Karnataka Elections 2023: ಏ.28ರಿಂದ ಮೇ 7ರ ನಡುವೆ ಕರ್ನಾಟಕದ ಈ ಭಾಗಗಳಲ್ಲಿ ಮೋದಿ ಮೇನಿಯಾ

2023ರ ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಕರ್ನಾಟಕದಲ್ಲಿ ಅಭ್ಯರ್ಥಿಗಳ ಮತ್ತು ರಾಜಕೀಯ ಪಕ್ಷಗಳ ಮತಬೇಟೆ ಜೋರಾಗಿದೆ. ಈಗಾಗಲೇ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳು ಮತದಾರರ ಓಲೈಕೆಗೆ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.

ಇನ್ನು ಹೇಗಾದರೂ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಮರಳುವ ವಿಶ್ವಾಸದಲ್ಲಿರುವ ಆಡಳಿತಾರೂಢ ಬಿಜೆಪಿ, ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ರಾಷ್ಟ್ರೀಯ ನಾಯಕರನ್ನು ಕರೆಸುತ್ತಿದೆ. ಈಗಾಗಲೇ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಹಲವು ಭಾಗಗಳಲ್ಲಿ ರೋಡ್ ಶೋ ನಡೆಸುತ್ತಿದ್ದಾರೆ.

Karnataka Poll: PM Modi Will Campaign In These Parts of Karnataka Between April 28 to May 7

ಇನ್ನು ಏಪ್ರಿಲ್ 28ರಿಂದ ಮೇ 7ರ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಬಾರಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಮತ್ತು 12-15 ಚುನಾವಣಾ ಪ್ರಚಾರ ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಕೇವಲ 8 ದಿನಗಳ ಅವಧಿಯಲ್ಲಿ ಹತ್ತಾರು ರೋಡ್ ಶೋ, ಸಮಾವೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕ ಭೇಟಿಯ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಏಪ್ರಿಲ್ 28ರಿಂದ ಆರಂಭವಾಗಲಿದೆ. ಏಪ್ರಿಲ್ 28, 29ರಂದು ರಾಮನಗರ ಮತ್ತು ಮೈಸೂರು ಭಾಗಗಳಲ್ಲಿ ಪ್ರಚಾರ ನಡೆಸಲಿದ್ದರೆ, ಮೇ 3 ಮತ್ತು 4ರಂದು ಕಿತ್ತೂರು ಕರ್ನಾಟಕದ ಭಾಗದಲ್ಲಿ ಸಮಾವೇಶ ಹಾಗೂ ರೋಡ್ ಶೋಗಳಲ್ಲಿ ಭಾಗಿಯಾಗಲಿದ್ದಾರೆ.

Karnataka Poll: PM Modi Will Campaign In These Parts of Karnataka Between April 28 to May 7

ಇನ್ನು ಮೇ 5 ಮತ್ತು 6ರಂದು ಕಲ್ಯಾಣ ಕರ್ನಾಟಕದ ಭಾಗದಲ್ಲಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದರೆ, ಮೇ 7ರಂದು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮೆಗಾ ರೋಡ್ ಶೋ ನಡೆಸಲಿದ್ದಾರೆ.

ಯಲಹಂಕದಿಂದ ಬಾಗೇಪಲ್ಲಿವರೆಗೂ ರೋಡ್ ಶೋ ನಡೆಸಲಿರುವ ನರೇಂದ್ರ ಮೋದಿ, ಒಂದೇ ದಿನ ಮೂರು ಜಿಲ್ಲೆಗಳಲ್ಲಿ ಸಂಚರಿಸಲಿದ್ದಾರೆ ಎಂದು ಹೇಳಲಾಗಿದೆ. ಇಲ್ಲಿ 6ರಿಂದ 8 ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.

ನರೇಂದ್ರ ಮೋದಿ ಮಾತ್ರವಲ್ಲದೆ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರ ದಂಡು ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

ಏಪ್ರಿಲ್ 26ರಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಯೋಗಿ ಆದಿತ್ಯನಾಥ್ ವಿಜಯಪುರ ಜಿಲ್ಲೆಯ ಸುತ್ತಮುತ್ತ ಪ್ರಚಾರ ನಡೆಸಲಿದ್ದಾರೆ.

ಏಪ್ರಿಲ್ 26ರಂದು ಬಸವನ ಬಾಗೇವಾಡಿಗೆ ಆಗಮಿಸಲಿರುವ ಯೋಗಿ ಆದಿತ್ಯನಾಥ್, ಮೂಲನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಜೈನಾಪುರ ರಸ್ತೆಯಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿ ಎಸ್.ಕೆ. ಬೆಳ್ಳುಬ್ಬಿ ಪರ ಮತ ಕೇಳಲಿದ್ದಾರೆ.

ಇನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಪ್ರಿಲ್ 26ರಂದು ಕಲಬುರಗಿ ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ಮತಬೇಟೆಗೆ ಇಳಿಯಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+