BJP V/S BJP: ಕಮಲಕೋಟೆಯಲ್ಲಿ ಭುಗಿಲೆದ್ದ ಬಂಡಾಯ; ಗಾಂಧಿನಗರದ ಕಣದಲ್ಲಿ ಮಾಲೂರು ಕೃಷ್ಣಯ್ಯ ಶೆಟ್ಟಿ
ಬೆಂಗಳೂರು,ಏಪ್ರಿಲ್22: ರಾಜ್ಯ ವಿಧಾನಸಭಾ ಚುನಾವಣಾ ಕಣ ಜೋರಾಗಿದೆ. ಇತ್ತ ಟಿಕೆಟ್ ಹಂಚಿಕೆಯಿಂದಾಗಿ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಜೋರಾಗಿದೆ. ಈಗಾಗಲೇ ಟಿಕೆಟ್ ಘೋಷಣೆಯಿಂದಾಗಿ ಹಲವು ಜನ ನಾಯಕರು ಬಿಜೆಪಿಗೆ ಗುಡ್ ಬೈ ಹೇಳಿದ್ರೆ, ಇತ್ತ ಟಿಕೆಟ್ ಕೈತಪ್ಪಿದ ಹಿನ್ನಲೆ ಕೆಲ ನಾಯಕರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಮಾಲೂರು ಕೃಷ್ಣಯ್ಯ ಶೆಟ್ಟಿ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಗಾಂಧಿ ನಗರದ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಪ್ತಗಿರಿ ಗೌಡ ಅವರ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿದ್ದು, ಚುನಾವಣಾ ಕಣದಲ್ಲಿ ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದಾರೆ. ಇತ್ತ ಬಿಜೆಪಿಗೆ ಬಂಡಾಯ ತಲೆಬಿಸಿ ತಂದಿದೆ.

ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರು ಗಾಂಧಿನಗರ ಕ್ಷೇತ್ರದಲ್ಲಿಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರದಲ್ಲಿಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದರು. ಆದರೆ, ಬಿಜೆಪಿ ವರಿಷ್ಠರು ಮಾಜಿ ಸಚಿವ ರಾಮಚಂದ್ರಗೌಡ ಅವರ ಪುತ್ರ ಸಪ್ತಗಿರಿಗೌಡ ಅವರಿಗೆ ಮಣೆ ಹಾಕಿದೆ. ಇದರಿಂದ ತೀವ್ರ ಅಸಮಾಧಾನಗೊಂಡಿರುವ ಕೃಷ್ಣಯ್ಯ ಶೆಟ್ಟಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಬುಧವಾರ ಉಮೇದುವಾರಿಕೆ ಸಲ್ಲಿಸಿದ್ದಾರೆ. ಭರ್ಜರಿ ರೋಡ್ ಶೋ ನಡೆಸುವ ಮೂಲಕ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಗಾಂಧಿ ನಗರದ ಹಾಲಿ ಶಾಸಕರಾದ ದಿನೇಶ್ ಗುಂಡೂರಾವ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ದಿನೇಶ್ ಗುಂಡೂರಾವ್ ಅವರನ್ನ ಸೋಲಿಸಲು ಸರ್ವೆ ನಡೆಸಿ ಅಳೆದುತೂಗಿ ಮಾಜಿ ಸಚಿವ ರಾಮಚಂದ್ರಗೌಡ ಅವರ ಪುತ್ರ ಸಪ್ತಗಿರಿಗೌಡ ಅವರನ್ನ ಕಣಕ್ಕಿಳಿಸಿದ್ದು, ಇತ್ತ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಮಾಲೂರು ಕೃಷ್ಣಯ್ಯ ಶೆಟ್ಟಿ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಬಿಜೆಪಿಯ ಮತಗಳೆ ವಿಭಜನೆಯಾಗುವ ಆತಂಕ ಶುರುವಾಗಿದ್ದು, ಕಾಂಗ್ರೆಸ್ ಗೆ ಇದು ಲಾಭವಾಗಲಿದೆ ಎಂದು ಹೇಳಲಾಗಿದೆ.
ಕೊನೆ ಕ್ಷಣದವರೆಗೆ ತಮಗೆ ಟಿಕೆಟ್ ದೊರೆಯುವ ಭರವಸೆ ಇಟ್ಟುಕೊಂಡಿದ್ದ ಮಾಲೂರು ಕೃಷ್ಣಯ್ಯ ಶೆಟ್ಟಿ ಅವರು ಈಗಾಗಲೇ ಹೇಳಿರುವಂತೆ ಬಿಜೆಪಿ ಪಕ್ಷ ನಡೆಸಿದ ಸಮೀಕ್ಷೆಯಲ್ಲಿ ತಮಗೆ ಹೆಚ್ಚಿನ ಮತಗಳು ಬಂದಿದ್ದು, ಕಾರ್ಯಕರ್ತರ ಒಲವು ಶೇ 61 ರಷ್ಟಿತ್ತು. ಆದರೆ ಕಾರ್ಯಕರ್ತರು ಸ್ಪರ್ಧಿಸುವಂತೆ ಒತ್ತಡ ಹೇರಿದ್ದು, ಅವರ ಒತ್ತಾಸೆಯಿಂದ ನಾನು ಕಣಕ್ಕಿಳಿದಿದ್ದೇನೆ. ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ತಾವು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಆದರೆ ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.












Click it and Unblock the Notifications