ರಾಜ್ಯದಲ್ಲಿ ಅಂತಿಮ ಹಂತದ ಮತಬೇಟೆ: ಪ್ರಧಾನಿ ಮೋದಿ ಮೂರು ದಿನಗಳ ಮೆಗಾ ಟೂರ್!

ಬೆಂಗಳೂರು,ಮೇ3: ಕರ್ನಾಟಕ ವಿಧಾನಸಭಾ ಚುನಾವಣೆ ತೀವ್ರ ಪೈಪೋಟಿಯ ಕಣವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಪ್ರಭಾವಳಿಯಲ್ಲಿಯಲ್ಲಿ ಅಧಿಕಾರ ಪಡೆಯಲು ಭಾರತೀಯ ಜನತಾ ಪಕ್ಷ ನಿರ್ಧರಿಸಿದಂತಿದೆ.

ಆಡಳಿತರೂಢ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಹಾಗೂ ಭ್ರಷ್ಟಚಾರದ ಆರೋಪ ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವ ಕಡಿಮೆಯಾಗಿದೆ ಎನ್ನುವ ಚರ್ಚೆ ಜೋರಾಗಿದ್ದು, ಮೋದಿ ಅಲೆಯಿಂದಾಗಿ ರಾಜ್ಯದಲ್ಲಿ ಜನರ ಮತ ಸೆಳೆಯಲು ರಾಜ್ಯ ಬಿಜೆಪಿ ಹಾಕಿಕೊಂಡ ಪ್ಲಾನ್‌ ನಂತೆ ಮೋದಿ ರಾಜ್ಯಾದ್ಯಂತ ಪ್ರವಾಸವನ್ನ ನಡೆಸಿ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರವನ್ನ ನಡೆಸಿದ್ದಾರೆ.

Karnataka Polls: PM Narendra Modi Karnataka tour schedule on may 5,6 and 7

ಇನ್ನೂ ಮೇ 10ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 15-20 ಸಮಾವೇಶ ಹಾಗೂ ರ್‍ಯಾಲಿಗಳನ್ನ ನಡೆಸಿದ್ದು, ಸದ್ಯ ರಾಜ್ಯದ ಕರಾವಳಿ ಭಾಗದಲ್ಲಿ ಪ್ರಚಾರ ಕಾರ್ಯದಲ್ಲಿ ಸಜ್ಜಾಗಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಏಳು ದಿನಗಳಷ್ಟೇ ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಅಂತಿಮ ಹಂತದಲ್ಲಿ ಮತಬೇಟೆಗೆ ಬಿಜೆಪಿ ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದೆ , ಪ್ರಧಾನಿ ನರೇಂದ್ರ ಮೋದಿ ಅವರ ಕೊನೆಯ ಹಂತದ ಕಸರತ್ತಿನ ಮೂಲಕ ಮತ್ತೆ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಲು ನಿರ್ಧಾರಿಸಿದ್ದು, ಮೋದಿ ಅವರು ಮೂರು ದಿನಗಳ ಮೆಗಾ ಟೂರ್ ಹಾಗೂ ರೋಡ್ ಶೋ ನಡೆಸಲಿದ್ದಾರೆ.

ಇನ್ನೂ ಮೇ 5 ರಿಂದ ಮೇ 7 ರವರೆಗೆ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಮತ್ತು ಸಾರ್ವಜನಿಕ ಸಭೆಗಳಲ್ಲಿ ಭಾಗಿಯಾಗಲಿದ್ದು, ಅಂತಿಮ ಹಂತದಲ್ಲಿ ಮತದಾರರ ಗಮನ ಸೆಳೆಯಲು ಕಸರತ್ತು ನಡೆಸಲಿದ್ದಾರೆ ಎನ್ನಲಾಗಿದೆ.

ಎಲ್ಲೆಲ್ಲಿ ಮೋದಿ ಟೂರ್ ?

ಚುನಾವಣಾ ದಿನಾಂಕ ಘೋಷಣೆ ಬಳಿಕ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಮೂರನೇ ಬಾರಿ‌ ಎಂಟ್ರಿ ಕೊಡಲಿದ್ದಾರೆ. ಮೇ 5 ರಂದು ಬಳ್ಳಾರಿ ಮತ್ತು ತುಮಕೂರುಗಳಲ್ಲಿ ಬೃಹತ್ ಸಾರ್ವಜನಿಕ ಸಭೆಗಳಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಅಂದು ರಾತ್ರಿ‌ ಬೆಂಗಳೂರಿನಲ್ಲಿ ಮೋದಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನೂ ಮೇ 6 ರಂದು ಬೆಂಗಳೂರಿನಲ್ಲಿ ಮೋದಿ ಅವರು ಐತಿಹಾಸಿಕ ಮೆಗಾ ರೋಡ್ ಶೋವನ್ನು ನಡೆಸಲಿದ್ದಾರೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಿ ವಿ ರಾಮನ್ ನಗರ ಕ್ಷೇತ್ರದಿಂದ‌ ಬ್ರಿಗೇಡ್ ರಸ್ತೆವರೆಗೆ ಮೊದಲ ಮೆಗಾ ರೋಡ್ ಶೋ ನಡೆಯಲಿದೆ. ಸುಮಾರು 8 ಕಿ.ಮೀ ವರೆಗೆ ಮೊದಲ ರೋಡ್ ಶೋ ನಡೆಯಲಿದೆ.

ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 8.30 ರ ತನಕ ಎರಡನೇ ಮೆಗಾ ರೋಡ್ ಶೋ ನಡೆಯಲಿದೆ. ಕೋಣನಕುಂಟೆ ಬಳಿಯ ಬ್ರಿಗೇಡ್ ಮಿಲೆನಿಯಂನಿಂದ ಸ್ಯಾಂಕಿ ಕೆರೆ ವರೆಗೆ 29.4 ಕಿ.ಮೀ ವರೆಗೆ ಎರಡನೇ ಮೆಗಾ ರೋಡ್ ಶೋದಲ್ಲಿ ಮೋದಿ‌ ಭಾಗಿಯಾಗಲಿದ್ದಾರೆ. ಎರಡನೇ ದಿನವೂ ಬೆಂಗಳೂರಿನಲ್ಲೇ ಮೋದಿ ವಾಸ್ತವ್ಯ ಹೂಡಲಿದ್ದಾರೆ.

ಇತ್ತ ಕಾಂಗ್ರೆಸ್‌ ಹಾಗೂ ಬಿಜೆಪಿಯ ಘಟಾನುಘಟಿ ನಾಯಕರ ಕ್ಷೇತ್ರಗಳಾದ ಬಾದಾಮಿ, ಹಾವೇರಿ, ಶಿವಮೊಗ್ಗ ಗ್ರಾಮೀಣ ಹಾಗೂ ನಂಜನಗೂಡು ಕ್ಷೇತ್ರಗಳಲ್ಲಿ ಮೇ 7 ರಂದು ನರೇಂದ್ರ
ಮೋದಿ ಪ್ರವಾಸ ನಡೆಸಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ನಡೆಸಲಿದ್ದಾರೆ. ಇನ್ನೂ ಈ ನಾಲ್ಕೂ ಕ್ಷೇತ್ರಗಳಲ್ಲಿ ಬೃಹತ್ ಸಾರ್ವಜನಿಕ ಸಭೆಗಳಲ್ಲಿ ಮೋದಿ ಭಾಷಣ ಮಾಡಲಿದ್ದಾರೆ.

ಈನ್ನೂ ಮೇ 7 ರಂದು ಸಂಜೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿ ಮೈಸೂರು ಏರ್‌ಪೋರ್ಟ್‌‌‌ ಮೂಲಕ ದೆಹಲಿಗೆ ವಾಪಸ್ ಆಗಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+