ಪಬ್ಲಿಕ್ ಟಿವಿ, ಬಿಟಿವಿ ಸಮೀಕ್ಷೆ, ಕಾಂಗ್ರೆಸ್ ಅತೀ ದೊಡ್ಡ ಪಕ್ಷ
Recommended Video

ಬೆಂಗಳೂರು, ಏಪ್ರಿಲ್ 19: ಕರ್ನಾಟಕದ ಪ್ರಮುಖ ವಾಹಿನಿಗಳಾದ ಬಿಟಿವಿ ಮತ್ತು ಪಬ್ಲಿಕ್ ಟಿವಿ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮೀಕ್ಷೆಗಳನ್ನು ನಡೆಸಿವೆ. ಎರಡೂ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಎರಡೂ ವಾಹಿನಿಗಳು ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂಬುದನ್ನು ಸ್ಪಷ್ಟವಾಗಿ ತಮ್ಮ ಸಮೀಕ್ಷೆಯಲ್ಲಿ ಹೇಳಿವೆ.
ಬಿಟಿವಿ ಸಮೀಕ್ಷೆ
ಒಟ್ಟು 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 94-99 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಟಿವಿ ಸಮೀಕ್ಷೆ ಹೇಳಿದೆ. ಬಿಜೆಪಿ 82-87 ಸ್ಥಾನಗಳನ್ನು ಚುನಾವಣೆಯಲ್ಲಿ ಪಡೆದುಕೊಳ್ಳಲಿದೆ. ಮತ್ತು ಜೆಡಿಎಸ್ 39 ರಿಂದ 44 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ.

ಇನ್ನು ಇತರರು 2-6 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸರ್ವೆ ಫಲಿತಾಂಶ ಹೇಳಿದೆ. 4,48,000 ಜನರನ್ನು ಸಂದರ್ಶನ ಮಾಡಿ ನಾವು ಈ ಸಮೀಕ್ಷೆ ನಡೆಸಿದ್ದೇವೆ ಎಂದು ವಾಹಿನಿ ಹೇಳಿಕೊಂಡಿದೆ.
ಒಂದೊಮ್ಮೆ ಈ ಸಮೀಕ್ಷೆ ನಿಜವಾದಲ್ಲಿ ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ. ಅಧಿಕಾರಕ್ಕೇರಲು ಬಿಜೆಪಿ ಮತ್ತು ಕಾಂಗ್ರೆಸ್ ಇಬ್ಬರಿಗೂ ಜೆಡಿಎಸ್ ಸಖ್ಯ ಅನಿವಾರ್ಯವಾಗಲಿದೆ.

ಪಬ್ಲಿಕ್ ಟಿವಿ ಸಮೀಕ್ಷೆ
ಕನ್ನಡದ ನಂಬರ್ 2 ವಾಹಿನಿ ಪಬ್ಲಿಕ್ ಟಿವಿಯು ಇದೇ ಸಂದರ್ಭದಲ್ಲಿ ಸಮೀಕ್ಷೆ ನಡೆಸಿದೆ. ಮತ್ತು ಅದೂ ಕೂಡ ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ. ಕಾಂಗ್ರೆಸ್ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿದೆ.
ಪಬ್ಲಿಕ್ ಟಿವಿ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಗೆ 85-95 ಸ್ಥಾನಗಳು ಬರಲಿವೆ. ಈ ಮೂಲಕ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ.

ಇನ್ನು ಬಿಜೆಪಿ 75-85 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ಹೇಳಿದ್ದರೆ, ಜೆಡಿಎಸ್ 40-45 ಸ್ಥಾನಗಲ್ಲಿ ಗೆಲ್ಲಲಿದೆ ಎಂದು ಹೇಳಿದೆ. ಇತರರು 0-5 ಸ್ಥಾನಗಳನ್ನು ಪಡೆದುಕೊಳ್ಳಲಿದ್ದಾರೆ ಎಂದು ಸಮೀಕ್ಷೆಯು ಭವಿಷ್ಯ ನುಡಿದಿದೆ.
ಒಂದೊಮ್ಮೆ ಈ ಸಮೀಕ್ಷೆಯೂ ನಿಜವಾದಲ್ಲಿ ಕರ್ನಾಟಕದಲ್ಲಿ ಸಮ್ಮಿಶ್ರ ಸರಕಾರ ರಚಿಸುವುದು ಅನಿವಾರ್ಯವಾಗಲಿದೆ. ಜೆಡಿಎಸ್ ಕಿಂಗ್ ಮೇಕರ್ ಆಗಿ ಹೊರಹೊಮ್ಮಲಿದೆ.












Click it and Unblock the Notifications