PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಇಂದು 2026ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ ಆದ karresults.nic.in ಗೆ ಭೇಟಿ ನೀಡಿ ತಮ್ಮ ಅಂಕಗಳನ್ನು ಪರಿಶೀಲಿಸಬಹುದು.
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತವಾಗಿ ಘೋಷಣೆ ಮಾಡಿದೆ. ಇದೀಗ ಎಲ್ಲಾ ಆನ್‌ಲೈನ್‌ನಲ್ಲಿ ಲಿಂಕ್ ಸಕ್ರಿಯವಾಗಲಿದ್ದು, ವಿದ್ಯಾರ್ಥಿಗಳಿಗೆ ತಮ್ಮ ರಿಸಲ್ಟ್ ಸುಲಭವಾಗಿ ನೋಡಬಹುದು.

ಈ ವರ್ಷದ ದ್ವಿತೀಯ ಪಿಯುಸಿ ಒಟ್ಟಾರೆ ಉತ್ತೀರ್ಣ ಪ್ರಮಾಣವು ಶೇಕಡಾ 86ರಷ್ಟಿದೆ.
ಟಾಪರ್ ಇವರೇ ನೋಡಿ..
ಕಲಾ ವಿಭಾಗದ 600ಕ್ಕೆ 598 ಅಂಕ ತೆಗೆದ ಕೊಟ್ಟೂರಿನ ಅರ್ಚನಾ ಮತ್ತು ದಿಶಾ
ವಾಣಿಜ್ಯ ವಿಭಾಗದಲ್ಲಿ600ಕ್ಕೆ 600 ಅಂಕ ತೆಗೆದ ದಕ್ಷಿಣ ಕನ್ನಡದ ಆಳ್ವಾಸ್ ಕಾಲೇಜಿನ ದಿಶಾ
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026: ಡೌನ್‌ಲೋಡ್ ಮಾಡುವುದು ಹೇಗೆ?
ಫಲಿತಾಂಶವನ್ನು ಚೆಕ್ ಮಾಡಲು ವಿದ್ಯಾರ್ಥಿಗಳು ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸಬಹುದು:
ಹಂತ 1: ಮೊದಲಿಗೆ ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿ ಕಾಣುವ '2nd PUC Result 2026' (ದ್ವಿತೀಯ ಪಿಯುಸಿ ಫಲಿತಾಂಶ 2026) ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ 3: ನಿಮ್ಮ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ನೀವು ಓದುತ್ತಿರುವ ವಿಷಯ ವಿಭಾಗವನ್ನು (stream) ಆಯ್ಕೆ ಮಾಡಿ ನಮೂದಿಸಿ, 'Submit' ಬಟನ್ ಒತ್ತಿ.
ಹಂತ 4: ಈಗ ನಿಮ್ಮ ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುತ್ತದೆ.
ಹಂತ 5: ರಿಸಲ್ಟ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ ಮತ್ತು ಮುಂದಿನ ಉಲ್ಲೇಖಕ್ಕಾಗಿ ಅದರ ಪ್ರಿಂಟ್ ತೆಗೆದುಕೊಳ್ಳಿ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶವನ್ನು ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು. ಉನ್ನತ ಶಿಕ್ಷಣ ಪಡೆದು, ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಿ. ದೇಶದಲ್ಲಿಯೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು (Marks Card)… pic.twitter.com/euWQAZrIGs
— School Education & Literacy Department Karnataka (@ShalaShikshana) April 9, 2026












Click it and Unblock the Notifications