CM Post fight in Congress: ನಾನೂ 50 ಶಾಸಕರನ್ನು ಕರೆದೊಯ್ಯಬಹುದು: ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ಬೆಂಗಳೂರು, ಮೇ17: ರಾಜ್ಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್‌ ನಲ್ಲಿ ಮುಖ್ಯಮಂತ್ರಿ ಆಯ್ಕೆ ಕಸರತ್ತು ಹೈಕಮಾಂಡ್‌ ಅಂಗಳವನ್ನ ತಲುಪಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರ ನಡೆಗೆ ಮಾಜಿ ಉಪಮುಖ್ಯಮಂತ್ರಿ ಬೇಸರ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್ ಪಕ್ಷದ ಹೈಕಮಾಂಡ್​ಗೆ ಕಗ್ಗಂಟಾಗಿ ಪರಿಣಮಿಸಿರುವ ಬೆನ್ನಲ್ಲೇ, ನಾನೂ ಸಿಎಂ ಆಗಲು ಸಿದ್ಧನಿದ್ದೇನೆ ಎಂದು ಜಿ ಪರಮೇಶ್ವರ ಹೇಳಳುವ ಮೂಲಕ ನಾನೂ 50 ಶಾಸಕರನ್ನು ಕರೆದೊಯ್ಯಬಹುದು. ಆದರೆ, ಎಂದಿಗೂ ಲಾಬಿ ಮಾಡುವುದಿಲ್ಲ ಎಂದು ಪರಮೇಶ್ವರ ಹೇಳಿದ್ದಾರೆ.

dr. g parameshwara

ನಾನು ಸಹ 50 ಶಾಸಕರನ್ನ ಕರೆದುಕೊಂಡು ಹೋಗಿ ಗುಲ್ಲೆಬ್ಬಿಸಬಹುದು, ಆದರೆ, ನಾನು ಹಾಗೇ ಮಾಡಲ್ಲ. ನನಗೆ ಪಕ್ಷದ ಶಿಸ್ತು ಮುಖ್ಯ ಎಂದು ಹೇಳಿದ ಅವರು, ನನಗೆ ಹೈಕಮಾಂಡ್ ಮೇಲೆ ನಂಬಿಕೆ ಇದೆ. ನನಗೆ ಕೆಲವು ತತ್ವಗಳಿವೆ ಎಂದು ಹೇಳುವ ಮೂಲಕ ಡಿ ಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ನಡೆಗೆ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾನು ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ ಎಂಬುದು ಹೈಕಮಾಂಡ್‌ಗೆ ತಿಳಿದಿದೆ. ನಾನೂ ಸಹ ಪಕ್ಷಕ್ಕೆ ಸಹಾಯ ಮಾಡಿದ್ದೇನೆ. ಅಧಿಕಾರದ ವಿಚಾರದಲ್ಲಿ ಹೇಳುವುದಾದರೆ ನಾನು ಉಪ ಮುಖ್ಯಮಂತ್ರಿಯಾಗಿದ್ದೆ. ಹೀಗಾಗಿ ಯಾವುದೇ ಲಾಬಿಯನ್ನ ನಡೆಸದೇ ಸುಮ್ಮನಿದ್ದೇನೆ. ಹೈಕಮಾಂಡ್ ತೀರ್ಮಾನ ಕೈಗೊಂಡು ಸರ್ಕಾರ ಮುನ್ನಡೆಸಲು ಹೇಳಿದರೆ, ನಾನು ಆ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಿದ್ಧನಿದ್ದೇನೆ. ಶೀಘ್ರದಲ್ಲೇ ಮುಖ್ಯಮಂತ್ರಿ ಹುದ್ದೆಯ ಪೈಪೋಟಿ ಕೊನೆಗೊಳ್ಳಬಹುದು ಎಂಬ ಆಶಾವಾದವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ಉಪಮುಖ್ಯಮಂತ್ರಿ ವಿಚಾರವಾಗಿ ಮಾತನಾಡಿದ ಅವರು, ಉಪ ಮುಖ್ಯಮಂತ್ರಿಗಳ ನೇಮಕ ಸಾಧ್ಯತೆಯನ್ನು ಅವರು ತಳ್ಳಿ ಹಾಕಿಲ್ಲ. ಆ ಬಗ್ಗೆ ಈಗಲೇ ಏನೂ ಹೇಳಲಾಗದು ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+