ಕೆಲ ಬಿಜೆಪಿ ನಾಯಕರಿಂದ ಹೊಂದಾಣಿಕೆ ರಾಜಕಾರಣ: ಬಿಎಲ್ ಸಂತೋಷ್ ಭೇಟಿ ಬಳಿಕ ಸಿಪಿ ಯೋಗೇಶ್ವರ್ ಹೇಳಿಕೆ

ಬೆಂಗಳೂರು, ಜೂನ್‌ 22: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಹೊಂದಾಣಿಕೆ ರಾಜಕಾರಣ ಕಾರಣವೆಂದು ಮಾಜಿ ಸಚಿವ ಸಿಪಿ ಯೋಗೇಶ್ವರ್‌ ಬುಧವಾರ ಹೇಳಿದರು. ಬಿಜೆಪಿಯ ಕೆಲ ನಾಯಕರು ವಿರೋಧ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವುದು ಕೂಡ ಪಕ್ಷದ ಸೋಲಿಗೆ ಕಾರಣ ಎಂದು ಅವರು ಹೇಳಿಕೆ ನೀಡಿದರು.

ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಭೇಟಿ ಮಾಡಿದ ಬಳಿಕ ಯೋಗೇಶ್ವರ್ ಸುದ್ದಿಗಾರರೊಂದಿಗೆ ಮಾತನಾಡಿದರು. ಕೆಲವು ಕ್ಷೇತ್ರಗಳಲ್ಲಿಯೂ ಸಹ ಬಿಜೆಪಿ ಮತ್ತು ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿವೆ ಎಂಬ ಗಂಭೀರ ಆರೋಪಗಳನ್ನು ಅವರು ಮಾಡಿದರು.

Karnataka Politics: Some BJP leaders involved in adjustment politics, alleges C P Yogeshwar

'ನಮ್ಮ ಕೆಲವು ನಾಯಕರು ಅಡ್ಜಸ್ಟ್‌ಮೆಂಟ್‌ ರಾಜಕಾರಣದಲ್ಲಿದ್ದಾರೆ ಅಂತ ನನಗೂ ಅನ್ನಿಸಿತ್ತು. ಈ ವಿಚಾರದಲ್ಲಿ ಹೆಚ್ಚು ಮಾತನಾಡಲು ಬಯಸುವುದಿಲ್ಲ. ಅದು ಈಗ ಅಪ್ರಸ್ತುತ. ಈ ವಿಚಾರದ ಬಗ್ಗೆ ವಿವರವಾಗಿ ಮಾತನಾಡಿದರೆ ರಾಜ್ಯ ರಾಜಕಾರಣದಲ್ಲಿ ರಾಜಕೀಯ ನಡುಕ ಹುಟ್ಟುತ್ತದೆ' ಅವರು ಯಾರ ಹೆಸರನ್ನೂ ಹೇಳದೆ ಈ ಆರೋಪಗಳನ್ನು ಮಾಡಿದರು.

ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ವಿಸ್ತರಣೆ ಮಾಡದಿರುವುದು ಹಾಗೂ ಭ್ರಷ್ಟಾಚಾರದ ವಿಚಾರದಲ್ಲಿ ಕಾಂಗ್ರೆಸ್ ಹೇಳಿಕೆಯನ್ನು ಎದುರಿಸುವಲ್ಲಿ ವಿಫಲವಾಗಿರುವುದು ಕೂಡ ಬಿಜೆಪಿ ಸೋಲಿಗೆ ಕಾರಣ ಎಂದರು.

Karnataka Politics: Some BJP leaders involved in adjustment politics, alleges C P Yogeshwar

ಇತ್ತೀಚೆಗೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮತ್ತು ಬಿಜೆಪಿ ಮೈಸೂರು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಕೂಡ ತಮ್ಮದೇ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹೊಂದಾಣಿಕೆ ಮತ್ತು ಹೊಂದಾಣಿಕೆ ರಾಜಕೀಯವು ಬಿಜೆಪಿಗೆ ಚುನಾವಣೆಯಲ್ಲಿ ಮಾರಕವಾಯಿತು ಎಂದು ಆರೋಪಿಸಿದರು. ಯಾರ ಹೆಸರನ್ನೂ ಹೇಳದೆ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ವಿಚಾರವಾಗಿ ತನಿಖೆಗೆ ಏಕೆ ಆದೇಶಿಸಿಲ್ಲ ಎಂದು ಪ್ರಶ್ನಿಸಿದರು.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವ ಒಲವು ವ್ಯಕ್ತಪಡಿಸಿದ ಯೋಗೇಶ್ವರ್, ಈ ವಿಚಾರದಲ್ಲಿ ಪಕ್ಷದ ನಾಯಕರ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರದ ಕಾಂಗ್ರೆಸ್‌ನ ಲೋಕಸಭಾ ಸದಸ್ಯ ಡಿಕೆ ಸುರೇಶ್‌ ಅವರು ಚುನಾವಣಾ ರಾಜಕೀಯ ತ್ಯಜಿಸುವ ಇತ್ತೀಚೆಗಿನ ಹೇಳಿಕೆಗೆ ಪ್ರತಿಕ್ರಿಯಿಸಿದ ಯೋಗೇಶ್ವರ್, ಬಹುಶಃ ಸುರೇಶ್ ಅವರು ರಾಜ್ಯ ರಾಜಕಾರಣದ ಬಗ್ಗೆ ಉತ್ಸುಕರಾಗಿದ್ದಾರೆ ಎಂದು ಹೇಳಿದರು.

ಹೊಂದಾಣಿಕೆ ರಾಜಕಾರಣ ಕರ್ನಾಟಕ ಬಿಜೆಪಿಗೆ ಭಾರೀ ಮುಜುಗರ ಉಂಟು ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+