RSS: ಸರ್ಕಾರಿ ಆಸ್ತಿ ಬಳಸೋ ಮುನ್ನ ಅನುಮತಿ ಕಡ್ಡಾಯ: ಉಲ್ಲಂಘಿಸಿದ್ರೆ 3 ವರ್ಷ ಜೈಲು, ₹5 ಲಕ್ಷ ದಂಡ?

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಸೇರಿದಂತೆ ಖಾಸಗಿ ಸಂಘ, ಸಂಸ್ಥೆಗಳು ಮತ್ತು ಸಂಘಟನೆಗಳು 'ಸರ್ಕಾರಿ ಆವರಣ, ಶಾಲಾ, ಕಾಲೇಜುಗಳ ಆಸ್ತಿ ಮತ್ತು ಖಾಸಗಿ ಆಸ್ತಿ ಬಳಕೆಗೆ ರಾಜ್ಯ ಸರ್ಕಾರ ಹೊಸ ಕಾನೂನು ಮೂಲಕ ಬ್ರೇಕ್ ಹಾಕಲು ಮುಂದಾಗಿದೆ. ಈ ಹೊಸ ವಿಧೇಯಕವನ್ನು RSS ಗುರಿಯಾಗಿಸಿಕೊಂಡೆ ಅಂಗೀಕಾರ ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ನಾಯಕರು ದೂರಿದ್ದಾರೆ. ಈ ಹೊಸ ಕಾನೂನು ಉಲ್ಲಂಘಿಸಿದರೆ ಜೈಲು ಶಿಕ್ಷೆ, ನಗದು ದಂಡ ಸಹ ವಿಧಿಸುವ ಸಾಧ್ಯತೆ ಇದೆ.

ಗುರುವಾರದಿಂದ ಮುಂಗಾರು ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಡಿಕೆ ಶಿವಕುಮಾರ್ ಅವರು ಸಿಎಂ ಆದ ಮೇಲೆ ಎದುರಾದ ಮೊದಲ ಅಧಿವೇಶನದ ಮೊದಲ ದಿನವೇ ನೂತನ ವಿಧೇಯಕಕ್ಕೆ ಅನುಮೋದನೆ ನೀಡಿದೆ. ಖಾಸಗಿ ಸಂಘ, ಸಂಸ್ಥೆಗಳು ಮತ್ತು ಸಂಘಟನೆಗಳು "ಕರ್ನಾಟಕ ಸರ್ಕಾರಿ ಆವರಣ ಹಾಗೂ ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ 2026'ಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದೇ ಅಧಿವೇಶನದಲ್ಲಿ ಮಂಡಿಸಿ ಅಂಗೀಕರಿಸುವ ಸಾಧ್ಯತೆ ಇದೆ.

Karnataka Public Property Bill 2026

ಕಾರ್ಯಕ್ರಮಕ್ಕು ಮುನ್ನ ಅನುಮತಿ ಕಡ್ಡಾಯ

ಈ ಹೊಸ ಕಾನೂನು ಮೂಲಕ ಯಾವುದೇ ಸಂಘ, ಸಂಸ್ಥೆಗಳು, ಸಂಘಟನೆಗಳು ಸರ್ಕಾರಿ ಜಾಗದಲ್ಲಿ, ಸಾರ್ವಜನಿಕ ಆಸ್ತಿಯನ್ನು ಬಳಸುವ ಮುನ್ನ ಕಡ್ಡಾಯವಾಗಿ ಸರ್ಕಾರದ ಅನುಮತಿ ಪಡೆಯಬೇಕಿದೆ. ಈ ಕಾನೂನು ಅಂಗೀಕಾರಗೊಂಡು ಜಾರಿಯಾದರೆ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಗಳು ಕೈಗೊಳ್ಳುವ ಸಾಧ್ಯತೆ ಇದೆ.

ಕಳೆದ ವರ್ಷವೇ ರಾಜ್ಯ ಸರ್ಕಾರ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಇದನ್ನು ವಿರೋಧಿಸಿ ಪುನಃಶ್ಚೇತನ ಸೇವಾ ಸಂಸ್ಥೆಯು ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಇದು ಸಂಘ, ಸಂಸ್ಥೆಗಳ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ ಆಗಿದೆ ಎಂದು ತಿಳಿಸಿತ್ತು.

ಕಾನೂನು ಉಲ್ಲಂಘಿಸಿದಲ್ಲಿ ಕ್ರಮಗಳೇನು?

ಈ ನೂತನ ತಿದ್ದುಪಡಿ ವಿಧೇಯಕ ಜಾರಿಯಾದಲ್ಲಿ ನಿಯಮ ಉಲ್ಲಂಘಿಸಿದರೆ 'ಮೊದಲ ಅಪರಾಧಕ್ಕೆ ದಂಡ: ಸಾರ್ವಜನಿಕ ಆಸ್ತಿ ಅಥವಾ ಸರ್ಕಾರಿ ಆವರಣವನ್ನು ಅನಧಿಕೃತವಾಗಿ ಬಳಸಿದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಆಗಬಹುದು. 5 ಲಕ್ಷ ರೂ.ವರೆಗೆ ದಂಡ ಅಥವಾ ಎರಡನ್ನೂ ವಿಧಿಸಬಹುದು.

ಒಂದು ವೇಳೆ ಇಂತಹ ಅಪರಾಧಗಳು ಮೇಲಿಂದ ಮೇಲೆ ನಡೆದರೆ ನಂತರದಲ್ಲಿ ಉಲ್ಲಂಘನೆ ಪ್ರಕರಣಗಳಿಗೆ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ವರೆಗೆ ದಂಡ ವಿಧಿಸಬಹುದು. ವಿಶೇಷವೆಂದರೆ ವಾರಂಟ್ ಇಲ್ಲದೇ ಬಂಧಿಸುವ ಅಧಿಕಾರವನ್ನು ಕನಿಷ್ಠ ಪೊಲೀಸ್ ಸಬ್ ಇನ್‌ ಸ್ಪೆಕ್ಟರ್ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಕಾನೂನು ಜಾರಿ, ವಿವಾದದ ಹಿನ್ನೆಲೆ ಏನು?

ಕಳೆದ ವರ್ಷ 2025ರಲ್ಲಿ ಸಚಿವ ಪ್ರಿಯಾಂಕ್ ಸರ್ಕಾರಿ ಸ್ಥಳಗಳು, ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್ ಎಸ್ ಸಂಘಟನೆಯು ಶಾಖೆ, ಸಾಂಘಿಕ ಅಥವಾ ಬೈಠಕ್‌ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿರ್ಬಂಧ ಹೇರಬೇಕು ಎಂದು ಅಂದಿನ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ಇದರ ಬೆನ್ನಲ್ಲೇ ಸಚಿವ ಸಂಪುಟ ಸಭೆಯಲ್ಲಿ ಸಾರ್ವಜನಿಕ ಸ್ಥಳ, ಸರ್ಕಾರಿ ಶಾಲೆಗಳ ಮೈದಾನಗಳ ಸದ್ಬಳಕೆ ಮಾಡುವ ಸಂಬಂಧ ಸ್ಪಷ್ಟ ನೀತಿ ನಿಯಮ ರೂಪಿಸುವ ಕುರಿತು ಸರ್ಕಾರ ನಿರ್ಧರಿಸಿತ್ತು. ಅದರಂತೆ 2026ರ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡಿಸಲು, ಅಂಗೀಕರಿಸಲು ಸರ್ಕಾರ ಸಜ್ಜಾಗಿದೆ.

ಇದು ಆರ್‍‌ ಎಸ್ ಎಸ್ ಮುಂದಿಟ್ಟುಕೊಂಡೇ ರಾಜ್ಯ ಕಾಂಗ್ರೆಸ್ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂಬ ಅನುಮಾನ ಬಿಜೆಪಿ ವ್ಯಕ್ತಪಡಿಸಿದೆ. ಅಲ್ಲದೇ ಇತ್ತೀಚೆಗೆ ಪ್ರಿಯಾಂಕ್ ಖರ್ಗೆ ಅವರು ಆರ್ ಎಸ್ ಎಸ್ ವಿರುದ್ಧ ನಿರಂತರ ವಾಗ್ದಾಳಿ ನಡೆಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+