ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

176 ತಾಲೂಕುಗಳ ಪದವಿಪೂರ್ವ ಕಾಲೇಜಿನಲ್ಲಿ 'ಕರ್ನಾಟಕ ಪಬ್ಲಿಕ್ ಶಾಲೆ' ಆರಂಭ

By Nayana
|
Google Oneindia Kannada News

ಬೆಂಗಳೂರು, ಮೇ 21: ಶಿಕ್ಷಣ ಇಲಾಖೆಯು ಈ ವರ್ಷದಿಂದ ಎಲ್ಲಾ 176 ತಾಲೂಕುಗಳ ಪದವಿಪೂರ್ವ ಕಾಲೇಜುಗಳಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ತೆರೆಯಲು ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ಸರ್ಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಸಾಗಿದೆ. ಹೀಗಾಗಿ ಒಂದೇ ಸೂರಿನಡಿ ಪ್ರಾಥಮಿಕ ಹಂತದಿಂದ ಪ್ರೌಢಶಾಲಾ ಶಿಕ್ಷಣ ಹಂತದವರೆಗೆ ಗುಣಮಟ್ಟದ ಶಿಕ್ಷಣ ನೀಡಲು ಇಲಾಖೆ ಮುಂದಾಗಿದೆ. ಪ್ರತಿ ತಾಲೂಕಿಗೆ ಒಂದರಂತೆ ಪದವಿಪೂರ್ವ ಕಾಲೇಜುಗಳನ್ನು ಗುರುತಿಸಿದೆ.

ಖಾಸಗಿ ಶಾಲೆಗಳ ಶುಲ್ಕ ನಿಗದಿ ನಿಯಂತ್ರಣಕ್ಕೆ ಸರ್ಕಾರ ಆದೇಶ!ಖಾಸಗಿ ಶಾಲೆಗಳ ಶುಲ್ಕ ನಿಗದಿ ನಿಯಂತ್ರಣಕ್ಕೆ ಸರ್ಕಾರ ಆದೇಶ!

ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಪ್ರಾಥಮಿಕ, ಮಾಧ್ಯಮಿಕ, ಪ್ರೌಢಶಿಕ್ಷಣ ಮತ್ತು ಪದವಿಪೂರ್ವ ಶಿಕ್ಷಣ ಎಂಬ ನಾಲ್ಕುವಿಭಾಗಗಳಿದ್ದು, ಪ್ರತಿ ವಿಭಾಗಗಳಲ್ಲಿ ಶಾಲೆಗೆ ದಾಖಲಾಗುವ ವಿದ್ಯಾರ್ಥಿಗಳು, ಶಾಲೆ ಬಿಟ್ಟ ಮಕ್ಕಳ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಇದು ಗುಣಮಟ್ಟದ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದೆ. ಇದರ ಜತೆಗೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ಫಲಿತಾಂಶ ಕುಸಿತಕ್ಕೂ ಪ್ರಮುಖ ಕಾರಣಗಳಿವೆ.

Karnataka Public Schools will open from this academic year

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಗ್ರಾಮೀಣ ಭಾಗದಲ್ಲಿ 1ನೇ ತರಗತಿಯಿಂದ 12 ನೇ ತರಗತಿವರೆಗೆ ಒಂದೇ ಸೂರಿನಡಿ ಶಿಕ್ಷಣ ದೊರೆಯುವಂತಾಗಬೇಕು ಎಂದು ಆಯೋಗದ ವರದಿಯಲ್ಲಿ ಶಿಫಾರಸು ಮಾಡಿದೆ. ಈ ಶಾಲೆಗಳಲ್ಲಿ ಆಯಾ ಹಂತದ ಮಕ್ಕಳಿಗೆ ಉತ್ತಮ ಕೊಠಡಿ ಸುಸಜ್ಜಿತ ಪ್ರಯೋಗಾಲಯ, ಪ್ರತ್ಯೇಕ ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ, ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಇರುತ್ತದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ. ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತದೆ.

ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳು: 44,615 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ, 5,240 ಸರ್ಕಾರಿ ಪ್ರೌಢಶಾಲೆಗಳಿವೆ, 1,229 ಪದವಿಪೂರ್ವ ಕಾಲೇಜುಗಳಿವೆ, 50 ಲಕ್ಷ ವಿದ್ಯಾರ್ಥಿಗಳಿಗೆ ಬೋಧನೆ, 1-12ನೇ ತರಗತಿವರೆಗೆ ಶಿಕ್ಷಣ ನೀಡಲಾಗುತ್ತದೆ.

English summary
Department of education had issued a notification that Karnataka Public Schools will be opened from academic year of 2018-19. These school will provide quality education from first standard to 12 standard.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X