• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿ ಗಂಟೆಯಲ್ಲೇ ಪ್ರಶ್ನೆ ಪತ್ರಿಕೆ ಸೋರಿಕೆ

|

ವಿಜಯಪುರ, ಮಾರ್ಚ್ 3: ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿ ಗಂಟೆಯೊಳಗೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.

      2nd PU biology question paper leaked | Puc | Oneindia Kannada

      ಆದರೆ ಪರೀಕ್ಷೆ ಆರಂಭವಾದ ಬಳಿಕ ಪ್ರಶ್ನೆ ಪತ್ರಿಕೆ ಆನ್‌ಲೈನ್‌ನಲ್ಲಿ ಬಂದಿರುವ ಕಾರಣ ಯಾವುದೇ ಕಾರಣಕ್ಕೂ ಮರು ಪರೀಕ್ಷೆ ಇಲ್ಲ ಎಂದು ಸ್ಪಷ್ಟನೆ ದೊರೆತಿದೆ.

      ಎಲ್ಲಾ ಅಗತ್ಯ ರೀತಿಯ ಕ್ರಮಗಳನ್ನು ಕೈಗೊಂಡಿದ್ದರೂ ಇಂದು ನಡೆದ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.

      ಭೌತಶಾಸ್ತ್ರ ವಿಷಯದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿತ್ತು. ಪರೀಕ್ಷೆ ಆರಂಭವಾದ ಒಂದು ಗಂಟೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.

      ಕೊಠಡಿ ಮೇಲ್ವಿಚಾರಕರು ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಿದ ಬೆನ್ನಲ್ಲೇ ಯಾರೋ ಕಿಡಿಗೇಡಿಗಳು ಮೊಬೈಲ್​ನಲ್ಲಿ ಫೋಟೋ ತೆಗೆದು ಲೀಕ್​ ಮಾಡಿದ್ದಾರೆ ಎನ್ನಲಾಗಿದೆ. ಈ ಕೃತ್ಯದಲ್ಲಿ ಕಾಲೇಜು ಸಿಬ್ಬಂದಿಯ ಕೈವಾಡವಿದೆ ಎಂದು ಶಂಕೆ ವ್ಯಕ್ತವಾಗಿದೆ.

      ಇಂದಿನಿಂದ ಸುಗಮವಾಗಿ ಆರಂಭಗೊಂಡ ಪಿಯುಸಿ ಪರೀಕ್ಷೆ

      ಇನ್ನು ಈ ಸಂಬಂಧ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು, ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪದವಿ ಪೂರ್ವ ಮಂಡಳಿ ತಿಳಿಸಿದೆ.

      ಸೋರಿಕೆಯಾದ ಕೆಲವೇ ನಿಮಿಷಗಳಲ್ಲಿ ವೈರಲ್

      ಸೋರಿಕೆಯಾದ ಕೆಲವೇ ನಿಮಿಷಗಳಲ್ಲಿ ವೈರಲ್

      ಸೋರಿಕೆಯಾದ ಕೆಲವೇ ನಿಮಿಷಗಳಲ್ಲಿ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ. ಪರೀಕ್ಷಾ ಕೇಂದ್ರ ಸುತ್ತ ಬಿಗಿ ಭದ್ರತೆ ಇದ್ದರೂ ಸಹ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.

      ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆದಿದೆ

      ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆದಿದೆ

      ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಭೌತಶಾಸ್ತ್ರ ಪರೀಕ್ಷೆ ನಡೆಯುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.

      ಪಿಯು ಮಂಡಳಿ ಮುಂಜಾಗ್ರತಾ ಕ್ರಮ ಕೈಗೊಂಡಿತ್ತು

      ಪಿಯು ಮಂಡಳಿ ಮುಂಜಾಗ್ರತಾ ಕ್ರಮ ಕೈಗೊಂಡಿತ್ತು

      ಈ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಪಿಯುಸಿ ಮಂಡಳಿ ಮುಂಜಾಗ್ರತಾ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿತ್ತು. ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಭದ್ರತೆ ವಹಿಸಲಾಗಿತ್ತು. ಆದರೂ ಸಹ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.

      ಈ ಬಾರಿ ಪರೀಕ್ಷೆ ಬರೆದ ವಿದ್ಯಾರ್ಥಿಗಳೆಷ್ಟು?

      ಈ ಬಾರಿ ಪರೀಕ್ಷೆ ಬರೆದ ವಿದ್ಯಾರ್ಥಿಗಳೆಷ್ಟು?

      ಈ ಬಾರಿ ಸುಮಾರು 27,359 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಅದರಲ್ಲಿ 7,984 ವಿದ್ಯಾರ್ಥಿಗಳು ವಿಜ್ಞಾನ ಪರೀಕ್ಷೆ ತೆಗೆದುಕೊಂಡಿದ್ದಾರೆ.

      "ಕರ್ನಾಟಕ ಶಿಕ್ಷಣ ಕಾಯ್ದೆ 24 (ಎ) ಪ್ರಕಾರ ಇದನ್ನು ಪ್ರಶ್ನೆಪತ್ರಿಕೆ ಸೋರಿಕೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ವೈಎಸ್ ಪಾಟೀಲ್ ಹೇಳಿದ್ದಾರೆ.

      English summary
      Despite strict measures to prevent any kind of embarrassing incidents during II PU board exams, the first three pages of Physics question paper was doing rounds on social media within an hour of commencement.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X
      We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more