ.ಕೆ ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ. 2028ರ ವಿಧಾನಸಭಾ ಚುನಾವಣೆಗೆ ಮುನ್ನ ತಮ್ಮ ಸ್ಥಾನವನ್ನು ಬಲಪಡಿಸಿಕೊಳ್ಳಲು ಜೆಡಿಎಸ್ ನಾಯಕ, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಅಶೋಕ ಮತ್ತು ವಿಜಯೇಂದ್ರ ಅವರ ಕಥೆ ಏನೇ ಇರಲಿ, ಕುಮಾರಸ್ವಾಮಿ ಅವರಿಬ್ಬರನ್ನೂ ಕೆಳಗಿಳಿಸಿ ತನಗಾಗಿ ಏನನ್ನಾದರೂ ಪಡೆಯಬಹುದೇ ಎಂದು ನೋಡುತ್ತಿದ್ದಾರೆ. ಕುಮಾರಸ್ವಾಮಿ ಹೇಳಿಕೆಗಳನ್ನು ನೀಡುತ್ತಿರುವುದು ಮತ್ತು "ಬಾಂಬ್ ಬೀಳಿಸುವುದಾಗಿ" ಪದೇ ಪದೇ ಬೆದರಿಕೆ ಹಾಕುತ್ತಿರುವುದು ಇದೇ ಕಾರಣಕ್ಕೆ ಅಂತ ಹೇಳಿದ್ದಾರೆ.

ಅಲ್ಲೋಲ - ಕಲ್ಲೊಲ ಅಥವಾ ಅಡ್ಡಿಪಡಿಸುವ ಬಗ್ಗೆ ಕುಮಾರಸ್ವಾಮಿ ನೀಡಿದ ಎಚ್ಚರಿಕೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಅವರು ಅವ್ಯವಸ್ಥೆ ಸೃಷ್ಟಿಸುವ ಬಗ್ಗೆ ಮಾತನಾಡುತ್ತಲೇ ಇರುತ್ತಾರೆ. ಆ ಅವ್ಯವಸ್ಥೆ ಏನೆಂದು ನಾನು ವಿವರಿಸಬೇಕೇ? ನಾವು ಅದನ್ನು ಪ್ರತಿದಿನ ಟಿವಿಯಲ್ಲಿ ನೋಡುತ್ತೇವೆ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+