ಬಿಜೆಪಿಗೆ ಬಂಡಾಯದ ಬಿಸಿ; ಬಿಜೆಪಿಯ ಯಾವ ನಾಯಕರು ನನ್ನನ್ನು ಸಂಪರ್ಕಿಸಿಲ್ಲ ನಾನು ಸ್ಪರ್ಧೆ ಮಾಡುತ್ತೇನೆ: ಕೃಷ್ಣಯ್ಯ ಶೆಟ್ಟಿ
ಬೆಂಗಳೂರು,ಏಪ್ರಿಲ್24: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿ ಉಳಿದಿದ್ದು, ಅಧಿಕಾರದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಮತ್ತು ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಈಗಾಗಲೇ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಹಲವು ನಾಯಕರು ಬಿಜೆಪಿಗೆ ಗುಡ್ ಬೈ ಹೇಳಿದ್ರೆ. ಇನ್ನೂ ಕೆಲ ನಾಯಕರ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷಗಳ ಟಿಕೆಟ್ ವಂಚಿತರು ಬಂಡಾಯದ ಬಾವುಟ ಹಾರಿಸಿರುವುದು ರಾಷ್ಟ್ರೀಯ ಪಕ್ಷ ಬಿಜೆಪಿಗೆ ದೊಡ್ಡ ತಲೆನೋವು ತಂದಿದೆ. ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಮಾಲೂರು ಕೃಷ್ಣಯ್ಯ ಶೆಟ್ಟಿ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಗಾಂಧಿ ನಗರದ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಪ್ತಗಿರಿ ಗೌಡ ಅವರ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿದ್ದು, ಸೋಮವಾರ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಇಂದು ನಾಮಪತ್ರ ವಾಪಸ್ ಪಡೆಯದೇ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
ಗಾಂಧಿನಗರ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಮಾಲೂರು ಕೃಷ್ಣಯ್ಯ ಶೆಟ್ಟಿ ಟಿಕೆಟ್ ಕೈ ತಪ್ಪಿದ್ದು, ಬಿಜೆಪಿ ಹೈಕಮಾಂಡ್ ಮಾಜಿ ಸಚಿವ ರಾಮಚಂದ್ರಗೌಡ ಅವರ ಪುತ್ರ ಸಪ್ತಗಿರಿಗೌಡ ಅವರಿಗೆ ಮಣೆ ಹಾಕಿದೆ. ಇದರಿಂದ ತೀವ್ರ ಅಸಮಾಧಾನಗೊಂಡಿರುವ ಕೃಷ್ಣಯ್ಯ ಶೆಟ್ಟಿ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ.
ಇನ್ನೂ 2023 ರ ವಿಧಾನಸಭಾ ಚುನಾವಣೆಯ ಬಳಿಕ ಬಿಬಿಎಂಪಿ ಚುನಾವಣೆಯ ಮೇಲೆ ಕಣ್ಣೀಟ್ಟಿರುವ ಬಿಜೆಪಿ ಹೈಕಮಾಂಡ್ ಗಾಂಧಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಾಬಲ್ಯ ಹೊಂದಿರುವ ಮಾಜಿ ಕೆಪಿಸಿಸಿ ಅಧ್ಯಕ್ಷ ಹಾಗೂ ಗಾಂಧಿ ನಗರ ಹಾಲಿ ಶಾಸಕ ದಿನೇಶ್ ಗುಂಡೂವಾರ್ ಸೋಲಿಸಲು ಮಾಜಿ ಸಚಿವ ರಾಮಚಂದ್ರಗೌಡ ಅವರ ಪುತ್ರ ಸಪ್ತಗಿರಿಗೌಡ ಅವರಿಗೆ ಟಿಕೆಟ್ ನೀಡಿದೆ. ಆದರೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಕೃಷ್ಣಯ್ಯ ಶೆಟ್ಟಿ ಟಿಕೆಟ್ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿದು, ಬಿಜೆಪಿಯ ಮತಗಳೆ ವಿಭಜನೆಯಾಗುವ ಆತಂಕ ಶುರುವಾಗಿದೆ.
ಈ ಕುರಿತು ಬಿಜೆಪಿ ಬಂಡಾಯ ಅಭ್ಯರ್ಥಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮಾತನಾಡಿ, ನಾನು ಬಿಜೆಪಿ ಪಕ್ಷ ಬಿಟ್ಟು ಹೋಗಲ್ಲ. ಬಿಜೆಪಿಯಲ್ಲಿಯೇ ಇರುತ್ತೇನೆ. ಗಾಂಧಿನಗರ ಕ್ಷೇತ್ರದಿಂದ ನಾನು ಕಣದಲ್ಲಿದ್ದೇನೆ, ಮಾಜಿ ಮುಖ್ಯಮಂತ್ರಿಗಳು ಯಡಿಯೂರಪ್ಪನವರು ದುಡುಕಬೇಡ ಎಂದು ಹೇಳಿದರಷ್ಟೇ ಎಂದು ಹೇಳಿದರು.
ಇನ್ನೂ ಬಿಜೆಪಿಯ ಯಾವ ನಾಯಕರು ನನ್ನನ್ನು ಸಂಪರ್ಕಿಸಲಿಲ್ಲ. ನಿಮ್ಮೆಲ್ಲರ ಸಹಕಾರ, ನಿಮ್ಮೆಲ್ಲರ ಆಶೀರ್ವಾದ ನಾನು ಗಾಂಧಿನಗರದಲ್ಲಿ ಗೆಲ್ಲುತ್ತೇನೆ, ಗೆದ್ದೆ ಗೆಲ್ಲುತ್ತೇನೆ, ಯಾವುದೇ ಬೇರೆ ರೀತಿಯ ನಿರ್ಣಯಗಳನ್ನು ತೆಗೆದುಕೊಳ್ಳಬೇಡ ಎಂದು ಬಿಎಸ್ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಮಾತನಾಡಿದ್ದರು. ಅವರ ಲೆಕ್ಕಾಚಾರಗಳೇ ಬೇರೆ ಇದೆ, ನನ್ನಿಂದ ಅವರಿಗೆ ಅನುಕೂಲ ಆಗುತ್ತೆ ಎನ್ನುವ ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಹೇಳಿದರು.












Click it and Unblock the Notifications