Siddaramaiah At Kolar: ಪ್ರತೀ ಪ್ರಾಜೆಕ್ಟ್, ಕೆಲಸಕ್ಕೆ 40% ನುಂಗಿದೆ- ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಸಿಡಿಮಿಡಿ
ಕೋಲಾರ ಏಪ್ರಿಲ್ 16: ಪ್ರತೀ ಪ್ರಾಜೆಕ್ಟ್, ಕೆಲಸಕ್ಕೆ 40% ನುಂಗಿ, ಈಗ ಕೆಎಂಎಫ್‌ನತ್ತ ಕಣ್ಣು ಹಾಕಿದೆ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದಾರೆ.
ಕೋಲಾರದಲ್ಲಿ ಜೈ ಭಾರತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, 'ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರೋದ್ರಿಂದ ರಾಜ್ಯದ ಅಭಿವೃದ್ಧಿ ಬಹಳ ವೇಗವಾಗಿ ಆಗುತ್ತದೆ ಎಂದು ಬಿಜೆಪಿ ಅವರೇ ಹೇಳಿದ್ದರು. ಆದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಹಿಂದೆಂದೂ ಇಷ್ಟೊಂದು ಕೆಟ್ಟ ಹೆಸರು ತಗೆದುಕೊಂಡಿರಲಿಲ್ಲ. ರಾಜ್ಯದ ಗೌರವವನ್ನು ಬಿಜೆಪಿ ಅವರು ಹಾಳು ಮಾಡಿದ್ದಾರೆ' ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಬಿಜೆಪಿ ಅವರು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಂದ ಮಾತ್ರವಲ್ಲದೆ ಪ್ರತಿ ಕೆಲಸಕ್ಕೆ, ಪ್ರತಿ ಪ್ರಾಜೆಕ್ಟ್ಗೆ 40% ತೆಗೆದುಕೊಳ್ಳುತ್ತಾರೆ ಎಂದು ಆರೋಪಗಳು ಬಹಿರಂಗವಾಗಿವೆ. ಇಷ್ಟರ ಮಟ್ಟಿಗೆ ಬಿಜೆಪಿ ಸರ್ಕಾರ ರಾಜ್ಯದ ಗೌರವ ಹಾಳು ಮಾಡಿದೆ. ರಾಜ್ಯ ಸರ್ಕಾರದ ಬಗ್ಗೆ ಬೀದಿ ಬೀದಿಗಳಲ್ಲಿ ಮಾತನಾಡುವಂತೆ ಮಾಡಿದ್ದಾರೆ. ಇಂತಹ ಭ್ರಷ್ಟ ಸರ್ಕಾರ ರಾಜ್ಯದಲ್ಲಿ ಹಿಂದೆಂದೂ ಬಂದಿರಲಿಲ್ಲ ಎಂದು ಜನ ಮಾತನಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಬಿಜೆಪಿಗೆ ಚೀಮಾರಿ ಹಾಕಿದ್ದಾರೆ.
ಅಷ್ಟು ಮಾತ್ರವಲ್ಲದೆ ಕರ್ನಾಟಕ ಮಿಲ್ಕ ಫಡರೇಷನ್ ಅನ್ನು ನುಂಗಲು ಮುಂದಾಗಿದ್ದಾರೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗಿ ಬೆಂಗಳೂರು ಸೇರಿದಂತೆ ಬೇರೆ ಬೇರೆ ಪಟ್ಟಣಗಳಲ್ಲಿ ಉತ್ಪಾದನೆ ಮಾಡುವ ವ್ಯವಸ್ಥೆ ಇತ್ತು. ಲಕ್ಷಾಂತರ ರೈತರು ಹಾಲು ಉತ್ಪಾದನೆ ಮಾಡಿ ಅವರ ಬದುಕು ಕಟ್ಟಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಅಮಿತ್ ಶಾ ಸಹಕಾರಿ ಮಂತ್ರಿ ಆದ ಮೇಲೆ ಕೆಎಂಎಫ್ ಅನ್ನು ಅಮುಲ್ ಜೊತೆ ಮರ್ಜ್ ಮಾಡಲು ಪ್ರಯತ್ನ ಮಾಡಿದರು. ಈಗ ಅಮುಲ್ ಪ್ರಾಡಕ್ಟ್‌ಗಳನ್ನು ಕರ್ನಾಟಕದಲ್ಲಿ ಮಾರುಕಟ್ಟೆಗೆ ತೆಗೆದುಕೊಂಡು ಬಂದು ನಂದಿನ ಪ್ರಾಡಕ್ಟ್ಗಳ ವಿರುದ್ಧ ಮಾರಾಟ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟಗರು ಗುಡುಗಿದೆ.
ನಂದಿನ ಪ್ರಾಡಕ್ಟ್ಗಳು ಮಾರಾಟವಾಗುತ್ತಿಲ್ಲ ಎಂದು ಹೇಳುತ್ತಾ ಅಮುಲ್ ತರಲು ಪ್ರಯತ್ನ ಮಾಡಿದ್ದಾರೆ. ಹೀಗಾಗಿ ಹಾಲಿನ ಉತ್ಪಾದನೆ 81 ಲಕ್ಷ ಲೀಟರ್‌ಗೆ ಇಳಿದೆ. ನಾನು ಕನ್ನಡಿಗರಲ್ಲಿ ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರದ ದುಷ್ಟ ಮನೋಭಾವನೆಯನ್ನು ನಾವೆಲ್ಲರೂ ತಡೆಗಟ್ಟಬೇಕಾಗುತ್ತದೆ. ಇದು ಎಲ್ಲಾ ನಮ್ಮ ಕನ್ನಡಿಗರ ಗರವದ ಪ್ರಶ್ನೆ ಎಂದು ನಾವು ತಿಳಿದುಕೊಳ್ಳಬೇಕು. ನಾವೆಲ್ಲರೂ ಕನ್ನಡಿಗರು. ಹೀಗಾಗಿ ಅಮುಲ್ ಪದಾರ್ಥಗಳನ್ನು ಖರೀದಿ ಮಾಡದೆ ನಂದಿನಿ ಹಾಲು ಮತ್ತು ಅದರ ಉತ್ಪಾದನೆಗಳನ್ನು ಮಾತ್ರ ಕೊಂಡುಕೊಳ್ಳುವ ಶಪತ ಮಾಡಬೇಕು. ಈ ಮೂಲಕ ಕೇಂದ್ರದ ಹುನ್ನಾರವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.

ಹೀಗಾಗಿ ಬಿಜೆಪಿಯನ್ನು ಕಿತ್ತೆಸೆದು ಕಾಂಗ್ರೆಸ್ ತರುವ ಪ್ರಯತ್ನ ಮಾಡಿದರೆ ಮಾತ್ರ ಕೆಎಂಎಫ್ ಉಳಿಯುತ್ತದೆ. ಕನ್ನಡಿಗರ ಬದುಕು ಕೂಡ ಉಳಿಸಿದಂತಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಕೋಲಾರದಲ್ಲಿ ಜೈ ಭಾರತ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್, ಹಾಗೂ ಇನ್ನಿತರ ಕಾಂಗ್ರೆಸ್ ಗಣ್ಯಯರು ಭಾಗವಹಿಸಿ ಮಾತನಾಡಿದರು.
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 13 ರಂದು ಚುನಾವಣೆಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇನ್ನೂ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

ಹೀಗಾಗಿ ಕಾಂಗ್ರೆಸ್ ಮತದಾರರನ್ನು ಸೆಳೆಯಲು ಹಲವೆಡೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈ ಮೂಲಕ ಬಿಜೆಪಿ ಭ್ರಷ್ಟಾಚಾರಗಳನ್ನು ಬಯಲಿಗೆಳಿಯುವ ಜನರಿಗೆ ನೆನಪಿಸುವ ಕೆಲಸ ಮಾಡುತ್ತಿದೆ. ಇಂತೆಲ್ಲಾ ಪ್ರಯತ್ನಗಳು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾ ಎಂದು ಕಾದು ನೋಡಬೇಕಿದೆ.












Click it and Unblock the Notifications