ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾರ್ಷಿಕ ಪರೀಕ್ಷೆ: ಮಹತ್ವದ ನಿರ್ಧಾರದತ್ತ ಪಿಯುಸಿ ಬೋರ್ಡ್

|
Google Oneindia Kannada News

ಬೆಂಗಳೂರು, ನ 3: ಪ್ರಸಕ್ತ ಶೈಕ್ಷಣಿಕ ವರ್ಷದ (ಮಾರ್ಚ್ 2020) ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಸ್ವಲ್ಪ ತಡವಾಗಿ ಪ್ರಕಟಿಸಲು ಪಿಯುಸಿ ಬೋರ್ಡ್ ಚಿಂತನೆ ನಡೆಸಿದೆ.

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ (ನೀಟ್) ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡ ನಂತರ, ಪಿಯುಸಿ ಫಲಿತಾಂಶವನ್ನು ಪ್ರಕಟಿಸುವ ಬಗ್ಗೆ ಶಿಕ್ಷಣ ಇಲಾಖೆಯಲ್ಲಿ ಮಾತುಕತೆ ನಡೆದಿದೆ.

ದ್ವಿತೀಯ ಪಿಯುಸಿ ಪರೀಕ್ಷೆ; ತಾತ್ಕಾಲಿಕ ವೇಳಾಪಟ್ಟಿ ಪ್ರಕಟದ್ವಿತೀಯ ಪಿಯುಸಿ ಪರೀಕ್ಷೆ; ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಇಲಾಖಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ 'ಸಂವೇದನಾ ಫೋನ್ ಇನ್' ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳ ಮಾನಸಿಕ ಒತ್ತಡ ಕಮ್ಮಿಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸುವಂತೆ, ಪೋಷಕರೊಬ್ಬರ ಮನವಿಗೆ, ಸಚಿವ ಸುರೇಶ್ ಕುಮಾರ್ ಮೇಲಿನ ರೀತಿಯಲ್ಲಿ ಸ್ಪಂದಿಸಿದ್ದಾರೆ.

Karnataka PUC Board May Announce Annual 2nd PU Result, After Neet Result

"ನೀಟ್ ಫಲಿತಾಂಶದ ನಂತರ, ಪಿಯುಸಿ ರಿಸಲ್ಟ್ ಪ್ರಕಟಿಸುವ ವಿಚಾರದಲ್ಲಿ, ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು" ಎನ್ನುವ ಭರವಸೆ ಸುರೇಶ್ ಕುಮಾರ್ ಅವರಿಂದ ಬಂದಿದೆ.

ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಲಾಖೆ 2020ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಆಕ್ಷೇಪಣೆಗಳಿದ್ದರೆ ಸಲ್ಲಿಕೆ ಮಾಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಾರ್ಚ್ 4, 2020 ರಿಂದ 19ರ ತನಕ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ತಾತ್ಕಾಲಿಕ ವೇಳಾಪಟ್ಟಿಗೆ ಬರುವ ಆಕ್ಷೇಪಣೆಗಳನ್ನು ಸ್ವೀಕರಿಸಿದ ಬಳಿಕ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಇಲಾಖೆ ತಿಳಿಸಿದೆ.

English summary
Karnataka PUC Board May Announce Annual 2nd PU Result, After Neet Result.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X