ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರ ಹಿತಾಸಕ್ತಿ ಸಂರಕ್ಷಣಾ (ತಿದ್ದುಪಡಿ)/ವಿಧೇಯಕ - 2022 ಅಂಗೀಕಾರ
ಬೆಂಗಳೂರು, ಸೆಪ್ಟೆಂಬರ್ 19: ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರ ಹಿತಾಸಕ್ತಿ ಸಂರಕ್ಷಣಾ (ತಿದ್ದುಪಡಿ)/ವಿಧೇಯಕ - 2022 ಅನ್ನು ಸೋಮವಾರದಂದು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಗಿದೆ.
ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರ ಹಿತಾಸಕ್ತಿ ಸಂರಕ್ಷಣಾ (ತಿದ್ದುಪಡಿ)/ವಿಧೇಯಕ - 2022 ಅನ್ನು ಕಾನೂನು ಸಚಿವ ಮಾಧುಸ್ವಾಮಿ ಸಭೆಯಲ್ಲಿ ಮಂಡನೆಯನ್ನು ಮಾಡಿದರು. ಈ ಕಾಯ್ದೆ ಅನ್ವಯ ಬ್ಯಾಂಕ್‌ಗಳಿಂದ ವಂಚನೆಗಳಾಗಿದ್ದಲ್ಲಿ ಒಂದೆ ಕಡೆ ದಾಖಲಾಗಿರುವ ಎಫ್ಐಆರ್ ಅನ್ನು ಒಂದೇ ಕಡೆ ತನಿಖೆಗೆ ಒಳಪಡಿಸುವುದು ಸೇರಿದಂತೆ ಪ್ರಮುಖ ಅಂಶವನ್ನು ಒಳಗೊಂಡಿದೆ ಎಂದು ಹೇಳಿದರು.

ಶಾಸಕ ಯುಬಿ ವೆಂಕಟೇಶ್ ಮಾತನಾಡಿ, ''ಸೌಹಾರ್ದ ಸೊಸೈಟಿಗಳ ಮೇಲೆ ಸರ್ಕಾರ ಕಂಟ್ರೋಲ್ ಇಲ್ಲ ಅಂದಿತ್ತು. ಆದರೆ ಲೈಸೆನ್ಸ್ ಕೊಡುವ ಸರ್ಕಾರ ಕಂಟ್ರೋಲ್ ಕೂಡಾ ಇಟ್ಟುಕೊಳ್ಳಬೇಕು. ಇದನ್ನೂ ಈ ಕಾಯ್ದೆ ವ್ಯಾಪ್ತಿಗೆ ತರಬೇಕು. ಠೇವಣಿದಾರರಿಗೆ ಸ್ವಲ್ಪವಾದರೂ ವಾಪಾಸು ಕೊಡಬೇಕು. ಕಾಲಮಿತಿಯಲ್ಲಿ ತನಿಖೆ ಮುಗಿಸಬೇಕು . ಜನ ದೂರು ಕೊಡಲು ಹೋದಾಗ ಬ್ಯಾಂಕ್ ಸ್ಟೇ ತರುವುದನ್ನು ಸರ್ಕಾರ ತಡೆಯಬೇಕು'' ಎಂದು ಅಭಿಪ್ರಾಯವನ್ನು ಪಟ್ಟರು.
ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕಯಲ್ಲಿ ಏನಿದೆ?
ಹಲವು ಸಹಕಾರಿ ಬ್ಯಾಂಕ್ ಸೇರಿದಂತೆ ವಂಚನೆಯ ವರದಿಗಳಿಂದ ಜನ ಬೇಸತ್ತಿದ್ದರು. ಇದಕ್ಕಾಗಿ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಸೇರಿ ಹಣಕಾಸು ಸಂಸ್ಥೆಗಳ ವಂಚನೆಗಳಿಂದ ಠೇವಣಿದಾರರನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಈ ವಿಧೇಯಕವನ್ನು ಮಂಡಿಸಲಾಗಿದೆ. ಇದರಂತೆ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆ ಮಾಡಿರುವ ಠೇವಣಿದಾರರಿಗೆ ವಂಚನೆ ಮಾಡುವ ಬ್ಯಾಂಕ್, ಸಂಸ್ಥೆಗಳ ಮುಖ್ಯಸ್ಥರು, ನಿರ್ದೇಶಕರ ವಿರುದ್ಧದ ಪ್ರಕರಣಗಳಲ್ಲಿನ ಅಪರಾಧವು ಇನ್ನು ಮುಂದೆ ಜಾಮೀನು ರಹಿತ ಎಂದು ಪರಿಗಣಿತವಾಗಿದೆ.

ಒಂದೇ ಪ್ರಕರಣದಲ್ಲಿ ವಿಲೀನ ತನಿಖೆ
ಈ ವಿಧೇಯಕದ ಪ್ರಕಾರ ಒಂದು ಹಣಕಾಸು ಸಂಸ್ಥೆಯ ವಿರುದ್ಧ ಹಲವು ಕಡೆ ಎಫ್ಐಆರ್‌ಗಳು ದಾಖಲಾಗಿದ್ದರೆ ಅದನ್ನು ಒಂದೇ ಪ್ರಕರಣವಾಗಿ ವಿಲೀನಗೊಳಿಸಲು ಈ ವಿಧೇಯಕದಲ್ಲಿ ಅವಕಾಶ ಮಾಡಿಕೊಡಲಾಗಿದೆ. ಈ ಪ್ರಕರಣಗಳ ವಿರುದ್ಧ ಸಾಮಾನ್ಯ ತನಿಖೆಯನ್ನು ಕೈಗೊಳ್ಳಲು ಆದೇಶಿಸಬಹುದಾಗಿದೆ. ಇದಕ್ಕಾಗಿ ಒಬ್ಬ ಅಧಿಕಾರಿಯನ್ನು ನೇಮಕ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ನೀಡಬಹುದು ಎಂದು ತಿದ್ದುಪಡಿ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ಅಪರಾಧವನ್ನು ಜಾಮೀನು ರಹಿತ ಎಂದು ಪರಿಗಣಿಸಲಾಗುವುದು. ಹಣಕಾಸು ಸಂಸ್ಥೆಗಳ ವಿರುದ್ಧ ಒಂದಕ್ಕಿಂತ ಹೆಚ್ಚು ಜಿಲ್ಲೆಗಳಲ್ಲಿ ಮೊಕದ್ದಮೆ ದಾಖಲಾಗಿದ್ದರೆ, ಹೈ ಕೋರ್ಟ್ ಸಮ್ಮತಿಯೊಂದಿಗೆ ವಿಶೇಷ ನ್ಯಾಯಾಲಯ ಸ್ಥಾಪಿಸಬಹುಗಿದ್ದು ಈ ತಿದ್ದುಪಡಿ ವಿಧೇಯಕದ ವಿಶೇಷತೆಯಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications