'ಜಗದೀಶ್ ಶೆಟ್ಟರ್ ಅವಶ್ಯಕತೆ ನಮ್ಮ ಪಕ್ಷಕ್ಕಿಲ್ಲ'- ಎಚ್‌ಡಿ ಕುಮಾರಸ್ವಾಮಿ
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಹುಬ್ಬಳ್ಳಿ ಟಿಕೆಟ್ ಕೈತಪ್ಪಿದ್ದರಿಂದ ಬೇಸರಗೊಂಡ ಶೆಟ್ಟರ್ ಬಿಜೆಪಿಯಿಂದ ತಮ್ಮೆಲ್ಲ ಸಂಬಂಧ ಕಳಚಿಕೊಂಡಿದ್ದಾರೆ. ಇಂದು ಮಧ್ಯಾಹ್ನ ಶಿರಸಿಯಲ್ಲಿ ಸ್ಪೀಕರ್ ಕಾಗೇರಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು. ಜೊತೆಗೆ ಹುಬ್ಬಳ್ಳಿಯಿಂದ ಸ್ಪರ್ಧೆಸಿಯೇ ತೀರುತ್ತೇನೆ ಎಂದು ಹೇಳಿದ್ದಾರೆ. ಹಾಗಾದರೆ ಶೆಟ್ಟರ್ ಬೇರೆ ಪಕ್ಷ ಸೇರುತ್ತಾರಾ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಕಣಕ್ಕಿಳಿಯುತ್ತಾರಾ ಎನ್ನುವ ಕುತೂಹಲ ಮೂಡಿದೆ.

ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರನ್ನು ಕೇಳಿದಾಗ,'ಶೆಟ್ಟರ್ ಅವರಂಥ ದೊಡ್ಡ ನಾಯಕರ ಅವಶ್ಯಕತೆ ನಮ್ಮ ಪಕ್ಷಕ್ಕಿಲ್ಲ' ಎಂದು ಕಡುವಾಗಿ ಹೇಳಿದ್ದಾರೆ. ಜಗದೀಶ್ ಶೆಟ್ಟರ್ ಜೆಡಿಎಸ್ ಸೇರುತ್ತಾರಾ? ಎಂದು ಸುದ್ದಿಗಾರರ ಪ್ರಶ್ನೆಗೆ ಇಂದು ಧರ್ಮಸ್ಥಳದಲ್ಲಿ ಕುಮಾರಸ್ವಾಮಿ ಉತ್ತರಿಸಿದರು.
ಎಚ್‌ಡಿ ಕುಮಾರಸ್ವಾಮಿ ಅವರು ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಧರ್ಮಸ್ಥಳದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದು, ಇಂದು (ಣಾಬುವಾರ) ಮುಂಜಾನೆ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಬಳಿಕ ಎಚ್‌ಡಿಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹೆಗ್ಗಡೆಯವರ ಮಾಜಿ ಮುಖ್ಯಮಂತ್ರಿಗಳನ್ನು ಕ್ಷೇತ್ರದ ಪರವಾಗಿ ಗೌರವಿಸಿದರು. ದೇವರ ದರ್ಶನ ಪಡೆದು ಹೊರಬರುವ ವೇಳೆ ಅಲ್ಲಿ ನೆರೆದಿದ್ದು ಭಕ್ತರು, ಜೆಡಿಎಸ್ ಬೆಂಬಲಿಗರು ಹೆಚ್‌ಡಿಕೆ ಅವರಿಗೆ ಜೈಕಾರ ಹಾಕಿ ಹಸ್ತಲಾಘವ ಮಾಡಿದರು.
'ಶೆಡ್ಡರ್ ಅವರ ರಾಜೀನಾಮೆ ಅದು ಅವರ ಪಕ್ಷದ ಆಂತರಿಕ ಬೆಳವಣಿಗೆ. ಅವರೊಬ್ಬ ಅನುಭವಸ್ಥ ರಾಜಕಾರಣಿ. ಜನಸಂಘದಿಂದಲೂ ಕೆಲಸ ಮಾಡಿರುವಂತವರು. ಅವರಂತೆಯೇ ಇಂತಹ ತೀರ್ಮಾನ ಮಾಡಿದ್ದಾರೆ ಅಂದ್ರೆ ಬಿಜೆಪಿ ಡಿಎಸ್‌ಎ ಬಗ್ಗೆ ನಾನು ಈ ಮೊದಲೇ ಹೇಳಿದ್ದೆ. ಅದು ಈ ಸಮಯಕ್ಕೆ ಪೂರಕವಾಗಿದೆ. ಇನ್ನು ಜಗದೀಶ್ ಶೆಟ್ಟರಂತಹ ದೊಡ್ಡ ನಾಯಕರ ಅವಶ್ಯಕತೆ ನಮ್ಮ ಪಕ್ಷಕ್ಕಿಲ್ಲ. ಸಣ್ಣ ನಾಯಕರೇನಾದರೂ ಬಂದರೆ ಸ್ವಾಗತ' ಎಂದು ತಿಳಿಸಿರು.
ರಾಜೀನಾಮೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್ ಅವರು ತಾವಿನ್ನೂ ಯಾವ ಪಕ್ಷಕ್ಕೆ ಸೇರಬೇಕು ಎನ್ನುವ ಬಗ್ಗೆ ನಿರ್ಧಾರ ಮಾಡಿಲ್ಲ. ಸಿರಸಿಯಿಂದ ಹುಬ್ಬಳ್ಳಿಗೆ ಹೋಗಿ ಕಾರ್ಯಕರ್ತರೊಂದಿಗೆ ಸಭೆ ನಡೆಸುತ್ತೇನೆ. ಬಳಿಕ ಬೆಂಗಳೂರಿಗೆ ಹೋಗುತ್ತೇನೆ ಎಂದರು.
ಮೂಲಗಳ ಪ್ರಕಾರ, ಹುಬ್ಬಳ್ಳಿಯಿಂದ ಬೆಂಗಳೂರಿಗೆ ಶೆಟ್ಟರ್ ಅವರಿಗೆ ಕಾಂಗ್ರೆಸ್ ವಿಶೇಷ ವಿಮಾನದ ವ್ಯವಸ್ಥೆ ಮಾಡಿದೆ. ಕಾಂಗ್ರೆಸ್ ಆಪ್ತರೊಂದಿಗೆ ಶೆಟ್ಟರ್ ವಿಮಾನದಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ. ಹೀಗಾಗಿ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಲಕ್ಷಣಗಳು ದಟ್ಟವಾಗಿವೆ.
ಇದಕ್ಕೆ ಪುಷ್ಠಿ ನೀಡುವಂತೆ ಇಂದು ಬೆಂಗಳೂರಿನ ಮಲ್ಲೆಶ್ವಯಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಎಸ್ ಯಡಿಯೂರಪ್ಪ ಕೂಡ, ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವುದು ಪಕ್ಷ ಮಾತ್ರವಲ್ಲದೆ ಜನರಿಗೆ ಮಾಡಿದ ದ್ರೋಹ ಎಂದಿದ್ದಾರೆ. ಯಡಿಯೂರಪ್ಪ ಅವರೇ ಶೆಟ್ಟರ್ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.












Click it and Unblock the Notifications