ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಬಹಿಷ್ಕಾರ?

Posted By:
Subscribe to Oneindia Kannada

ಬೆಂಗಳೂರು,ಮಾರ್ಚ್ 20: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಈ ಬಾರಿಯೂ ಕಟಂಕ ಎದುರಾಗಿದೆ.
ಪಿಯು ಉಪನ್ಯಾಸಕರ ಬೇಡಿಕೆ ಈಡೇರಿಸುವಲ್ಲಿರಾಜ್ಯ ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿಮೌಲ್ಯಮಾಪನ ಬಹಿಷ್ಕರಿಸಿ, ಅನಿರ್ಧಿಷ್ಟಾವಧಿ ಸತ್ಯಾಗ್ರಹ ಕೈಗೊಳ್ಳಲು ಪದವಿ ಪೂರ್ವ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ಸಂಘಗಳ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಶಾಸಕರ ಭವನದ ಸಭಾಂಗಣದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಪದವಿ ಪೂರ್ವ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ತಿಮ್ಮಯ್ಯ ಪುರ್ಲೆ, ಪಿಯು ಉಪನ್ಯಾಸಕರು ವೇತನ ತಾರತಮ್ಯ ನಿವಾರಣೆಗೆ 1998ರಿಂದಲೂ ಹೋರಾಟಗಳನ್ನು ನಡೆಸುತ್ತಾ ಬರುತ್ತಿದ್ದಾರೆ. ಆದರೆ ಯಾವುದೇ ಸರ್ಕಾರ ಸಮಸ್ಯೆ ಬಗೆಹರಿಸುವ ನಿರ್ಧಾರ ತೆಗೆದುಕೊಂಡಿಲ್ಲ.[ಮೌಲ್ಯಮಾಪನ ಬಹಿಷ್ಕಾರಕ್ಕೆ ನಿರ್ಧರಿಸಿದ ಗದಗ ಉಪನ್ಯಾಸಕರು]

ಕಳೆದ ವರ್ಷದ ನವೆಂಬರ್‌ನಲ್ಲಿ ನಾಲ್ಕು ಹಂತದ ಹೋರಾಟ ನಡೆಸಲು ಉಪನ್ಯಾಸಕರು ಮತ್ತು ಪ್ರಾಂಶುಪಾಲರ ಸಂಘಗಳು ತೀರ್ಮಾನ ತೆಗೆದುಕೊಂಡಿದ್ದು, ಅದರಂತೆ ಸಿಎಂಗೆ ಮನವಿ, ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ, ಪರೀಕ್ಷೆ ಸಂದರ್ಭದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು. ಆದರೆ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಆಗ ನೀಡಿದ ಭರವಸೆಯಂತೆ ನಡೆದುಕೊಳ್ಳಲಿಲ್ಲ ಎಂದರು.

Karnataka PU lecturers threaten to boycott evaluation

ಪ್ರತಿ ಬಾರಿ ಉಪನ್ಯಾಸಕರು ಪ್ರತಿಭಟನೆ ಕೈಗೊಂಡಾಗ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪ್ರತಿಭಟನೆ ಕೈಬಿಡುವುದು ಒಳಿತೆಂದು ಜನತೆ, ಮಾಧ್ಯಮಗಳು ಆಗ್ರಹಿಸುತ್ತವೆ. ನಾವೂ ಸಹ ಅದೇ ಕಾರಣಕ್ಕೆ ಪ್ರತಿಭಟನೆಯಿಂದ ಹಿಂದೆ ಸರಿಯುತ್ತೇವೆ. ಆದರೆ ಸರ್ಕಾರ ಅದನ್ನೇ ದೌರ್ಬಲ್ಯವೆಂದು ಭಾವಿಸಿ ಬೇಡಿಕೆ ಈಡೇರಿಸದೇ ವಂಚಿಸುತ್ತಾ ಬರುತ್ತಿದೆ.[ಪಿಯುಸಿ ಪರೀಕ್ಷೆ ಬಗ್ಗೆ ಗೊಂದಲವಿದ್ದರೆ ಕರೆ ಮಾಡಿ]

ಬಜೆಟ್‌ನಲ್ಲಿ ನಮ್ಮ ಸಮಸ್ಯೆಗೆ ಪರಿಹಾರ ಸಿಕ್ಕಬಹುದೆಂದು ನಿರೀಕ್ಷಿಸಿದ್ದು ಹುಸಿಯಾಯಿತು. ಹೀಗಾಗಿ ಉಪನ್ಯಾಸಕರಿಗೆ ಈಗ ಮಾಡು ಇಲ್ಲವೇ ಮಡಿ ಎಂಬಂತೆ ಮೌಲ್ಯಮಾಪನ ಬಹಿಷ್ಕಾರವೊಂದೇ ಉಳಿದಿರುವ ಮಾರ್ಗವೆಂದರು. ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಪ್ರಾಂಶುಪಾಲರ ಮತ್ತು ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆಗೆ ಜಿ.ಕುಮಾರನಾಯ್ಕ ನೇತೃತ್ವದಲ್ಲಿ ರಚಿಸಿದ್ದ ಸಮಿತಿ ವರದಿ ನೀಡಿ ನಾಲ್ಕೂವರೆ ವರ್ಷ ಕಳೆದಿದ್ದರೂ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ.[ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ 2016]

ಇದೀಗ 7ನೇ ವೇತನ ಆಯೋಗ ರಚನೆಯಾಗುತ್ತಿರುವುದರಿಂದ ವೇತನ ತಾರತಮ್ಯ ನಿವಾರಣೆಯಾಗುವ ಯಾವುದೇ ಲಕ್ಷಣಗಳು ಕಂಡು ಬರುತ್ತಿಲ್ಲ. ಹಾಗಾಗಿ ಈ ಹಿಂದೆ ತೆಗೆದುಕೊಂಡಿರುವ ನಿರ್ಣಯದಂತೆ ಪ್ರಶ್ನೆ ಪತ್ರಿಕೆ ಮೌಲ್ಯಮಾಪನ ಬಹಿಷ್ಕಾರ ಮಾಡುವುದು ಉಳಿದಿರುವ ಮಾರ್ಗವಾಗಿದೆ. ಇದಕ್ಕೂ ಸರ್ಕಾರ ಬಗ್ಗದಿದ್ದರೆ ಅನಿರ್ಧಿಷ್ಟಾವಧಿ ಹೋರಾಟ ನಡೆಸೋಣ. ಇದಕ್ಕೆ ಎಲ್ಲರ ಬೆಂಬಲ ಅಗತ್ಯವೆಂದರು.

ಉಪನ್ಯಾಸಕರ ಸಂಘದ ಕಾರ್ಯಾಧ್ಯಕ್ಷ ಎಸ್.ಆರ್.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ನಿಂಗೇಗೌಡ ಎ.ಎಚ್, ಕೋಶಾಧ್ಯಕ್ಷ ಜಯಣ್ಣ, ಪ್ರಾಂಶುಪಾಲರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಬಿ.ಪ್ರಕಾಶ, ಮಂಜುನಾಥ್. ಕೆ.ಆರ್. ಮತ್ತಿತರರು ಹಾಜರಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka State PU College Lecturers’ Association has threatened to boycott the second PU evaluation if their demand remained unheeded before the evaluation. This decision was taken during the Karnataka State Pre-university College Principals’ Association (KSPCPA)'s meeting held on Sunday(March 20).
Please Wait while comments are loading...