ದೀಪಾವಳಿಗೆ ಇಲ್ಲ ತೊಗರಿ ದರ ಏರಿಕೆ ವರಿ
ಬೆಂಗಳೂರು, ನವೆಂಬರ್. 02: ದೀಪಾವಳಿ ಹಬ್ಬಕ್ಕೆ ಬೇಳೆ ಕಾಳುಗಳ ಬೆಲೆ ಇಳಿಯುವ ನಿರೀಕ್ಷೆಯಿದೆ. ಸರ್ಕಾರ ವಶಪಡಿಸಿಕೊಂಡಿರುವ 2.35 ಲಕ್ಷ ಮೆಟ್ರಿಕ್ ಟನ್ ದ್ವಿದಳ ಧಾನ್ಯಗಳನ್ನು ನ.6ರೊಳಗೆ ಇ-ಹರಾಜು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಬೆಂಗಳೂರಿನಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಆಹಾರ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ನಂತರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಹರಾಜು ಪ್ರಕ್ರಿಯೆಯ ಮಾಹಿತಿ ನೀಡಿದರು.[ತೊಗರಿ ಬೇಳೆಗೆ ಈ ಪರಿ ಬೆಲೆಗೆ ಏನು ಕಾರಣ]

ಈಗಿನಿಂದಲೇ ಪ್ರಕ್ರಿಯೆ ಆರಂಭಿಸಲು ಎಲ್ಲ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ.ನ.4ರಿಂದ 6ರವರೆಗೆ ಹರಾಜು ಪ್ರಕ್ರಿಯೆ ನಡೆಯಲಿದೆ. ತೊಗರಿ ಬೇಳೆ, ಉದ್ದಿನ ಬೇಳೆ, ತೊಗರಿ ಕಾಳನ್ನು ನವೆಂಬರ್ 6ರೊಳಗೆ ಮಾರುಕಟ್ಟೆಗೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಹೆಸರು ಬೇಳೆ, ಕಡಲೆಕಾಳು ಸೇರಿ ಉಳಿದ ಬೇಳೆಕಾಳು ನ.9ರೊಳಗಾಗಿ ಮಾರುಕಟ್ಟೆಗೆ ಸರಬರಾಜಾಗಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.[ತೊಗರಿ ಬೇಳೆ ಪ್ರತಿ ಕೆ.ಜಿಗೆ 110 ರು ಮಾತ್ರ]
ಕೃಷಿ ಮಾರುಕಟ್ಟೆ ಇಲಾಖೆ ಸಹಕಾರದೊಂದಿಗೆ ಇ-ಟ್ರೇಡಿಂಗ್ ಮಾಡಲಾಗುವುದು. ರಾಜ್ಯದಲ್ಲಿರುವ 34 ಸಾವಿರ ನೋಂದಾಯಿತ ವ್ಯಾಪಾರಿಗಳು ಇ-ಟ್ರೇಡಿಂಗ್‌ನಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ಕೆಲವೇ ದಿನದಲ್ಲಿ ದರ ಕೆಜಿಗೆ 120 ರು. ತಲುಪಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಧಾನ್ಯಗಳನ್ನು ಸಂಗ್ರಹಿಸಿರುವುದು ಕಂಡುಬಂದರೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications