ಪಿಯು ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ, ಉತ್ತೀರ್ಣರಾದವರೆಷ್ಟು?

ಬೆಂಗಳೂರು, ಜುಲೈ 5: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟವಾಗಿದೆ. ಪರೀಕ್ಷೆಗೆ ಹಾರಾಗಿದ್ದ 2 ಲಕ್ಷ ವಿದ್ಯಾರ್ಥಿಗಳ ಪೈಕಿ ಕೇವಲ 69,148 ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ.

ಶೇ.30.04 ರಿಸಲ್ಟ್ ಬಂದಿದೆ. ಜೂನ್ 11ರಿಂದ 20ರವರೆಗೆ ನಡೆದ ಪರೀಕ್ಷೆಯಲ್ಲಿ 2.3 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದು, 69,148 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

12 ಮೌಲ್ಯಮಾಪನ ಕೇಂದ್ರಗಳಲ್ಲಿ 2942 ಮೌಲ್ಯಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿದ್ದರು. ಪರೀಕ್ಷೆಗೆ 1,35,535 ಬಾಲಕರು ಮತ್ತು 94,630 ಬಾಲಕಿಯರು ಹಾಜರಾಗಿದ್ದರು.

Karnataka PU supplementary exam results announced

ಈ ಪೈಕಿ ಕ್ರಮವಾಗಿ ಶೇ.27.89 ಮತ್ತು ಶೇ.33.13 ಮಂದಿ ಉತ್ತೀರ್ಣರಾಗಿದ್ದು ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಮರು ಎಣಿಕೆ ಮರು ಮೌಲ್ಯಮಾಪನ ಪೂರ್ಣಗೊಂಡ ಬಳಿಕ ವಿದ್ಯಾರ್ಥಿಗಳು ಅಂಕಪಟ್ಟಿಯನ್ನು ಪಡೆಯಬಹುದು. ಫಲಿತಾಂಶವು www.karresults.nic.in ಹಾಗೂ www.pue.kar.nic.in ವೆಬ್‌ಸೈಟ್ ಮೂಲಕ ಪಡೆಯಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+