ಪರಮೇಶ್ವರ್ ಮೇಲೆ ಹಲ್ಲೆ: ಕರ್ನಾಟಕದಲ್ಲಿ ರಕ್ತಸಿಕ್ತ ರಾಜಕಾರಣ ಆರಂಭ, ಶಾ- ಬೊಮ್ಮಾಯಿಯೇ ಉತ್ತರದಾಯಿಗಳು
ಬೆಂಗಳೂರು, ಏಪ್ರಿಲ್ 29: ಕರ್ನಾಟಕದಲ್ಲಿ ಚುನಾವಣೆ ದಿನ ಹತ್ತಿರವಾಗುತ್ತಿದೆ. ಈ ಸಂದರ್ಭದಲ್ಲಿ ಚುನಾವಣಾ ರಣಕಣ ಪ್ರಕ್ಷುಬ್ದವಾಗುವ ಭೀತಿ ಕಾಡುತ್ತಿದೆ. ನಿನ್ನೆ ಮಾಜಿ ಡಿಸಿಎಂ ಜಿ ಪರಮೇಶ್ವರ್ ಅವರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಲಾಗಿದೆ. ತುಮಕೂರಿನ ಕೊರಟಗೆರೆಯಲ್ಲಿ ನಡೆದ ಈ ಘಟನೆಯನ್ನು ಕಾಂಗ್ರೆಸ್ ಪಕ್ಷದ ನಾಯಕರು ತೀವ್ರವಾಗಿ ವಿರೋಧಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ, 'ನಮ್ಮ ಪಕ್ಷದ ಹಿರಿಯ ನಾಯಕರಾದ ಡಾ ಜಿ ಪರಮೇಶ್ವರ್ ಅವರ ಮೇಲೆ ನಡೆದ ಹಲ್ಲೆಯ ಮೂಲಕ ಕರ್ನಾಟಕದ ರಾಜಕಾರಣದಲ್ಲಿ ರಕ್ತಸಿಕ್ತ ಅಧ್ಯಾಯ ಬರೆಯಲು ಹೊರಟಂತಿದೆ ನಮ್ಮ ಎದುರಾಳಿಗಳು. ಸೋಲಿನ ಭೀತಿಯಲ್ಲಿರುವವರ ಹೇಡಿತನದ ರಾಜಕೀಯ ಇದು. ಗಲಭೆಯ ಬೆದರಿಕೆ ಹಾಕಿದ್ದ ಅಮಿತ್ ಶಾ ಅವರು ಹಾಗೂ ಸಿಎಂ ಬೊಮ್ಮಾಯಿಯವರು ಈ ಘಟನೆಗೆ ಉತ್ತರದಾಯಿಗಳಾಗಿದ್ದಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಕಿಡಿ
'ರಾಜ್ಯದ ಕಾನೂನು ಸುವ್ಯವಸ್ಥೆಯನ್ನ ಯಾವ ಹಂತಕ್ಕೆ ತಂದಿಟ್ಟಿದ್ದೀರಿ ಆರಗ ಜ್ಞಾನೇಂದ್ರ ಅವರೇ, ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ದಾಳಿ ಮಾಡಿದವರ ಮೇಲೆ ಕ್ರಮವಿಲ್ಲ, ಜಿ ಪರಮೇಶ್ವರ ಅವರಿಗೆ ಸೂಕ್ತ ರಕ್ಷಣೆ ಇಲ್ಲ. ಇದೆಲ್ಲವೂ ಬಿಜೆಪಿಯ ವೈಫಲ್ಯವೋ, ಷಡ್ಯಂತ್ರವೋ? ಅಮಿತ್ ಶಾ ಅವರ ನಿರ್ದೇಶನದಂತೆ ಗಲಭೆಯುಕ್ತ ಕರ್ನಾಟಕ ಮಾಡಲು ತಯಾರಿಯೇ?' ಎಂದು ಪ್ರಶ್ನಿಸಿದೆ.
'ಜಿ. ಪರಮೇಶ್ವರ್ ಅವರ ಮೇಲೆ ಷಡ್ಯಂತ್ರ ರೂಪಿಸಿ ಕಲ್ಲು ತೂರಿದ ಘಟನೆಯು ಕರ್ನಾಟಕವೇ ತಲೆತಗ್ಗಿಸುವಂತಹದ್ದು. ವಿರೋಧ ಪಕ್ಷಗಳ ನಾಯಕರ ಮೊದಲಿಂದಲೂ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಸಲಾಗುತ್ತಿದೆ. ಇದು ಅಮಿತ್ ಶಾ ಅವರ "ಗಲಭೆ ನಡೆಯುತ್ತದೆ" ಎಂಬ ಎಚ್ಚರಿಕೆಯ ಹಿಂದಿನ ಪೂರ್ವಭಾವಿ ತಯಾರಿಗಳೇ?' ಎಂದು ಕೆಪಿಸಿಸಿ ಕೇಳಿದೆ.
'ಯುಪಿ, ಬಿಹಾರದಿಂದ ಬಿಜೆಪಿ ಬಾಡಿಗೆ ಗೂಂಡಾಗಳನ್ನು ಕರೆಸಿ ಪ್ರತಿ ಕ್ಷೇತ್ರಗಳಲ್ಲಿ ಬಿಟ್ಟಿರುವುದು ವರದಿಯಾಗಿದೆ. ಈ ಗೂಂಡಾಪಡೆ ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಷಡ್ಯಂತ್ರ ನಡೆಸಿರುವುದಕ್ಕೆ ಜಿ. ಪರಮೇಶ್ವರ್ ಅವರ ಮೇಲಿನ ಹಲ್ಲೆಯೇ ಸಾಕ್ಷಿ. ಚುನಾವಣಾ ಆಯೋಗ ಶಾಂತಿಯುತ ಮತದಾನ ನಡೆಸಲು ಕ್ರಮವಹಿಸಬೇಕು. ದಲಿತ ನಾಯಕರ ಮೇಲೆ ಬಿಜೆಪಿಗೆ ಏಕಿಷ್ಟು ದ್ವೇಷ?' ಎಂದು ಕೇಳಿದೆ.

ಕೊರಟಗೆರೆಯ ಭೈರೇನಹಳ್ಳಿಯಲ್ಲಿ ಪರಮೇಶ್ವರ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಕಾಂಗ್ರೆಸ್ನ ಮಾಜಿ ಡಿಸಿಎಂ ಮೇಲೆ ಕಲ್ಲು ತೂರಾಟ ನಡೆದಿತ್ತು. ದಾಳಿಯಲ್ಲಿ ಅವರು ಗಾಯಗೊಂಡಿದ್ದರು. 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೊರಟಗೆರೆ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಸ್ಪರ್ಧಿಸುತ್ತಿದ್ದಾರೆ.
ಪರಮೇಶ್ವರ ಅವರು ಕೊರಟಗೆರೆಯಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ. ಅವರ ತಲೆಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು.
ಮೊನ್ನೆ ಏಪ್ರಿಲ್ 19 ರಂದು ಕೂಡ ಪರಮೇಶ್ವರ ಅವರು ಕೊರಟಗೆರೆ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ಮುಂದಾದಾಗ ಕಲ್ಲು ತೂರಾಟ ನಡೆದಿತ್ತು. ಈ ವೇಳೆ ಕಾಂಗ್ರೆಸ್ ಮುಖಂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಂದು ಕಲ್ಲು ಪೊಲೀಸರಿಗೆ ಬಡಿದಿದೆ. ಪ್ರಕರಣ ದಾಖಲಾಗಿದೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications