ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ದಿನಾಂಕ ನಿಗದಿ, ಮಾರ್ಗಸೂಚಿ ಪ್ರಕಟ

|
Google Oneindia Kannada News

ಬೆಂಗಳೂರು, ಏಪ್ರಿಲ್ 24: ಕೊರೊನಾ ಸೋಂಕಿನ ಬೆನ್ನಲ್ಲೇ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.

ಪ್ರಾಯೋಗಿಕ ಪರೀಕ್ಷೆಗಳನ್ನು ಆಯಾ ಕಾಲೇಜಿನ ಹಂತದಲ್ಲಿಯೇ ನಡೆಸುವುದು.ಈ ಬಗ್ಗೆ ಪ್ರಾಂಶುಪಾಲರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಪ್ರತಿ ದಿನ ಪರೀಕ್ಷೆ ಮುಗಿದ ನಂತರ‌ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರದಲ್ಲಿ ಅಂಕಗಳನ್ನು ಆನ್​ಲೈನ್​ ಮೂಲಕ ನಮೂದಿಸಲು ಆಯಾ ಕಾಲೇಜಿನ ಸೂಕ್ತ ಮಾರ್ಗದರ್ಶನ ನೀಡುವುದು. ಏಪ್ರಿಲ್ 28 ರಿಂದ ಮೇ 18 ರವೆರೆಗೆ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಯಲಿದ್ದು, ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿಯೇ‌ ನಡೆಸಲು ತೀರ್ಮಾನಿಸಲಾಗಿದೆ.

Exam

ಸರ್ಕಾರದ ಆದೇಶದಂತೆ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಹಿನ್ನೆಲೆ ಶನಿವಾರ ಹಾಗೂ ಭಾನುವಾರಗಳಂದು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಂತಿಲ್ಲ.

ಕೋವಿಡ್ ಹೆಚ್ಚಳ: ಯುಜಿಸಿ ನೆಟ್ 2021 ಪರೀಕ್ಷೆ ಮುಂದೂಡಿಕೆಕೋವಿಡ್ ಹೆಚ್ಚಳ: ಯುಜಿಸಿ ನೆಟ್ 2021 ಪರೀಕ್ಷೆ ಮುಂದೂಡಿಕೆ

ಕೇಂದ್ರ ಕಚೇರಿ ವತಿಯಿಂದ ಪ್ರಾಯೋಗಿಕ ಪರೀಕ್ಷೆಯ ಆಯ್ದ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲಾಗುವುದು. ಏನಾದರೂ ಮೌಲ್ಯಮಾಪನದಲ್ಲಿ ಲೋಪಗಳು ಕಂಡು ಬಂದಲ್ಲಿ ‌ಸಂಬಂಧಿಸಿದ ಪ್ರಾಂಶುಪಾಲರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.

ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ಟೆಂಪರೇಚರ್ ಪರೀಕ್ಷಿಸಿ‌ ಒಳಗೆ ಪ್ರವೇಶ ನೀಡಬೇಕು. ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ಲೇಖನ ಸಾಮಗ್ರಿಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಗೆ‌ ಪೂರೈಸಲಾಗಿದೆ.‌

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರುಗಳು ಇವುಗಳನ್ನು ಪಡೆದುಕೊಂಡು ತಮ್ಮ ಕೇಂದ್ರಕ್ಕೆ ಟ್ಯಾಗ್ ಆಗಿರುವ ಕಾಲೇಜುಗಳ ಪ್ರಾಂಶುಪಾಲರಿಗೆ ಆ ಕಾಲೇಜಿನ‌ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉತ್ತರ ಪತ್ರಿಕೆಗಳು ಮತ್ತು ಅಂಕಪಟ್ಟಿಯನ್ನು ನೀಡಿ ಪ್ರತಿದಿನ ಟ್ಯಾಗ್ ಆಗಿರುವ ಕಾಲೇಜುಗಳ ವಿವಿಧ ವಿಷಯಗಳ ಉಪನ್ಯಾಸಕರುಗಳು ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಬಂದು ಅಂಕಗಳನ್ನು ನಮೂದಿಸಬೇಕು.

ನಾಮಿನಲ್ ರೋಲ್ ಮತ್ತು ಅಂಕ ಪಟ್ಟಿಯನ್ನು ನೀಡಿ ಪ್ರಾಯೋಗಿಕ ಪರೀಕ್ಷೆಯನ್ನು ತಮ್ಮ ಕಾಲೇಜು ಹಂತದಲ್ಲಿ ನಡೆಸಿ ಆಯಾ ದಿನದಂದೇ ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಉತ್ತರ ಪತ್ರಿಕೆ ಮತ್ತು ಭರ್ತಿ ಮಾಡಿದ ಅಂಕ ಪಟ್ಟಿಗಳನ್ನು ಹಿಂದಿರುಗಿ ಆನ್​ಲೈನ್​ನಲ್ಲಿ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ನಮೂದಿಸಬೇಕು.‌

ಆಯಾ ಕಾಲೇಜಿನ ಉಪನ್ಯಾಸಕರನ್ನು ಪರೀಕ್ಷಾ ಕೆಲಸಕ್ಕೆ ಬಳಸಿಕೊಳ್ಳಬೇಕು,ಕೋವಿಡ್-19ರ ಹಿನ್ನೆಲೆಯಲ್ಲಿ ಹೊರಗಿನ ಉಪನ್ಯಾಸಕರನ್ನ ಕರೆತರುವಂತಿಲ್ಲ.

ಪರೀಕ್ಷೆ‌ ಕೇಂದ್ರದ ಎಲ್ಲ ಪರೀಕ್ಷೆಗಳು ಮುಗಿದ ನಂತರ ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡಿ ನೇರವಾಗಿ ಕೇಂದ್ರ ಕಚೇರಿಗೆ ಕಳುಹಿಸಬೇಕು ಮತ್ತು ಅಂಕಪಟ್ಟಿಗಳನ್ನು ಉರ್ದೇಶಕರ ಕಚೇರಿಗೆ ಸಲ್ಲಿಸಬೇಕು.

English summary
Department Of Education Published Guidelines for Karnataka 2nd PUC Practical Examination.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X