Karnataka Congress: ಕಾಂಗ್ರೆಸ್ ಸೇರಿದ ಒಂದೇ ದಿನಕ್ಕೆ ಆನಂದ್ ಸಿಂಗ್ ಸಹೋದರಿಗೆ ಎಐಸಿಸಿ ಕೊಟ್ಟ ಪ್ರಮುಖ ಸ್ಥಾನ ಏನು?
ಬೆಂಗಳೂರು,ಏಪ್ರಿಲ್ 24: ರಾಜ್ಯ ಬಿಜೆಪಿಯಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ರಾಜ್ಯ ಬಿಜೆಪಿಗೆ ಬಂಡಾಯದ ಬಿಸಿ ತಟ್ಟುತ್ತಿದೆ. ಈಗಾಗಲೇ ಸಾಲು ಸಾಲು ನಾಯಕರು ಬಿಜೆಪಿಗೆ ಗುಡ್ ಬೈ ಹೇಳಿದ್ದು, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ಸಹೋದರಿ ರಾಣಿ ಸಂಯುಕ್ತಾ ಶನಿವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ವಿಜಯನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಣಿ ಸಂಯುಕ್ತಾ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಈ ಬಾರಿ ಸಚಿವ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದರಿಂದ ತೀವ್ರ ಅಸಮಾಧಾನಗೊಂಡಿದ್ದ ಆನಂದ್ ಸಿಂಗ್ ಸಹೋದರಿ ಸಂಯುಕ್ತಾ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ಬಿಜೆಪಿಯಲ್ಲಿ ರಾಣಿ ಸಂಯುಕ್ತ ಸಿಂಗ್ ಬಿಜೆಪಿಯ ಮಹಿಳಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆಯಾಗಿದ್ದರು. ನಿನ್ನೆಯಷ್ಟೇ (ಭಾನುವಾರ) ಬಿಜೆಪಿ ಗೆ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ಸಹೋದರಿ ರಾಣಿ ಸಂಯುಕ್ತಾ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಇನ್ನೂ ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಣಿ ಸಂಯುಕ್ತಾ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಣಿ ಸಂಯುಕ್ತಾ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದು, ಉಪಾಧ್ಯಕ್ಷರಾ ಗಂಗಾಧರ ಗೌಡ ಬಿ. ಗೋಪಾಲ್ ನೇಮಕವಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ರಾಣಿ ಸಂಯುಕ್ತ, ಟಿ ನಾಗೇಶ್, ಪದ್ಮರಾಜ ರಾಮಯ್ಯ, ಶಿವಣ್ಣ ಪಟೇಲ್ ನೇಮಿಸಲಾಗಿದೆ.
ರಾಜ್ಯ ಕಾರ್ಯದರ್ಶಿಯಾಗಿ ಡಾ ಬಿ.ಸಿ ಮುದ್ರಗಂಗಾಧರ್ ಹಾಗೂ ಕೆ ಅಸ್ಲಂ ಪಾಷಾ ನೇಮಕವಾಗಿದ್ದಾರೆ. ರಾಜ್ಯ ವಕ್ತಾರರಾಗಿ ನಟಿ ಭಾವನಾ ರಾಮಣ್ಣ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ರೇಣುಕಾ ಚಿದಂಬರಂ ಅವರನ್ನು ನೇಮಕ ಮಾಡಲಾಗಿದೆ.
ರಾಣಿ ಸಂಯುಕ್ತ ವಿಜಯನಗರದಲ್ಲಿ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು ಆದರೆ ಇಲಿ ಸಚಿವ ಆನಂದಸಿಂಗ್ ಪುತ್ರ ಸಿದ್ಯಾರ್ಥಿ ಸಿಂಗ್ ಗೆ ಬಿಜೆಪಿ ಟಿಕೆಟ್ ನೀಡಿದೆ. ಇದರಿಂದ ಅಸಮಾಧಾನಗೊಂಡಿದ್ದ ರಾಣಿ ಸಂಯುಕ್ತ ಜೈರಾಮ್ ರಮೇಶ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸಮುಖದಲ್ಲಿ ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.












Click it and Unblock the Notifications