Summer: ಕರ್ನಾಟಕದಲ್ಲಿ ಪ್ರಕೃತಿ ವಿಕೋಪ - ಬೇಸಿಗೆ ನೀರಿನ ಸಂಕಷ್ಟ ತಡೆಗೆ ಸಿದ್ಧತೆ; ಉನ್ನತ ಮಟ್ಟದ ಸಭೆಯಲ್ಲಿ ಮಹತ್ವದ ನಿರ್ಧಾರ
Summer: ಕರ್ನಾಟಕದಲ್ಲಿ ಪ್ರಕೃತಿ ವಿಕೋಪ ಹಾಗೂ ಬೇಸಿಗೆ ಎದುರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆದಿದೆ. ಇವರ ಅಧ್ಯಕ್ಷತೆಯಲ್ಲಿ ನಡೆದ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಇತ್ತೀಚಿನ ವರ್ಷಗಳಲ್ಲಿ ಪ್ರತಿ ವರ್ಷವೂ ಒಂದಿಲ್ಲೊಂದು ಪ್ರಾಕೃತಿಕ ವಿಕೋಪಗಳನ್ನು ರಾಜ್ಯ ಎದುರಿಸುತ್ತಿದೆ, ಅತಿವೃಷ್ಠಿ ಇಲ್ಲವೇ ಅನಾವೃಷ್ಠಿ. ಇದಲ್ಲದೆ ಬೇಸಿಗೆಯ ತೀವ್ರತೆ, ಬಿಸಿಲಿನ ತಾಪಮಾನ ಪ್ರತಿ ವರ್ಷವೂ ಏರುಗತಿಯಲ್ಲಿದೆ. ಪ್ರಾಕೃತಿಕ ಸವಾಲುಗಳನ್ನು ಎದುರಿಸುವುದನ್ನು ಸರ್ಕಾರವು ಆದ್ಯತೆಯಾಗಿ ಪರಿಗಣಿಸಬೇಕಿರುವುದು ಅನಿವಾರ್ಯ. ಪೂರ್ವ ಮುಂಗಾರಿನಲ್ಲಿ 17 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ, 5 ಜಿಲ್ಲೆಗಳಲ್ಲಿ ಅಧಿಕ ಮಳೆ, 6 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದ್ದರೆ, 3 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.

ಪ್ರಸ್ತುತ ಜಿಲ್ಲಾ ಪಂಚಾಯತ್ ಗಳ ವ್ಯಾಪ್ತಿಯಲ್ಲಿನ 1655 ಸಣ್ಣ ನೀರಾವರಿ ಕೆರೆ ಕಟ್ಟೆಗಳಲ್ಲಿ ಸರಾಸರಿ 44℅ ನಷ್ಟು ನೀರು ಲಭ್ಯವಿದೆ. ಈ ಸಾಲಿನ ಬೇಸಿಗೆಯಲ್ಲಿ 207 ತಾಲೂಕುಗಳ ಕೆಲ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಈ ಪೈಕಿ 60 ತಾಲೂಕುಗಳು ಈಗಾಗಲೇ ನೀರಿನ ಕೊರತೆ ಎದುರಿಸುತ್ತಿವೆ.
ಬೇಸಿಗೆಯಲ್ಲಿ 2258 ಗ್ರಾಮ ಪಂಚಾಯತಿಗಳಲ್ಲಿ ಕಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದೆ, 212 ಗ್ರಾಮ ಪಂಚಾಯತಿಗಳು ಈಗಾಗಲೇ ಕೊರತೆ ಎದುರಿಸುತ್ತಿವೆ, 4 ಗ್ರಾಮಗಳಲ್ಲಿ ಸರ್ಕಾರದ ಟ್ಯಾಂಕರ್ ಗಳಲ್ಲಿ ನೀರು ಒದಗಿಸುತ್ತಿದ್ದು, 56 ಗ್ರಾಮಗಳಲ್ಲಿ ಖಾಸಗಿ ಟ್ಯಾಂಕರ್ ಗಳನ್ನು ಬಳಕೆ ಮಾಡಲಾಗುತ್ತಿದೆ ಹಾಗೂ 246 ಗ್ರಾಮಗಳಲ್ಲಿ ಖಾಸಗಿ ಬೋರ್ ವೆಲ್ ಗಳ ಮುಖಾಂತರ ನೀರಿನ ಪೂರೈಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೆ ನೀರಿನ ಕೊರತೆಯನ್ನು ಎದುರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದೂ ಅವರು ಹೇಳಿದ್ದಾರೆ.
ಬೇಸಿಗೆಯನ್ನು ಎದುರಿಸಲು ನಿರ್ಧರಿಸಲಾದ ಮುನ್ನೆಚ್ಚರಿಕಾ ಕ್ರಮಗಳು ಈ ರೀತಿ ಇವೆ.
◆ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಾಪ್ತಾಹಿಕ ಮಳೆಯ ಮೇಲ್ವಿಚಾರಣೆ.
◆ಜಿಲ್ಲಾವಾರು ಬೆಳೆ ಆಕಸ್ಮಿಕ ಯೋಜನೆಗಳನ್ನು ಮತ್ತು ಬರ ನಿರೋಧಕ ಬಿತ್ತನೆ ಬೀಜದ ತಳಿಗಳನ್ನು ಅಭಿವೃದ್ಧಿಪಡಿಸುವುದು.
◆ಜಲಾಶಯದ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಆದ್ಯತೆಯ ಮೇರೆಗೆ ಕಾಯ್ದಿರಿಸುವುದು.
◆ನರೇಗಾ ಯೋಜನೆಯಡಿ ಜಲ ಸಂರಕ್ಷಣಾ ಕಾಮಗಾರಿಗಳಿಗೆ ಆದ್ಯತೆ ನೀಡುವುದು.
◆ಮೇವು ಲಭ್ಯತೆ ಬಗ್ಗೆ ನಿರಂತರ ಮೇಲ್ವಿಚಾರಣೆ ನಡೆಸುವುದು ಮತ್ತು ಮೇವಿನ ಕೊರತೆ ನೀಗಿಸಲು ಯೋಜನೆಗಳನ್ನು ಸಿದ್ದಪಡಿಸುವುದು.
2026ರ ಮಾರ್ಚ್ 15ರಿಂದ 23ನೇ ತಾರೀಖಿನವರೆಗೆ ಸಿಡಿಲು ಮತ್ತು ಗೋಡೆ ಕುಸಿತದಿಂದ ರಾಜ್ಯದಲ್ಲಿ 6 ಜನರು ಮೃತಪಟ್ಟಿದ್ದು, 30 ಲಕ್ಷ ರೂ. ಪರಿಹಾರ ಪಾವತಿಸಲಾಗಿದೆ. 16 ದೊಡ್ಡ ಜಾನುವಾರುಗಳು, 116 ಸಣ್ಣ ಜಾನುವಾರುಗಳು ಬಲಿಯಾಗಿದ್ದು, 10.105 ಲಕ್ಷ ರೂ. ಪರಿಹಾರ ಒದಗಿಸಲಾಗಿದೆ.
ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ಪ್ರಾಥಮಿಕ ವರದಿ ಪ್ರಕಾರ 3196 ಹೆಕ್ಟೇರ್ ಕೃಷಿ ಬೆಳೆ, 3697.96 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದ್ದು ಕಂಡುಬಂದಿದ್ದು, ಶೀಘ್ರವೇ ಬೆಳೆ ಹಾನಿ ಸಮೀಕ್ಷೆ ನಡೆಸಿ, ಪರಿಹಾರ ಒದಗಿಸಲು ನಿರ್ದೇಶಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ನೀಡಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications