ಹಿಂದುತ್ವದ ಪ್ರಯೋಗಶಾಲೆಯಲ್ಲಿ ದಟ್ಟಗೊಂಡ ವಿರೋಧಾಭಾಸ: ಕೇಸರಿ vs ಬಿಜೆಪಿ- ಇದು ಪುತ್ತೂರಿನ ಕಥೆ
ಪುತ್ತೂರು, ಏಪ್ರಿಲ್ 29: ಹಿಂದುತ್ವದ ಪ್ರಯೋಗಶಾಲೆ ಎಂದೇ ಹೇಳಲಾಗುವ ಕರಾವಳಿ ಕರ್ನಾಟಕದ ಪುತ್ತೂರು ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಈ ಬಾರಿ ದೊಡ್ಡದೊಂದು ಸಂಕಷ್ಟ ಎದುರಾಗಿದೆ. ಕಾರಣ, ಬಿಜೆಪಿಯ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಖರ ಹಿಂದುತ್ವವಾಗಿಗಳ ಕೆಂಗಣ್ಣಿಗೂ ಬಿಜೆಪಿ ಗುರಿಯಾಗಿದೆ ಎಂಬ ಮಾತುಗಳು ಕೇಳಿಬಂದಿದೆ.
ಬಿಜೆಪಿಯ ಭದ್ರಕೋಟೆಯಾಗಿರುವ ಪುತ್ತೂರು ಕ್ಷೇತ್ರದಲ್ಲಿ 1994 ರಿಂದ ಕೇಸರಿ ಪಕ್ಷವು ಪ್ರಾಬಲ್ಯ ಮೆರೆಯುತ್ತಲೇ ಬಂದಿದೆ. 2013 ರಲ್ಲಿ ಮಾತ್ರ ಕಾಂಗ್ರೆಸ್‌ನ ಶಕುಂತಲಾ ಶೆಟ್ಟಿ ಬಿಜೆಪಿಯ ಸಂಜೀವ ಮಠಂದೂರರನ್ನು ಸೋಲಿಸಿದ್ದರು.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಪುತ್ತೂರಿನ ಹಿಂದುತ್ವವಾದಿಗಳ ಗುಂಪೊಂದು ಕೇಸರಿ ಪಕ್ಷದ ವಿರುದ್ಧ ಭಾರೀ ಅಸಮಾಧಾನವನ್ನು ಹೊಂದಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ.
1997ರಲ್ಲಿ ಪುತ್ತೂರು ಭಾಗದಲ್ಲಿ ನಡೆದ ಕೋಮುಗಲಭೆಯ ಸಂದರ್ಭದಲ್ಲಿ ಮುನ್ನೆಲೆಗೆ ಬಂದ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಅರುಣ್ ಕುಮಾರ್ ಪುತ್ತಿಲ ಅವರು ಈ ಬಾರಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರಿಗೆ ಟಿಕೆಟ್ ತಪ್ಪಿರುವ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿ ಆಶಾ ತಿಮ್ಮಪ್ಪ ಗೌಡ ಅವರನ್ನು ಕಣಕ್ಕಿಳಿಸಿದೆ.
ಕಟ್ಟರ್ ಹಿಂದುತ್ವವಾದಿಯಾಗಿರುವ ಪುತ್ತಿಲ ಅವರು ಯೋಗಿ ಆದಿತ್ಯನಾಥ್ಶೈಲಿಯ ಆಡಳಿತದಲ್ಲಿ ನಂಬಿಕೆ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಸರಿಸುಮಾರು 51,000 ಕ್ಕೂ ಹೆಚ್ಚು ಮುಸ್ಲಿಂ ಮತದಾರರನ್ನು ಹೊಂದಿರುವ ಪುತ್ತೂರಿನಲ್ಲಿ ಪ್ರಬಲ ಹಿಂದುತ್ವವನ್ನು ಪ್ರತಿಪಾದಿಸುವ ಪುತ್ತಿಲರಂತ ಮುಖಂಡರನ್ನು ಬಿಜೆಪಿ ಕಣಕ್ಕಿಸಬೇಕೆಂಬುದು ಕಾರ್ಯಕರ್ತರ ಆಶಯವಾಗಿತ್ತು.
ಬಿಜೆಪಿಯಲ್ಲಿನ ಬಂಡಾಯ ಇದೇ ಮೊದಲಲ್ಲ
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿಯು ಬಂಡಾಯಕ್ಕೆ ಸಾಕ್ಷಿಯಾಗುತ್ತಿರುವುದು ಇದೇ ಮೊದಲಲ್ಲ. 2008 ರಲ್ಲಿ, ಹಿರಿಯ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕ ದಿವಂಗತ ಉರಿಮಜಲು ರಾಮ ಭಟ್ಟ ಅವರು ಹಿಂದುತ್ವದ ಕಾರಣಕ್ಕಾಗಿ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ತಮ್ಮ ನಿಷ್ಠರಾದ ಶಕುಂತಲಾ ಶೆಟ್ಟಿಗೆ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಸಾರ್ವಜನಿಕವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದರು. ಶಾಕುಂತಲಾ ಶೆಟ್ಟಿ ಅವರು ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಮುಂದೆ ಇದೇ ಶಾಕುಂತಲಾ ಶೆಟ್ಟಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ 2013 ರ ಚುನಾವಣೆಯಲ್ಲಿ ವಿಜಯಶಾಲಿಯಾಗಿದ್ದರು. ಇದೇ ಹಿಂದುತ್ವ ಕಾರ್ಯಕರ್ತರು ಅವರ ಗೆಲುವಿಗೆ ಶ್ರಮಿಸಿದ್ದರು ಎಂಬುದು ಗಮನಾರ್ಹವಾಗಿದೆ.
ಕೇಸರಿ ವರ್ಸ್‌ಸ್ ಬಿಜೆಪಿ
ಈಗ ಪುತ್ತಿಲ ಅವರು ಬಿಜೆಪಿಯಿಂದ ಅಸಮಾಧಾನಗೊಂಡು ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ. ಹಿಂದುತ್ವದ ಪ್ರತಿಪಾದಕರಾಗಿರುವ ಅವರ ಮೇಲೆ ಐದು ಪ್ರಕರಣಗಳು ಬಾಕಿ ಉಳಿದಿವೆ. ನಾಮಪತ್ರ ಸಲ್ಲಿಸುವ ವೇಳೆ ಕನಿಷ್ಠ 15000 ರಿಂದ 20000 ಬೆಂಬಲಿಗರನ್ನು ಕರೆತಂದಿದ್ದರು.
ಭಜರಂಗದಳದೊಂದಿಗೆ ದೀರ್ಘ ಕಾಲದ ಸಂಬಂಧ ಹೊಂದಿರುವ ಪುತ್ತಿಲ ಅವರು ಪುತ್ತೂರಿನಲ್ಲಿ ಸ್ಥಳೀಯ ಹಿಂದುತ್ವವಾದಿಗಳ ಪೋಸ್ಟರ್ ಬಾಯ್ ಆಗಿದ್ದಾರೆ. ಆರೆಸ್ಸೆಸ್ ಮತ್ತು ಬಿಜೆಪಿಯಿಂದ ಅಸಮಾಧಾನಗೊಂಡಿದ್ದ ಪುತ್ತಿಲ 2005 ರಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರೊಂದಿಗೆ ಕೈಜೋಡಿಸಿದರು.
ಕುತೂಹಲಕಾರಿ ವಿವಾರವೆಂದರೆ, ಕಾರ್ಕಳ ಕ್ಷೇತ್ರದಲ್ಲಿ ಬಿಜೆಪಿಯ ಸುನೀಲ್ ಕುಮಾರ್ ವಿರುದ್ಧ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇವರಿಬ್ಬರನ್ನು ಗುರು ಮತ್ತು ಶಿಷ್ಯ ಎಂದು ನೋಡಲಾಗುತ್ತದೆ.
ಇದೇ ವೇಳೆ, ಪುತ್ತಿಲ ಅವರ ಬಗ್ಗೆ ಏಕವಚನದಲ್ಲೇ ವಾಗ್ದಾಳಿ ನಡೆಸಿರುವ ಆರ್‌ಎಸ್‌ಎಸ್ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಅವರು ಹಿಂದುಗಳಿಗೆ ಹೊಡೆದ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ ಎಂದು ಕೇಳಿದ್ದಾರೆ.
ಪುತ್ತೂರಿನಲ್ಲಿ ಪುತ್ತಿಲ ಅವರ ಸ್ಪರ್ಧೆಯಿಂದ ಬಿಜೆಪಿಗೆ ಹೊಡೆತ ಬೀಳುವುದಂತೂ ಪಕ್ಕಾ ಆಗಿದೆ. ಹಿಂದುತ್ವವಾದಿಗಳ ಕೆಂಗಣ್ಣಿಗೆ ಗುರಿಯಾಗಿರುವ ಬಿಜೆಪಿ ನಾಯಕರು ಮುಜುಗುರವನ್ನು ಅನುಭವಿಸಲಿರುವುದು ಗೋಚರವಾಗುತ್ತಿದೆ. ಪುತ್ತೂರಿನ ರಣಕಣವೀಗ ಕೇಸರಿ ವರ್ಸಸ್ ಬಿಜೆಪಿಯಂತಾಗಿರುವುದು ವಿಪರ್ಯಾಸವೇ ಸರಿ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications