ಈ ಸಲ ಕಪ್ ನಮ್ದೆ ಎಂದ ಆರ್.ಅಶೋಕ್: ಆದರೆ ಸರ್ಕಾರ ನಮ್ಮದು ಎಂದು ಸಾಮ್ರಾಟ್‌ ಗೆ ತಿರುಗೇಟು ಕೊಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು, ಮೇ 12: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶಸಕ್ಕೆ ಕೌಂಟ್‌ ಡೌನ್‌ ಶುರುವಾಗಿದೆ. ಕಾಂಗ್ರೆಸ್‌ ಸರ್ಕಾರ ರಚನೆ ಕುರಿತು ಚರ್ಚೆ ನಡೆಸುತ್ತಿದ್ದು, ಕಾಂಗ್ರೆಸ್‌ ಏನೇ ಮಾಡಿದ್ರು ನಮ್ಮ ಬಳಿ ಸರ್ಕಾರ ರಚನೆಗೆ ಬಿ ಪ್ಲಾನ್‌ ರೆಡಿ ಇದೆ ಎಂದು ಆರ್‌ ಅಶೋಕ್‌ ಹೇಳಿದ್ದು, ಸಾಮ್ರಾಟ್‌ ಅಶೋಕ್‌ ವಿರುದ್ದ ಡಿ ಕೆ ಶಿವಕುಮಾರ್‌ ಕಿಡಿಕಾರಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಸಲ ಕಪ್ ನಮ್ದೆ ಅಂತ ಆರ್. ಅಶೋಕ್ ಹೇಳಿದ್ದು, ಕಪ್ ಅವರೇ ಮಾಡಿಕೊಳ್ಳಿ, ಟೋಪಿ ನೂ ಅವರೆ ಮಾಡಿಕೊಳ್ಳಿ. ಆದರೆ ಸರ್ಕಾರ ರುವುದು ನಮ್ಮದೆ ಎಂದು ಆರ್‌ ಅಶೋಕ್‌ ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಕಿಡಿಕಾರಿದ್ದಾರೆ.

dk shivakumar

ಎಕ್ಸಿಟ್ ಫೋಲ್ ಬಗ್ಗೆ ನನಗೆ ನಂಬಿಕೆ ಇಲ್ಲ. ನನ್ನ ಪ್ರಕಾರ 140 ಸ್ಥಾನ ಬರುತ್ತೆ, ಅದಕ್ಕಿಂತ ಯಾವುದೇ ಕಾರಣಕ್ಕೂ ಕಡಿಮೆ ಆಗಲ್ಲ. ನನ್ನ ಅಚಲವಾದ ನಂಬಿಕೆ ಇದೆ ನಮಗೆ 140 ಸ್ಥಾನ ಬರುತ್ತೆ, ಈ ಬಾರಿ ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯವರು ಎಷ್ಟೋ ಹಣ ಖರ್ಚು ಮಾಡಿರಬಹುದು. ದೊಡ್ಡ ನಾಯಕರು ಪ್ರಚಾರ ಮಾಡಿರಬಹುದು, ಮಿಷನ್ಸ್ ನ ದುರ್ಬಳಕೆ ಮಾಡಿಕೊಳ್ಳುವ ಪ್ರಯತ್ನ ಕೂಡಾ ನಡೆದಿದೆ, ಅದರ ಬಗ್ಗೆ ನಾನು ಈಗ ಮಾತನಾಡೋದಿಲ್ಲ. ನಮಗಂತು ಬಹುಮತ ಬರುವ ನಿರೀಕ್ಷೆ ಇದೆ ಎಂದು ಹೇಳಿದರು.

ಬಿಜೆಪಿ ಯವರು ಸರ್ಕಾರ ರಚನೆ ಮಾಡಲು ತೆರೆ ಮರೆ ಸರ್ಕಸ್ ಮಾಡುತ್ತಿದ್ದಾರೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ತೆರೆ ಮರೆ ಏನು ಇಲ್ಲ, ಕುಮಾರಸ್ವಾಮಿ ಏನೇಳ್ತಾರೋ ಬಿಡ್ತಾರೋ ಗೊತ್ತಿಲ್ಲ. ಮೈತ್ರಿ ಬಗ್ಗೆ ಮಾತಾಡಿದಾರೆ. ಕುಮಾರಸ್ವಾಮಿ ಕಾರ್ಯಕರ್ತರಿಗೆ ಧೈರ್ಯ ತುಂಬಲು ಬಹುಮತ ಬರುತ್ತೆ, ವಿಸರ್ಜನೆ ಮಾಡ್ತೀನಿ ಅಂತ ಹೇಳಿರ ಬಹುದು ಎಂದು ಹೇಳಿದರು.

ನನಗೆ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ. ನನ್ನ ಪ್ರಕಾರ 141 ಸ್ಥಾನ ಗೆಲ್ಲುತ್ತೇವೆ. ನಮ್ಮ ಸಮೀಕ್ಷೆಯಲ್ಲಿ ಎಕ್ಸಿಟ್ ಪೋಲ್ ಸಮೀಕ್ಷೆಗಿಂತ ಹೆಚ್ಚು ಮಾದರಿಗಳಿಂದ ಸಂಗ್ರಹ ಮಾಡಲಾಗಿದೆ. ಕಾಂಗ್ರೆಸ್ ಪರವಾಗಿ ದೊಡ್ಡ ಅಲೆ ಇದೆ.

ಎಕ್ಸಿಟ್ ಪೋಲ್ ಸಮಿಕ್ಷೆಗಿಂತ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆಯಲಿದೆ ಹೊರತು ಕಡಿಮೆ ಆಗಲೂ ಸಾಧ್ಯವಿಲ್ಲ. ಎಕ್ಸಿಟ್ ಪೋಲ್ ನಲ್ಲಿ ನಮ್ಮ ಪರ ವಿಶ್ವಾಸ ತೋರಿದ್ದು ಅದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ನಿಚ್ಚಳ ಬಹುಮತ ಬರಲಿದೆ ಎಂಬುದು ನಮ್ಮ ನಂಬಿಕೆ. ನಾನು ಸ್ಥಳೀಯವಾಗಿ ಓಡಾಟ ಮಾಡಿದ್ದೇನೆ.

ಬಿಜೆಪಿ ಪ್ರತಿ ಕ್ಷೇತ್ರದಲ್ಲಿ ಎಷ್ಟೇ ದುಡ್ಡು ಸುರಿಸಿರಬಹುದು, ಎಷ್ಟೇ ದೊಡ್ಡ ನಾಯಕರು ಬಂದು ಪ್ರಚಾರ ಮಾಡಿರಬಹುದು. ಆವರೆ ಮತ ಎಂಬುದು ಬುಲೆಟ್ ಗಿಂತ ಶಕ್ತಿಶಾಲಿಯಾಗಿದೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಹೇಗೆ ಜನ ಬ್ರಿಟೀಷರ ಗುಂಡಿಗೆ ಹೆದರಲಿಲ್ಲವೋ, ಅದೇ ರೀತಿ ಜನ ಡಬಲ್ ಇಂಜಿನ್ ಸರ್ಕಾರ, ದುರಾಡಳಿತ, ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಮಾಡಿಕೊಂಡಿದ್ದರು. ಜನ ತಮ್ಮ ನಿರ್ಧಾರ ಬದಲಿಸುವುದಿಲ್ಲ. ನಾಳೆ ಮಧ್ಯಾಹ್ನ 1 ಗಂಟೆ ವೇಳೆಗೆ ಫಲಿತಾಂಶ ಬರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+