ಕರ್ನಾಟಕ ಚುನಾವಣೆಯಲ್ಲಿ 50-60 ಶಿವಸೇನೆ ಅಭ್ಯರ್ಥಿಗಳು!
Recommended Video

ಬೆಳಗಾವಿ ಏಪ್ರಿಲ್ 02: ಇನ್ನು ಕೆಲವೇ ವಾರಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸುಮಾರು 50-60 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಶಿವಸೇನೆ ಹೇಳಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಮಹಾರಾಷ್ಟ್ರ ಮೂಲದ ಶಿವಸೇನೆಯ ಮುಖ್ಯಸ್ಥ ಸಂಜಯ್ ರೌತ್ ಈ ವಿಷಯ ತಿಳಿಸಿದ್ದಾರೆ. ಕಳೆದ ವರ್ಷ ಉತ್ತರ ಪ್ರದೇಶ, ಗೋವಾ ಮತ್ತು ಗುಜರಾತ್ ಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆಯ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
ಕರ್ನಾಟಕದಲ್ಲಿ ಶಿವ ಸೇನೆ ಬಿಜೆಪಿ ವಿರುದ್ಧವೂ ತನ್ನ ಅಭ್ಯರ್ಥಿಗಳನ್ನು ನಿಲ್ಲಿಸುತ್ತದೆಯೇ ಎಂಬುದನ್ನು ಕಾದುನೋಡಬೇಕು. ಮರಾಠಿ ಜನರ ಹಿತ ಕಾಯುವ ಮಹಾರಾಷ್ಟ್ರ ಏಕೀಕರಣ ಸಮಿತಿಗೆ(ಎಂಇಎಸ್) ನಮ್ಮ ಬೆಂಬಲ ಎಂದು ಸಂಜಯ್ ರೌತ್ ತಿಳಿಸಿದ್ದಾರೆ.

2019 ರ ಲೋಕಸಭಾ ಮತ್ತು ವಿಧದಾನಸಸಭಾ ಚುನಾವಣೆಗಳನ್ನು ಸ್ವತಂತ್ರವಾಗಿ ಎದುರಿಸುವುದಾಗಿ ಈಗಾಗಲೇ ಶಿವಸೇನೆ ಹೇಳಿದ್ದು, ಬಿಜೆಪಿ ಜೊತೆ ಮೈತ್ರಿಯಿಲ್ಲ ಎಂದು ಸೂಚ್ಯವಾಗಿ ಹೇಳಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಮೇ 12 ರಂದು ನಡೆಯಲಿದ್ದು, ಮೇ 15ರಂದು ಫಲಿತಾಂಶ ಹೊರಬೀಳಲಿದೆ.












Click it and Unblock the Notifications