ಯಾರಾಗ್ತಾರೆ ವಿಪಕ್ಷ ನಾಯಕ: ಮುಂದಿನ ವಾರ ವಿಪಕ್ಷ ನಾಯಕನ ಆಯ್ಕೆ ಎಂದ ಕಟೀಲ್‌! ಯಾರಿದ್ದಾರೆ ರೇಸ್‌ ನಲ್ಲಿ

ಬೆಂಗಳೂರು, ಮೇ 17: ರಾಜ್ಯ ಕಾಂಗ್ರೆಸ್‌ ನಲ್ಲಿ ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರಿಗೆ ಕಗ್ಗಂಟಾಗಿದ್ರೆ, ಇತ್ತ ಬಿಜೆಪಿಯಲ್ಲೂ ವಿಪಕ್ಷ ನಾಯಕ ಯಾರಾಗ್ಬೇಕು ಎಂಬ ಬಗ್ಗೆ ಕಮಲ ಪಾಳಯದಲ್ಲಿ ಚರ್ಚೆ ನಡೆಯುತ್ತಿದೆ.

ಈ ಕುರಿತು ಬುಧವಾರ ಮಾಧ್ಯಮಗಳ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ಮುಂದಿನ ವಾರ ವಿಪಕ್ಷ ನಾಯಕರ ಆಯ್ಕೆ ನಡೆಯಲಿದೆ. ಒಂದು ವಾರ ಶಾಸಕರು ತಮ್ಮ ಕ್ಷೇತ್ರದಲ್ಲಿದ್ದು, ಜನರಿಗೆ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

karnataka polls: Leader Of Opposition Will Be Chosen Next Week Says Nalin Kumar Kateel

ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಯಾರೆಂದು ಪ್ರಕಟಿಸಲು ಸಾಧ್ಯವಾಗಿಲ್ಲ. ಅದಕ್ಕಾಗಿ ಅವರು ಬಿಜೆಪಿ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ಸಿನವರು ಯಾರನ್ನಾದರೂ ಮುಖ್ಯಮಂತ್ರಿ ಮಾಡಲಿ. ಅದು ಅವರ ಆಂತರಿಕ ವಿಚಾರ. ಜನರು ಅವರಿಗೆ ಬಹುಮತ ಕೊಟ್ಟಿದ್ದಾರೆ. ನಾವು ಅದನ್ನು ಸ್ವೀಕಾರ ಮಾಡಿ ವಿರೋಧ ಪಕ್ಷವಾಗಿ ರಚನಾತ್ಮಕ ಕೆಲಸ ಮಾಡಲಿದ್ದೇವೆ ಎಂದರು.

ಇನ್ನೂ ಕಾಂಗ್ರೆಸ್ ಮುಖ್ಯಮಂತ್ರಿ ಆಯ್ಕೆ ವಿಷಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಜನತೆ ವಿದ್ಯುತ್ ಬಿಲ್ ಕಟ್ಟಬಾರದು. ವಿದ್ಯುತ್ ಬಿಲ್ ಕಟ್ಟುವುದಿಲ್ಲ ಎಂದು ಜನರು ಗಲಾಟೆ ಮಾಡುವುದು ಸಹಜ. ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರು ತಮ್ಮ ಸರಕಾರ ಬಂದ ಬಳಿಕ ವಿದ್ಯುತ್ ಬಿಲ್ ಕಟ್ಟದಿರಲು ಹೇಳಿದ್ದರು ಎಂದು ತಿಳಿಸಿದರು.

ಯಾರಾಗ್ತಾರೆ ವಿರೋಧ ಪಕ್ಷದ ನಾಯಕ?

ಮೂರು ವರ್ಷಗಳ ಕಾಲ ಆಡಳಿತ ನಡೆಸಿದ್ದ ಬಿಜೆಪಿ ಈ ಬಾರಿಯೂ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಯುವ ನಿರೀಕ್ಷೆಯಲ್ಲಿತ್ತು, ಆದರೆ ಬಿಜೆಪಿ ನಡೆಸಿದ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿದ್ದು, ಕಾಂಗ್ರೆಸ್‌ ಅಭೂತಪೂರ್ವ ಗೆಲುವು ಕಂಡಿದ್ರೆ, ಇತ್ತ ಬಿಜೆಪಿ 66 ಸ್ಥಾನಗಳಿಗೆ ತೃಪ್ತಿ ಪಡೆದುಕೊಂಡಿದೆ.

karnataka polls: Leader Of Opposition Will Be Chosen Next Week Says Nalin Kumar Kateel

ಇನ್ನೂ ಸೋಲಿನ ಪರಾಮರ್ಶೆ ಹಾಗೂ ಮುಂದಿನ ಲೋಕಸಭಾ ಚುನಾವಣೆಯ ತಯಾರಿ ನಡೆಸಲು ಮುಂದಾಗಿರುವ ಕಮಲ ಪಾಳಯದಲ್ಲಿ ಮುಂದಿನ ವಿಪಕ್ಷ ನಾಯಕ ಯಾರು ಎಂಬ ಚರ್ಚೆಯೂ ಆರಂಭವಾಗಿದೆ. ಇತ್ತ ಹಂಗಾಮಿ ಸಿಎಂ ಆಗಿರುವ ಬಸವರಾಜ ಬೊಮ್ಮಾಯಿ ಒಲಿಯಬಹುದೆಂಬುದು ಒಂದು ಲೆಕ್ಕಾಚಾರವಿದೆ. ಆದರೆ, ಆಡಳಿತ ಪಕ್ಷವನ್ನು ಎದುರಿಸುವಂತಹ ಸಮರ್ಥ ವಿಪಕ್ಷ ನಾಯಕ ಬೇಕು ಎನ್ನುವ ಲೆಕ್ಕಾಚಾರ ಬಿಜೆಪಿಯಲ್ಲಿ ಶುರುವಾಗಿದೆ. ಇತ್ತ ಹೀನಾಯ ಸೋಲಿಗೆ ಬೊಮ್ಮಾಯಿ ಆಡಳಿತ ವೈಖರಿಯೇ ಕಾರಣ ಎಂಬ ಟೀಕೆ ಹೆಚ್ಚಾಗಿದ್ದು, ಬಿಜೆಪಿಗೆ ಬಸವರಾಜ ಬೊಮ್ಮಾಯಿ ಆಯ್ಕೆ ಅನಿವಾರ್ಯವಾಗಬಹುದು.

ಇತ್ತ ಆಡಳಿತದ ಪಕ್ಷದಲ್ಲಿರುವ ಕಾಂಗ್ರೆಸ್‌ ನಾಯಕರನ್ನ ಎದುರಿಸಲು ಬಿಜೆಪಿಯಲ್ಲಿ ಸಮರ್ಥ ನಾಯಕರ ಕೊರತೆ ಎದ್ದು ಕಾಣುತ್ತಿದ್ದು, ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿದ್ದ, ಪಕ್ಷ ನಿಷ್ಠರು ಹಾಗೂ ಮೂಲ ಬಿಜೆಪಿಗರಾಗಿದ್ದ ಬಸನಗೌಡ ಪಾಟೀಲ್‌ ಯತ್ನಾಳ್‌ ಅಥವಾ ಸುನಿಲ್‌ ಕುಮಾರ್‌ ಸಹ ರೇಸ್‌ ನಲ್ಲಿ ಇದ್ದಾರೆ ಎನ್ನಲಾಗಿದ್ದು, ಮುಂದಿನ ವಾರದಲ್ಲಿ ವಿರೋಧ ಪಕ್ಷದ ನಾಯಕ ಯಾರಾಗ್ತಾರೆ ಎಂದು ತಿಳಿಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+