ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳು, ಮಹತ್ವದ ಸಭೆಯ ನಿರ್ಣಯಗಳು
ಬೆಂಗಳೂರು, ಜನವರಿ 06: ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೇಡಿಕೆಗಳ ಕುರಿತು ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಡಾ. ತ್ರಿಲೋಕ್ ಚಂದ್ರ ಕೆ. ವಿ. ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಹಲವು ವಿಚಾರಗಳ ಕುರಿತು ಚರ್ಚಿಸಲಾಯಿತು.
ಸೋಮವಾರ ಮಧ್ಯಾಹ್ನ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಅವರ ಅಧ್ಯಕ್ಷತೆಯಲ್ಲಿ ಶಿಕ್ಷಕರ ಸದನ, ಬೆಂಗಳೂರು ಇಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೇಡಿಕೆಗಳ ಕುರಿತು ಸಭೆ ನಡೆಯಿತು. ಸಭೆಯ ಬಳಿಕ ಸಭಾ ನಡಾವಳಿಯನ್ನು ಬಿಡುಗಡೆ ಮಾಡಲಾಗಿದೆ.

ಈ ಸಭೆಯಲ್ಲಿ ಡಾ. ತ್ರಿಲೋಕ್ ಚಂದ್ರ ಕೆ. ವಿ., ಶಶಿಕಲಾ ಚೌಗಲೆ, ಸರ್ಕಾರದ ಜಂಟಿ ಕಾರ್ಯದರ್ಶಿ (ಸೇವೆಗಳು) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಹರೀಶ ಉಪ ಕಾರ್ಯದರ್ಶಿ, ಕಾನೂನು ಇಲಾಖೆ, ಡಾ. ಸಿಪ್ರಿಯಾನ್ ಮಂಥರೋ, ನಿರ್ದೇಶಕರು (ಪ್ರಾಥಮಿಕ ಶಿಕ್ಷಣ), ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರು (ಪ್ರಾಥಮಿಕ ಶಿಕ್ಷಣ), ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ), ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಪಾಲ್ಗೊಂಡಿದ್ದರು.
ಸಭೆಯ ನಡಾವಳಿಗಳು: ಸರ್ಕಾರದ ಆದೇಶ ದಿನಾಂಕ 23 ಸೆಪ್ಟೆಂಬರ್ 2024ರಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ), ಬೆಂಗಳೂರು ಇವರ ವಿವಿಧ ಬೇಡಿಕೆಗಳನ್ನು ಪರಿಗಣಿಸುವ ಕುರಿತು, ಪ್ರಸ್ತುತ ಅಸ್ತಿತ್ವದಲ್ಲಿರುವ ನಿಯಮಗಳನ್ವಯ ಪರಿಶೀಲಿಸಿ ಸೂಕ್ತ ಶಿಫಾರಸ್ಸು ಹಾಗೂ ಅಭಿಪ್ರಾಯವನ್ನೊಳಗೊಂಡ ಸಮಗ್ರ ವರದಿಯನ್ನು ನೀಡಲು ರಚಿಸಿದ ಸಮಿತಿಯ ಸದಸ್ಯರು ಸಭೆಯಲ್ಲು ಹಾಜರಿದ್ದರು.
* 2017ರವರೆಗೆ ನೇಮಕವಾದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ, ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ 'ಪದವೀಧರ ಶಿಕ್ಷಕರೆಂದು' ಪದನಾಮೀಕರಿಸುವುದು.
* 2017ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತಃ 1-7/8ಕ್ಕೆ ನೇಮಕ ಹೊಂದಿದವರನ್ನು PST ಎಂದು ಪದನಾಮ ಮಾಡಿ 1-5ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು.
* ಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮುಂಚೆ ನೇಮಕಾತಿ ಹೊಂದಿದ ಹಾಗೂ B.Ed ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ನಿವೃತ್ತಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ತದನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು. ಈಗ ಹೊರಡಿಸಿರುವ ಅಧಿಸೂಚನೆ ದಿನಾಂಕ 28-08-2024ರ ಕರಡು ನಿಯಮಗಳನ್ನು ಕೈಬಿಡಬೇಕು.
* ಈ ಮುಂಚಿನ ನಿಯಮಾವಳಿಯಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೇ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು. ಯಾವುದೇ ಫಲಾಪೇಕ್ಷೆ ಇಲ್ಲದೇ 20-25 ವರ್ಷಗಳಿಂದ 6-8ನೇ ತರಗತಿಗಳಿಗೆ GPT, TGT ಸಮಾನಾಂತರವಾಗಿ ದುಡಿಯುತ್ತಿರುವ ಸೇವಾನಿರತ ಪದವೀಧರ ಶಿಕ್ಷಕರ ಸೇವೆಯನ್ನು ಗೌರವಿಸಿ, ಸೂಪರ್ ನ್ಯೂಮರರಿ ಹುದ್ದೆಯೆಂದು ಪುನರ್ ಪದನಾಮೀಕರಣದ ನಂತರ ಒಂದು ವೇತನ ಬಡ್ತಿಯನ್ನು ನೀಡಬೇಕು.
* ಪಿಎಸ್‌ಟಿ ಶಿಕ್ಷಕರುಗಳಿಗೆ ಒಂದು ಹೆಚ್ಚುವರಿ ವೇತನ ಬಡ್ತಿ ನೀಡಿ ಜಿಪಿಟಿ ಶಿಕ್ಷಕರಾಗಿ ಬಡ್ತಿ ನೀಡಲು ನಿಯಮಗಳಲ್ಲಿ ಅವಕಾಶವಿಲ್ಲ. ಜಿಪಿಟಿ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕವಾಗಲು ಈಗಾಗಲೇ ಇಲಾಖೆ ಅವಕಾಶ ನೀಡಲಾಗಿತ್ತು. ಸಂಘದ ಬೇಡಿಕೆಯಂತೆ ಸೂಪರ್ ನ್ಯೂಮರರಿ ಹುದ್ದೆಗಳನ್ನು ಸೃಜಿಸಲು ಯಾವುದೇ ಸಕಾರಣ ಇರುವುದಿಲ್ಲ ಮತ್ತು ಸಂಘದ ಬೇಡಿಕೆಗಳು ಸಾಧುವಲ್ಲ ಎಂಬುದಾಗಿ ತಿಳಿಸಿದರು.
* ಪಿಎಸ್‌ಟಿ ವೃಂದದ ಎಲ್ಲಾ ಪದವಿ ವಿದ್ಯಾರ್ಹತೆ ಇರುವ ಶಿಕ್ಷಕರಿಗೆ 1 ಹೆಚ್ಚುವರಿ ವೇತನ ಬಡ್ತಿ ನೀಡಿ ಸೇವಾನಿರತ ಪದವೀಧರ ಶಿಕ್ಷಕರು ಎಂದು ಪದನಾಮೀಕರಿಸುವ ಬಗ್ಗೆ, ಇದು ಕಾರ್ಯ ಸಾಧುವಲ್ಲ ಕೋರಿಕೆಯಾಗಿದ್ದು ಮತ್ತು ಈಗಾಗಲೇ 2017ರ ನಂತರದಲ್ಲಿ 3 ನೇಮಕಾತಿಗಳು ಸಹ ಪೂರ್ಣಗೊಂಡಿದ್ದ ಹೊಸ ಪದನಾಮೀಕರಿಸಿದ ವೃಂದವನ್ನು ಜಾರಿಗೊಳಿಸಿದಲ್ಲಿ ಮುಂದಿನ ಬಡ್ತಿಗಳಲ್ಲಿಯೂ ಗೊಂದಲ ಉಂಟಾಗುವ ಬಗ್ಗೆ ಸಭೆಯಲ್ಲಿ ವಿವರಿಸಲಾಯಿತು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಸಾಧಕ ಭಾದಕಗಳನ್ನು ಪರಿಗಣಿಸಿ, ಇಲಾಖಾ ಅಭಿಪ್ರಾಯ ಪಡೆದು ಕ್ರಮವಹಿಸಬಹುದಾಗಿದೆ ಎಂದು ತಿಳಿಸಿದರು.
ಬೇಡಿಕೆಗಳು
* 2016ರ ಪೂರ್ವದಲ್ಲಿ ನೇಮಕವಾದ ಶಿಕ್ಷಕರಿಗೆ 2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಅನ್ವಯಿಸಿರುವುದನ್ನು ಯಥಾವತ್ತಾಗಿ ಮುಂದುವರೆಸಬೇಕು.
* 2016ರ ಪೂರ್ವದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು (1-5)ರವರಿಗೆ ಅರ್ಹತೆಯ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡುವ ಬದಲಾಗಿ ಘನ ನ್ಯಾಯಾಲಯದ ಆದೇಶದಂತೆ (6-8) ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶೇ.50%ನ್ನು ಪರಿಗಣಿಸಬೇಕು.
* ವೃಂದ ಮತ್ತು ನೇಮಕಾತಿ ನಿಯಮಗಳು ದಿನಾಂಕ 07.08.2017ರನ್ವಯ ಪಿಎಸ್‌ಟಿ ವೃಂದಕ್ಕಿಂತ ಜಿಪಿಟಿ ವೃಂದ ಹಿರಿಯ ವೃಂದವಾಗಿದ್ದು, ಪದವೀಧರ ಪ್ರಾಥಮಿಕ (6-8) ಶಿಕ್ಷಕರಿಗೆ ಮುಖ್ಯ ಗುರುಗಳು ಹಾಗೂ ಹಿರಿಯ ಮುಖ್ಯ ಗುರುಗಳು ಹುದ್ದೆಗಳಿಗೆ ಬಡ್ತಿ ನೀಡಲು ಸಿ & ಆರ್ ತಿದ್ದುಪಡಿ ಮಾಡಿ ಅವಕಾಶ ಕಲ್ಪಿಸಬೇಕು.
* ಆರ್.ಟಿ.ಇ ಕಾಯ್ದೆ-2009 ಹಾಗೂ ಎನ್.ಸಿ.ಟಿ.ಇ ನಿಯಮಾವಳಿಗಳಂತೆ ರೂಪಿತವಾದ ಪಿ.ಎಸ್.ಟಿ ಹಾಗೂ ಜಿ.ಪಿ.ಟಿ ವೃಂದಗಳನ್ನು ವಿಲೀನಗೊಳಿಸಬಾರದು.
-
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
ದ್ವಿತೀಯ PUC ಪರೀಕ್ಷೆ-2: ನೋಂದಣಿ ಆರಂಭ, ಯಾರಿಗೆ ಶುಲ್ಕ ವಿನಾಯಿತಿ? ಇಲ್ಲಿದೆ ಮಾಹಿತಿ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
CBSE 10ನೇ ತರಗತಿ ಫಲಿತಾಂಶ 2026: ನಾಳೆ ಪ್ರಕಟಗೊಳ್ಳಲಿದೆಯೇ ರಿಸಲ್ಟ್? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ -
CBSE ಫಲಿತಾಂಶಕ್ಕಾಗಿ ಕಾಯಬೇಡಿ: ಈಗಲೇ ನಿಮ್ಮ ಡಿಜಿಲಾಕರ್ ಖಾತೆ ತೆರೆಯಿರಿ, ಕ್ಷಣಾರ್ಧದಲ್ಲಿ ರಿಸಲ್ಟ್ ಪಡೆಯಿರಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್











Click it and Unblock the Notifications