Narendra Modi: ರಾಜ್ಯ ದಂಡಯಾತ್ರೆಗೆ ಅಖಾಡ ರೆಡಿ: ನರೇಂದ್ರ ಮೋದಿಯಿಂದ 20 ಕ್ಕೂ ಹೆಚ್ಚು ರೋಡ್ ಶೋ; ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು,ಏಪ್ರಿಲ್25: ಮಿಷನ್ 150 ಟಾರ್ಗೆಟ್ ಹಾಕಿಕೊಂಡಿರುವ ರಾಜ್ಯ ಬಿಜೆಪಿ ಚುನಾವಣಾ ಅಖಾಡಕ್ಕೆ ವೇದಿಕೆ ರೆಡಿಯಾಗಿದೆ. ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸೇರಿದಂತೆ ಬಿಜೆಪಿ ಹೈಕಮಾಂಡ್ ನಾಯಕರು ರಾಜ್ಯಾದ್ಯಂತ ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದಾರೆ.
ಈಗಾಗಲೇ ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ಹಲವು ಬಾರೀ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ. ಇದೀಗ ಕರ್ನಾಟಕ ದಂಡಯಾತ್ರೆಗೆ ಅಖಾಡ ರೆಡಿಯಾಗಿದ್ದು, ರಾಜ್ಯದಲ್ಲಿ ನರೇಂದ್ರ ಮೋದಿಯಿಂದ 20 ಕ್ಕೂ ಹೆಚ್ಚು ರೋಡ್ ಶೋ ಹಾಗೂ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಮೂಲಕ ರಾಜ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ರಾಜ್ಯ ಘಟಕ ಸಕಲ ರೀತಿಯಲ್ಲಿ ಸಜ್ಜಾಗಿದೆ.

ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಕಣ ರಂಗೇರಿದ್ದು, ಜೆ.ಪಿ.ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್, ಅರುಣ್‍ಸಿಂಗ್, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರದಾನ್, ನಿರ್ಮಲಾ ಸೀತಾರಾಮನ್. ಮನ್ಸುಖ್ ಮಾಂಡವೀಯ, ಯೋಗಿ ಆದಿತ್ಯನಾಥ್, ದೇವೇಂದ್ರ ಫಡಣವಿಸ್, ಸಿ.ಟಿ.ರವಿ, ಅಣ್ಣಾಮಲೈ ಸೇರಿದಂತೆ 98 ಮಂದಿ ಬಿಜೆಪಿ ಕೇಂದ್ರ ನಾಯಕರು ಮತ್ತು ಕೇಂದ್ರ ಸಚಿವರು, ಪಕ್ಷದ ರಾಜ್ಯದ ನಾಯಕರು, ಸಚಿವರು, ಸಂಸದರು ಸೇರಿದಂತೆ 150 ರಾಜ್ಯ ನಾಯಕರು ಚುನಾವಣಾ ಪ್ರಚಾರವನ್ನ ನಡೆಸಲಿದ್ದಾರೆ.
ಇನ್ನೂ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿ ಉಳಿದಿದ್ದು, ರಾಜ್ಯದಲ್ಲಿ ಮೇ 29 ರಿಂದ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದಾರೆ. ಈಗಾಗಲೇ ಸಾಕಷ್ಟು ಬಾರಿ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದು, ಇದೀಗ ಅಂತಿಮ ಸುತ್ತಿನ ಸರಣಿ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.
ಈಗಾಗಲೇ ಮೋದಿ ರಾಜ್ಯ ಪ್ರವಾಸಕ್ಕೆ ರಾಜ್ಯ ಬಿಜೆಪಿ ಸಿದ್ದತೆಯನ್ನ ನಡೆಸುತ್ತಿದ್ದು, ರಾಜ್ಯದಲ್ಲಿ 6 ದಿನಗಳ ಮತ ಬೇಟೆಯಾಡಲಿರೋ ಪ್ರಧಾನಿ ಮೋದಿ, 20 ಕ್ಕೂ ಹೆಚ್ಚು ರೋಡ್ ಶೋ ಮತ್ತು ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ. ಏಪ್ರಿಲ್ 29ರಿಂದ ಮೇ 7ರವರೆಗೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಪ್ರಚಾರ ಕಾರ್ಯಕ್ರಮ ನಡೆಸಲಿದ್ದಾರೆ.

ಪ್ರಧಾನಿ ಮೋದಿ ಕಾರ್ಯಕ್ರಮದ ವಿವರ ಇಲ್ಲಿದೆ
ಏಪ್ರಿಲ್ 29 ರಂದು ಮೋದಿ ರೋಡ್ ಶೋ: ಹುಮ್ನಾಬಾದ್, ವಿಜಯಪುರ, ಕುಡಚಿ, ಬೆಂಗಳೂರು ಉತ್ತರ ಜಿಲ್ಲೆಯಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ.
ಏಪ್ರಿಲ್ 30: ಕೋಲಾರ, ಚನ್ನಪಟ್ಟಣ, ಬೇಲೂರು, ಮೈಸೂರು ಜಿಲ್ಲೆಗಳಲ್ಲಿ ಮೋದಿ ರೋಡ್ ಶೋ ಹಾಗೂ ಬೃಹತ್ ಸಮಾವೇಶಕ್ಕೆ ವೇದಿಕೆ ಸಜ್ಜು
ಮೇ 2: ಚಿತ್ರದುರ್ಗ, ವಿಜಯನಗರ, ಸಿಂಧನೂರು, ಕಲಬುರಗಿ ಜಿಲ್ಲೆಯಲ್ಲಿ ಭರ್ಜರಿ ಚುನಾವಣಾ ಪ್ರಚಾರ
ಮೇ 3: ಮೂಡುಬಿದಿರೆ, ಕಾರವಾರ, ಕಿತ್ತೂರಿನಲ್ಲಿ ಚುನಾವಣಾ ಪ್ರಚಾರ
ಮೇ 6: ಚಿತ್ತಾಪುರ, ನಂಜನಗೂಡು, ತುಮಕೂರು ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ ಭಾಗದಲ್ಲಿ ಮೋದಿ ಬೃಹತ್ ಸಮಾವೇಶ
ಮೇ 7: ಬಾದಾಮಿ, ಹಾವೇರಿ, ಶಿವಮೊಗ್ಗ ಗ್ರಾಮಾಂತರ, ಬೆಂಗಳೂರು ಕೇಂದ್ರದಲ್ಲಿ ಭರ್ಜರಿ ಚುನಾವಣಾ ಪ್ರಚಾರ












Click it and Unblock the Notifications