ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೀಪಾವಳಿಗೆ ಇಲ್ಲ ತೊಗರಿ ದರ ಏರಿಕೆ ವರಿ

|
Google Oneindia Kannada News

ಬೆಂಗಳೂರು, ನವೆಂಬರ್. 02: ದೀಪಾವಳಿ ಹಬ್ಬಕ್ಕೆ ಬೇಳೆ ಕಾಳುಗಳ ಬೆಲೆ ಇಳಿಯುವ ನಿರೀಕ್ಷೆಯಿದೆ. ಸರ್ಕಾರ ವಶಪಡಿಸಿಕೊಂಡಿರುವ 2.35 ಲಕ್ಷ ಮೆಟ್ರಿಕ್ ಟನ್ ದ್ವಿದಳ ಧಾನ್ಯಗಳನ್ನು ನ.6ರೊಳಗೆ ಇ-ಹರಾಜು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರಿನಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಆಹಾರ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ನಂತರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಹರಾಜು ಪ್ರಕ್ರಿಯೆಯ ಮಾಹಿತಿ ನೀಡಿದರು.[ತೊಗರಿ ಬೇಳೆಗೆ ಈ ಪರಿ ಬೆಲೆಗೆ ಏನು ಕಾರಣ]

dal

ಈಗಿನಿಂದಲೇ ಪ್ರಕ್ರಿಯೆ ಆರಂಭಿಸಲು ಎಲ್ಲ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ.ನ.4ರಿಂದ 6ರವರೆಗೆ ಹರಾಜು ಪ್ರಕ್ರಿಯೆ ನಡೆಯಲಿದೆ. ತೊಗರಿ ಬೇಳೆ, ಉದ್ದಿನ ಬೇಳೆ, ತೊಗರಿ ಕಾಳನ್ನು ನವೆಂಬರ್ 6ರೊಳಗೆ ಮಾರುಕಟ್ಟೆಗೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಹೆಸರು ಬೇಳೆ, ಕಡಲೆಕಾಳು ಸೇರಿ ಉಳಿದ ಬೇಳೆಕಾಳು ನ.9ರೊಳಗಾಗಿ ಮಾರುಕಟ್ಟೆಗೆ ಸರಬರಾಜಾಗಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.[ತೊಗರಿ ಬೇಳೆ ಪ್ರತಿ ಕೆ.ಜಿಗೆ 110 ರು ಮಾತ್ರ]

ಕೃಷಿ ಮಾರುಕಟ್ಟೆ ಇಲಾಖೆ ಸಹಕಾರದೊಂದಿಗೆ ಇ-ಟ್ರೇಡಿಂಗ್ ಮಾಡಲಾಗುವುದು. ರಾಜ್ಯದಲ್ಲಿರುವ 34 ಸಾವಿರ ನೋಂದಾಯಿತ ವ್ಯಾಪಾರಿಗಳು ಇ-ಟ್ರೇಡಿಂಗ್‌ನಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ಕೆಲವೇ ದಿನದಲ್ಲಿ ದರ ಕೆಜಿಗೆ 120 ರು. ತಲುಪಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಧಾನ್ಯಗಳನ್ನು ಸಂಗ್ರಹಿಸಿರುವುದು ಕಂಡುಬಂದರೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

English summary
Karnataka Government is confident that the sky-rocketing prices of pulses, especially tur dal, will come down soon. Karnataka's Food and Civil Supplies Minister Dinesh Gundu Rao, who held a video conference with the Deputy Commissioners of all districts in the State as well as discussions with the officials of the Food and Civil Supplies Department, said the prices would definitely come down in the next few days," as huge quantities of the seized pulses will be released into the open market.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X